Bele sala manna list-ಕರ್ನಾಟಕದಲ್ಲಿ ಇಲ್ಲಿಯವರೆಗೂ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
How to check crop loan waiver list? <Krushirushi> <Bele sala manna list> <bele> <bele sala> <bele sala manna> <krushi sala> <krushi sala manna> <crop> <crop loan> <crop loan status> <crop loan wavier> <crop loan waiver status> <crop loan farmer list> <Karnatka bele sala manna list> <bele sala manna status> <ಬೆಳೆ> <ಬೆಳೆಸಾಲ> <ಬೆಳೆ ಸಾಲ ಮನ್ನಾ> <ಬೆಳೆ ಸಾಲ ಮನ್ನಾ ಸ್ಟೇಟಸ್> <ಬೆಳೆ ಸಾಲ ಮನ್ನಾ ಪಟ್ಟಿ> <ಬೆಳೆ ಸಾಲ ಮನ್ನಾ ಲಿಸ್ಟ್> <ರೈತ> <ಸಾಲ> <ಹಣ> <ಸಾಲಮನ್ನಾ> ಬ್ಯಾಂಕ್>
Bele sala manna list-ಕರ್ನಾಟಕದಲ್ಲಿ ಇಲ್ಲಿಯವರೆಗೂ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಕೃಷಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿರುವ ತೆಲಂಗಾಣ ಸಚಿವ ಸಂಪುಟ, 'ರೈತು ಭರೋಸಾ' ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಖಾತ್ರಿಪಡಿಸುವ ಸಲುವಾಗಿ ಸಂಪುಟ ಉಪಸಮಿತಿ ನೇಮಕ ಮಾಡಲು ಶುಕ್ರವಾರ ನಿರ್ಧರಿಸಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ, 'ವಿಧಾನಸಭೆ ಚುನಾವಣೆಗೂ ಮುನ್ನ ವರಂಗಲ್‌ನಲ್ಲಿ ಪ್ರಕಟಿಸಿದ 'ರೈತ ಘೋಷಣೆ'ಯಲ್ಲಿ ಹೇಳಿರುವಂತೆ ಕೃಷಿ ಸಾಲ ಮನ್ನಾ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ' ಎಂದರು.
'2018 ರ ಡಿಸೆಂಬರ್ 12ರಿಂದ 2023 ರ ಡಿಸೆಂಬರ್ 09 ರವರೆಗಿನ ಅವಧಿಯಲ್ಲಿ ರೈತರು ತೆಗೆದುಕೊಂಡಿರುವ ಕೃಷಿ ಸಾಲವನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ₹31 ಸಾವಿರ ಕೋಟಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ' ಎಂದರು.
ಹಾಗಾದರೆ ಕರ್ನಾಟಕದಲ್ಲಿ ಬೆಳೆಸಾಲ ಮನ್ನಾ ಸ್ಟೇಟಸ್ ಹೇಗಿದೆ?
ನೆರೆಯ ತೆಲಂಗಾಣದಲ್ಲಿ ₹2 ಲಕ್ಷದವರೆಗೆ
ರೈತರ ಸಾಲ ಮನ್ನಾ ಮಾಡಲು ಅಲ್ಲಿನ ಸರ್ಕಾರ ನಿರ್ಧಾರ
ಮಾಡಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ
ಮಾಡಿ ರೈತರನ್ನು ಋಣಮುಕ್ತರನ್ನಾಗಿಸಿ' ಎಂದು ವಿಧಾನಸಭೆ
ವಿರೋಧಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ
Belesala manna status 2024-ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ