Bele vime-ಈ ಜಿಲ್ಲೆಯ 7880 ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ

ಇದುವರೆಗೆ ರಾಜ್ಯದ 1.34 ಕೋಟಿ ಅರ್ಜಿಗಳಿಗೆ ಒಟ್ಟು 18,783 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Bele vime-ಈ ಜಿಲ್ಲೆಯ 7880 ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ

Bele vime-ಈ ಜಿಲ್ಲೆಯ 7880 ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ 

ಚಿತ್ರದುರ್ಗ (Chitradurga) ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ (Pradhan Mantri Fasal Bima Yojana) ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು (Crop Insurance Compensation) ಬಿಡುಗಡೆ ಮಾಡಲಾಗಿದೆ.

ಸಂಸದ ಗೋವಿಂದ ಕಾರಜೋಳ (Govinda Karajola) ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಆರ್.ಎನ್.ಕೆ. ಠಾಕೂರ್ ಅವರು ಲಿಖಿತ ಉತ್ತರ ನೀಡಿದ್ದಾರೆ. ಈ ಉತ್ತರದಲ್ಲಿ 2016ರಿಂದ ಕರ್ನಾಟಕದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದ್ದು, ಇದುವರೆಗೆ ರಾಜ್ಯದ 1.34 ಕೋಟಿ ಅರ್ಜಿಗಳಿಗೆ ಒಟ್ಟು 18,783 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಬಿಡುಗಡೆಯಾದ 12.40 ಕೋಟಿ ರೂ. ಪರಿಹಾರವು ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ಮಹತ್ವದ ಆರ್ಥಿಕ ನೆರವಾಗಿದ್ದು, ಅವರ ಜೀವನೋಪಾಯಕ್ಕೆ ಹೊಸ ಭರವಸೆ ನೀಡಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಅದೇ ರೀತಿ ನಿಮ್ಮ ಜಿಲ್ಲೆಯಲ್ಲಿ ನಿಮಗೇಷ್ಟು ಬೆಳೆವಿಮೆ ಜಮಾ ಆಗಿದೆ ಚೆಕ್ ಮಾಡಿ

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.