Bele parihara-2.01 ಲಕ್ಷ ರೈತರ ಖಾತೆಗೆ 76.34 ಕೋಟಿ ಬೆಳೆ ಹಾನಿ ಪರಿಹಾರ ಜಮಾ
2024-25 ನೇ ಸಾಲಿನಲ್ಲಿ ಅಗಸ್ಟ್ ಕೊನೆಯ ವಾರ ಹಾಗೂ ಸೆಪ್ಟಂಬರ್ ತಿಂಗಳ ಮೊದಲನೆ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16373 ಹೆಕ್ಟೇರ್‍ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ 13.47 ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

Bele parihara-2.01 ಲಕ್ಷ ರೈತರ ಖಾತೆಗೆ 76.34 ಕೋಟಿ ಬೆಳೆ ಹಾನಿ ಪರಿಹಾರ ಜಮಾ
4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ, ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ರೂ. 76.34 ಕೋಟಿ ಪರಿಹಾರ ಈಗಾಗಲೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ರೈತವಾರು ಮಾಹಿತಿಯನ್ನು ಸಂರಕ್ಷಣಾ ಪೆೋರ್ಟನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಅಗಸ್ಟ್ ಕೊನೆಯ ವಾರ ಹಾಗೂ ಸೆಪ್ಟಂಬರ್ ತಿಂಗಳ ಮೊದಲನೆ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16373 ಹೆಕ್ಟೇರ್‍ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ 13.47 ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ