Baraparihara-ಬರಪರಿಹಾರದ ಕುರಿತು ರಾಜ್ಯ ಸರ್ಕಾರದಿಂದ ಸುಳ್ಳು ಮಾಹಿತಿ-ಆರ್ ಅಶೋಕ್,ಹಾಗಾದರೆ ಯಾವುದು ಸುಳ್ಳು ಯಾವುದು ಸತ್ಯ?

<Krushirushi> <ಬರಪರಿಹಾರ> <Baraparihara> <ಬರಪರಿಹಾರ ಬಿಡುಗಡೆ> <Baraparihara bidugade> <ಬೆಳೆಹಾನಿ ಸ್ಟೇಟಸ್ 2024> <Belehani Status 2024> <Croploss Status 2024> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>

Baraparihara-ಬರಪರಿಹಾರದ ಕುರಿತು ರಾಜ್ಯ ಸರ್ಕಾರದಿಂದ ಸುಳ್ಳು ಮಾಹಿತಿ-ಆರ್ ಅಶೋಕ್,ಹಾಗಾದರೆ ಯಾವುದು ಸುಳ್ಳು ಯಾವುದು ಸತ್ಯ?

Baraparihara-ಬರಪರಿಹಾರದ ಕುರಿತು ರಾಜ್ಯ ಸರ್ಕಾರದಿಂದ ಸುಳ್ಳು ಮಾಹಿತಿ-ಆರ್ ಅಶೋಕ್


ಬರ ಪರಿಹಾರ ಬಿಡುಗಡೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ. ಆದರೆ, ಮಾನಗೆಟ್ಟ ಕಾಂಗ್ರೆಸ್ ತಪ್ಪು ವ್ಯಾಖ್ಯಾನ ಮಾಡಿ ಜಯವೆಂದು ಬಿಂಬಿಸಿಕೊಳ್ಳುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಚಾಟಿ ಬೀಸಿದರು.

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಅದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದಿದೆ. ಇದೇ ವಿಷಯವನ್ನು ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಪ್ರಸ್ತಾಪಿಸಿ, 'ನೆಕ್ಸ್ಟ್ ಮಂಡೆ ( ಏಪ್ರಿಲ್ 29) ಸಮ್ ಥಿಂಗ್ ವಿಲ್ ಬಿ ಹ್ಯಾಪನ್' ಎಂದಾಗ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಸಹಮತ ವ್ಯಕ್ತಪಡಿಸಿದ್ದಾರೆ. ಈ ಕೇಸ್ ನಲ್ಲಿ ವಾದ ಮಾಡುವ ಅಗತ್ಯವೇನಿಲ್ಲವೆಂದು ನ್ಯಾಯಾಲಯ ಹೇಳಿದೆ.

ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ, ತೊಂದರೆ ನೀಡುತ್ತಿದೆ ಎಂದು ರಾಜ್ಯದ ಪರ ವಕೀಲ ವಾದ ಮಾಡಿಲ್ಲ. ಸುಪ್ರೀಂ ಕೋರ್ಟ್ ಅವಕಾಶ ಕೊಟ್ಟಿಲ್ಲ. ವಾರದೊಳಗೆ ಬಿಡುಗಡೆ ಮಾಡಿ ಎಂದೂ ಆದೇಶಿಸಿಲ್ಲ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಮಾಡಿರುವ ಪ್ರಯತ್ನಗಳಿಗೆ ರಾಜ್ಯದ ಪರ ವಕೀಲ ಸಹಮತ ವ್ಯಕ್ತಪಡಿಸಿದರೆ, ವಾದ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಗೆ ನಿವೇದಿಸಿಕೊಂಡಿದ್ದಾರೆ.

ಆದರೆ, ಸುಪ್ರೀಂ ಕೋರ್ಟ್ ನಲ್ಲಿ ಜಯವಾಗಿದೆ. ವಾರದೊಳಗೆ ಪರಿಹಾರ ಧನ ಬಿಡುಗಡೆ ಮಾಡಲು ಆದೇಶಿಸಿದೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳನ್ನು ಸಮಾನವಾಗಿ ನೋಡಬೇಕಾಗುತ್ತದೆ. ತ್ವರಿತವಾಗಿ ಪರಿಹಾರ ನಿಧಿ ಬಿಡುಗಡೆ ಮಾಡಲು ಅನುಮತಿ ಕೋರಿ ಚುನಾವಣೆ ಆಯೋಗಕ್ಕೆ ಪತ್ರ ಬರೆದು, ಒಪ್ಪಿಗೆ ಪಡೆದಿದೆ. ಅದಕ್ಕಾಗಿ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಎಸ್‌ಡಿಆರ್‌ಎಫ್‌ ಅಡಿ ಈಗಾಗಲೇ ರೂ.700 ಕೋಟಿ ಕೊಟ್ಟಿದೆ. ಆ ಹಣದಲ್ಲೇ ರೂ.2,000 ಪರಿಹಾರ ನೀಡುತ್ತಿದೆ. ಆದರೆ, ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಹಣದ ಬಗ್ಗೆ ಯಾವುದೇ ಪ್ರಸ್ತಾಪ ಮಾಡುತ್ತಿಲ್ಲ? ಈ ರೂ.700 ಕೋಟಿಯಲ್ಲಿ ಶೇ 25 ರಷ್ಟು ಹಣವನ್ನು ರಾಜ್ಯ ಸರ್ಕಾರ ನೀಡಬೇಕು.

ಸಾಮಾನ್ಯವಾಗಿ ಬರಕ್ಕೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳಿಂದ ಹಣ ಬಂದ ಬಳಿಕವೇ ಪರಿಹಾರವನ್ನು ಕೊಡುವ ವ್ಯವಸ್ಥೆ ಮಾಡಲಾಗುತ್ತದೆ. ಹಿಂದಿನಿಂದಲೂ ಇದೇ ಪರಂಪರೆ ನಡೆದುಕೊಂಡು ಬಂದಿದೆ. ಆದರೆ, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಜಾರಿ ತಂದಿತು. ಅದಕ್ಕೆ ಯಾವುದೇ ತಯಾರಿ ಮಾಡಿಕೊಂಡಿರಲಿಲ್ಲ. ಇದರಿಂದಾಗಿ ಸರ್ಕಾರದ ಖಜಾನೆ ಖಾಲಿ ಆಗಿದೆ. ಯಾವುದೇ ಗ್ಯಾರಂಟಿ ಜನರಿಗೆ ತಲುಪಿಲ್ಲ. ಆದ್ದರಿಂದ ರೊಚ್ಚಿಗೆದ್ದಿದ್ದಾರೆ. ಹೀಗಾಗಿ ಜನರ ಗಮನ ಬೇರೆಡೆ ಸೆಳೆಯಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಿರಂತರ ಮಾಡುತ್ತಲೇ ಬಂದಿದೆ.

Croploss status 2024-ಬೆಳೆಹಾನಿ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/FarmerDeclarationReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ

ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು  ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ


ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ