Bembala bele-ಈ ಬೆಳೆಯನ್ನು ಪ್ರತಿ ಕ್ವಿಂಟಲ್ ಗೆ 8 ಸಾವಿರ ರೂಪಾಯಿ ಬೆಂಬಲ ಬೆಲೆಗೆ ಖರೀದಿಸಲು ಪ್ರಾರಂಭಿಸಿದ ರಾಜ್ಯ ಸರ್ಕಾರ
<Krushirushi> <Msp> <MSP for paddy> <MSP for safflower> <MSP for lentil> <MSP for wheat> <MSP for barley> <ಭತ್ತದ ಕನಿಷ್ಟ ಬೆಂಬಲ ಬೆಲೆ> <ಸೋಯಾಬೀನ್> <ಉದ್ದು> <Msp for soyabean urd dal> <soyabean> <Urs dal> <MSP> <Minimum support price> <Bembala bele> <Bembala bele Yojane> <msp for green gram> <msp for sunflower> <ರೈತ> <ಹಣ> <ಸಂದಾಯ> <ಸಹಾಯಧನ> <ಬೆಂಬಲಬೆಲೆ> <ಹೆಸರುಕಾಳು> <ಸೂರ್ಯಕಾಂತಿ> <ಬೆಳೆ> <ಬೆಳೆಸುದ್ದಿ>
![Bembala bele-ಈ ಬೆಳೆಯನ್ನು ಪ್ರತಿ ಕ್ವಿಂಟಲ್ ಗೆ 8 ಸಾವಿರ ರೂಪಾಯಿ ಬೆಂಬಲ ಬೆಲೆಗೆ ಖರೀದಿಸಲು ಪ್ರಾರಂಭಿಸಿದ ರಾಜ್ಯ ಸರ್ಕಾರ](https://krushirushi.in/uploads/images/202502/image_870x_67a8b38fa3bbf.jpg)
Bembala bele-ಈ ಬೆಳೆಯನ್ನು ಪ್ರತಿ ಕ್ವಿಂಟಲ್ ಗೆ 8 ಸಾವಿರ ರೂಪಾಯಿ ಬೆಂಬಲ ಬೆಲೆಗೆ ಖರೀದಿಸಲು ಪ್ರಾರಂಭಿಸಿದ ರಾಜ್ಯ ಸರ್ಕಾರ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 8 ಸಾವಿರ ರೂ.ವಿನಂತೆ ತೊಗರಿ ಖರೀದಿಸಲು ರಾಜ್ಯದಲ್ಲಿ 330 ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.
ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದೆ.
ರೈತರು ತಮ ಹತ್ತಿರದ ಪಿಎಸಿಎಸ್/ಎಫ್‌ಪಿಒ/ಟಿಅಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಭಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹಧನ 450 ರೂ. ಪ್ರತಿ ಕ್ವಿಂಟಾಲಗೆ, ಸೇರಿ ಒಟ್ಟು 8,000 ರೂ. ಪ್ರತಿ ಕ್ವಿಂಟಾಲ ರಂತೆ ತೊಗರಿ ಖರೀದಿಸಲು ಅವರು ಭರವಸೆ ನೀಡಿದ್ದರು.
ಈ ಸಂಬಂಧ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಇದಕ್ಕೆ ಸಂಬಂಧಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.