Bele sala-37 ಲಕ್ಷ ರೈತರಿಗೆ 28 ಸಾವಿರ ಕೋಟಿ ಬೆಳೆಸಾಲ ವಿತರಣೆ,ನಿಮಗೇಷ್ಟು ಬೆಳೆಸಾಲ ವಿತರಣೆಯಾಗಿದೆ ಚೆಕ್ ಮಾಡಿ

Bele sala-37 ಲಕ್ಷ ರೈತರಿಗೆ 28 ಸಾವಿರ ಕೋಟಿ ಬೆಳೆಸಾಲ ವಿತರಣೆ,ನಿಮಗೇಷ್ಟು ಬೆಳೆಸಾಲ ವಿತರಣೆಯಾಗಿದೆ ಚೆಕ್ ಮಾಡಿ

Bele sala-37 ಲಕ್ಷ ರೈತರಿಗೆ 28 ಸಾವಿರ ಕೋಟಿ ಬೆಳೆಸಾಲ ವಿತರಣೆ,ನಿಮಗೇಷ್ಟು ಬೆಳೆಸಾಲ ವಿತರಣೆಯಾಗಿದೆ ಚೆಕ್ ಮಾಡಿ

Bele sala-37 ಲಕ್ಷ ರೈತರಿಗೆ 28 ಸಾವಿರ ಕೋಟಿ ಬೆಳೆಸಾಲ ವಿತರಣೆ,ನಿಮಗೇಷ್ಟು ಬೆಳೆಸಾಲ ವಿತರಣೆಯಾಗಿದೆ ಚೆಕ್ ಮಾಡಿ


ಸಿಎಂ ಸಿದ್ದರಾಮಯ್ಯ(Siddaramaiah) ಅಧ್ಯಕ್ಷತೆಯಲ್ಲಿ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಹಕಾರ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಲಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ (farmers) ರೂ. 28 ಸಾವಿರ ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ.

ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಹಕಾರ ಸಚಿವರಾಗಿದ್ದ ಕೆ.ಎನ್.ರಾಜಣ್ಣ ವಜಾಗೊಂಡ ನಂತರ ಮೊದಲ ಪ್ರಗತಿ ಪರಿಶೀಲನಾ ಸಭೆ ಇದಾಗಿದೆ. ರಾಜಣ್ಣ ವಜಾ ನಂತರ ಸಿಎಂ ಬಳಿಯೇ ಸಹಕಾರ ಖಾತೆ ಇದೆ. ಹೀಗಾಗಿ ಪ್ರಗತಿ ಪರಿಶೀಲನಾ ಸಭೆ ಮಾಡಿದರು.

ಸಭೆಯ ಮುಖ್ಯಾಂಶಗಳು ಹೀಗಿವೆ

ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.
ಅನ್ನಭಾಗ್ಯ ಅಕ್ಕಿ ಕೊಪ್ಪಳದಿಂದ ದುಬೈಗೆ ಕಳ್ಳ ಸಾಗಾಟ? 'ಟಿವಿ9' ವರದಿ ಬೆನ್ನಲ್ಲೇ ನಾಲ್ವರ ವಿರುದ್ಧ ಎಫ್​ಐಆರ್

ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.


ಕನ್ನಡ ಸಾಹಿತ್ಯ ಪರಿಷತ್‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ.
ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.
ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.


ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.

ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ.

Sala manna-ರೈತರ ಸಾಲಮನ್ನಾದ 300 ಕೋಟಿ ಬಾಕಿ ತಿರಿಸುತ್ತೇವೆ-ಸಿಎಂ ಸಿದ್ದರಾಮಯ್ಯ

ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan Waiver) ಮಾಡಿ ಬಾಕಿ ಉಳಿಸಿದ್ದ 300 ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಮುಂದಿನ ದಿನದಲ್ಲಿ ತೀರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೆಸರು ಪಡೆದುಕೊಂಡರು. ಆದರೆ ಬಾಕಿಯನ್ನು ನಮ್ಮ ಸರ್ಕಾರ ತೀರಿಸಬೇಕಾಗಿದೆ. ಹೆಸರು ಅವರಿಗೆ, ಹೊರೆ ಹೊತ್ತುಕೊಂಡಿದ್ದು ನಮ್ಮ ಸರ್ಕಾರ ಎಂದರು.

2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? ಹೀಗೆ ಚೆಕ್ ಮಾಡಿ-Bele sala manna status 

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ"(farmer) ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ