Rabi crop-ಹಿಂಗಾರು ಬೆಳೆ ಬೆಳೆದ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ

<crop> <Rabi crop> <Agriculture department>

Rabi crop-ಹಿಂಗಾರು ಬೆಳೆ ಬೆಳೆದ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ

Rabi crop-ಹಿಂಗಾರು ಬೆಳೆ ಬೆಳೆದ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ


ಇಲಾಖೆಯಿಂದ 2025-26ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೊಪ್ಪಳ ತಾಲ್ಲೂಕಿನ ಹೋಬಳಿ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳೆಗಳನ್ನು ಬೆಳೆವಿಮೆಗೆ ನೋಂದಾಯಿಸಲು ರೈತರಿಗೆ ತಿಳಿಸಿದೆ.

ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಮಳೆ ಆಶ್ರಿತ ಮತ್ತು ನೀರಾವರಿ ಬೆಳೆಗಳಾದ ಜೋಳ ಹಾಗೂ ಸೂರ್ಯಕಾಂತಿ, ಮಳೆ ಆಶ್ರಿತ ಕುಸುಮೆ ಬೆಳೆಗೆ ವಿಮೆ ನೋಂದಾಯಿಸಲು ಡಿಸೆಂಬರ್ 1 ಕೊನೆಯ ದಿನವಾಗಿದೆ. ಮಳೆ ಆಶ್ರಿತ ಮತ್ತು ನೀರಾವರಿ ಗೋಧಿ ಬೆಳೆಗೆ ವಿಮೆ ನೋಂದಾಯಿಸಲು ಡಿಸೆಂಬರ್ 15 ಕೊನೆಯ ದಿನವಾಗಿದೆ. ಮಳೆ ಆಶ್ರಿತ ಮತ್ತು ನೀರಾವರಿ ಕಡಲೆ ಬೆಳೆಗೆ ವಿಮೆ ನೋಂದಾಯಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಶೇಂಗಾ, ಭತ್ತ ಹಾಗೂ ಸೂರ್ಯಕಾಂತಿಗೆ ವಿಮೆ ನೋಂದಾಯಿಸಲು 2026 ರ ಫೆಬ್ರವರಿ 27 ಕೊನೆಯ ದಿನವಾಗಿದೆ.

ಬೆಳೆವಿಮೆ ಪರಿಹಾರ ಲಾಭ ಪಡೆಯಲು ರೈತರು ಕಡ್ಡಾಯವಾಗಿ ಎಫ್‌ಐಡಿ ಯನ್ನು ಹೊಂದಿರಬೇಕು. ರೈತರು ಬಿತ್ತನೆ ಮಾಡುವ ಬೆಳೆಯನ್ನೇ ನೋಂದಾಯಿಸಬೇಕು. ತಮ್ಮ ಬೆಳೆಯನ್ನು ತಾವೇ ಖುದ್ದಾಗಿ ಬೆಳೆ ಸಮೀಕ್ಷೆಯನ್ನು ಮಾಡಬೇಕು. ತಮ್ಮ ದಾಖಲಾತಿಗಳಾದ ಪಹಣಿ, ಆಧಾರ್ ಕಾರ್ಡ್ ಮತ್ತು ಪಾಸ್‌ಬುಕ್ ಜೆರಾಕ್ಸ್ ಪ್ರತಿಗಳನ್ನು ಯಾವುದೇ ಕಾರಣಕ್ಕೂ ಇನ್ನೊಬ್ಬರಿಗೆ ನೀಡದೆ, ಖುದ್ದಾಗಿ ಬೆಳೆವಿಮೆ ನೋಂದಾಯಿಸಲು ಸೂಚಿಸಿದೆ.

ಜಿಲ್ಲಾವಾರು,ಬೆಳೆವಾರು ಬೆಳೆವಿಮೆ ದಿನಾಂಕ ಬಿಡುಗಡೆ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date  

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Rabi"

ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ