Bele parihara-ಬೆಳೆಹಾನಿಯಾದ ರೈತರಿಗೆ ಹೆಚ್ಚುವರಿ 8,500 ರೂಪಾಯಿ ಪರಿಹಾರ-ಸಿಎಂ ಸಿದ್ದರಾಮಯ್ಯ,ಯಾವ ಬೆಳೆಗೆ ಎಷ್ಟು ಪರಿಹಾರ ಚೆಕ್ ಮಾಡಿ
Bele parihara-ಬೆಳೆಹಾನಿಯಾದ ರೈತರಿಗೆ ಹೆಚ್ಚುವರಿ 8,500 ರೂಪಾಯಿ ಪರಿಹಾರ-ಸಿಎಂ ಸಿದ್ದರಾಮಯ್ಯ,ಯಾವ ಬೆಳೆಗೆ ಎಷ್ಟು ಪರಿಹಾರ ಚೆಕ್ ಮಾಡಿ

Bele parihara-ಬೆಳೆಹಾನಿಯಾದ ರೈತರಿಗೆ ಹೆಚ್ಚುವರಿ 8,500 ರೂಪಾಯಿ ಪರಿಹಾರ-ಸಿಎಂ ಸಿದ್ದರಾಮಯ್ಯ,ಯಾವ ಬೆಳೆಗೆ ಎಷ್ಟು ಪರಿಹಾರ ಚೆಕ್ ಮಾಡಿ
ರಾಜ್ಯದಲ್ಲಿ ಮಳೆ, ಪ್ರವಾಹದಿಂದಾಗಿ ಸಂಭವಿಸಿದ ಬೆಳೆಹಾನಿಗೆ NDRF ನಿಯಮದಂತೆ ಕೇಂದ್ರದಿಂದ ನೀಡಲಾಗುವ ಪರಿಹಾರದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್ ಗೆ 8500 ರೂ. ಸೇರಿಸಿ ನೊಂದ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕೇಂದ್ರದ ನೆರವಿಗೆ ಕಾಯದೆ ಸಮೀಕ್ಷೆ ಮುಗಿದ ಕೂಡಲೇ ರಾಜ್ಯದ ಪಾಲಿನ ಪರಿಹಾರ ನೀಡಲಾಗುವುದು ಎಂದು ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ತಿಳಿಸಿದ್ದಾರೆ.ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕಾರ್ಯಗಳ ಬಗ್ಗೆ ಸೂಚನೆ ನೀಡಿದ ಸಿಎಂ, NDRF ನಿಯಮದಡಿ ಖುಷ್ಕಿ ಜಮೀನಿಗೆ ಪ್ರತಿ ಹೆಕ್ಟೇರ್ ಗೆ 8500 ರೂ. ಪರಿಹಾರ ಇದ್ದು ಇದಕ್ಕೆ ಹೆಚ್ಚುವರಿಯಾಗಿ ರಾಜ್ಯದಿಂದ 8,500 ರೂ. ಸೇರಿಸಿ ಒಟ್ಟು 17000 ರೂ. ರೈತರಿಗೆ ನೀಡಲಾಗುವುದು.
ನೀರಾವರಿ ಜಮೀನಿಗೆ ನಿಯಮದ ಪ್ರಕಾರ ಪ್ರತಿ ಹೆಕ್ಟೇರ್ ಗೆ 17500 ರೂ. ಕೊಡಬೇಕಿದೆ ಇದಕ್ಕೆ ರಾಜ್ಯದಿಂದ ಹೆಚ್ಚುವರಿಯಾಗಿ 8500 ನೀಡಲಾಗುವುದು. ಬಹು ವಾರ್ಷಿಕ ಬೆಳೆಗಳಿಗೆ 22,500ರೂ. ನೀಡಲಿದ್ದು ಹೆಚ್ಚುವರಿಯಾಗಿ 8500 ರೂ. ಸೇರಿಸಿ ಒಟ್ಟು 31,000 ರೂ. ನೀಡಲಾಗುವುದು. ಇದರಿಂದ ಅತಿವೃಷ್ಟಿ ಪೀಡಿತ ರೈತರಿಗೆ ಹೆಚ್ಚುವರಿಯಾಗಿ 2 ಸಾವಿರ ಕೋಟಿ ರೂ. ಪರಿಹಾರ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.
Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.