ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸ್ಪ್ರಿಂಕ್ಲರ್'ಗೆ ಶೇ.90ರಷ್ಟು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ.

ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.

ತುಂತುರು ನೀರಾವರಿ ಉಪಕರಣಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿ ಪಡೆಯಬೇಕೆಂದು ಕೋರಿದೆ.

ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತಿದ್ದು, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ಕೆ.ಪಿ.ವೀರಣ್ಣ ಅವರು ಕೋರಿದ್ದಾರೆ.