20 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸ್ಸು-Canceled ration card list

20 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸ್ಸು-Canceled ration card list

20 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸ್ಸು-Canceled ration card list

20 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸ್ಸು-Canceled ration card list

“ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.”
ಸಿದ್ದರಾಮಯ್ಯ, ಮುಖ್ಯಮಂತ್ರಿಗಳು

ಕಳೆದ ಜುಲೈ 8ರಂದು ವಿಧಾನಸೌಧದಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದರು.


ರಾಜ್ಯದಲ್ಲಿ ಶೇ 80ರಷ್ಟು (1.27) ಬಿಪಿಎಲ್ ಕುಟುಂಬಗಳಿದ್ದು, 4.37 ಕೋಟಿ ಜನರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದಾರೆ. ಹೊಸ ಕಾರ್ಡ್‌ಳಿಗೆ ಸಲ್ಲಿಕೆಯಾದ 2.95 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು, ಅನರ್ಹ ಕಾರ್ಡ್ ರದ್ದುಗೊಳಿಸಿ ಅವುಗಳ ಬದಲಾಗಿ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥ ಮಾಡುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿಗಳು ಕಳೆದ ಆರು ತಿಂಗಳಲ್ಲಿ ಒಮ್ಮೆಯೂ ಪಡಿತರ ಪಡೆಯದ ಕುಟುಂಬಗಳನ್ನು ಪತ್ತೆ ಹಚ್ಚುವಂತೆ ಆಹಾರ ಮತು ನಾಗರಿಕ ಪೂರೈಕೆ ಇಲಾಖೆಗೆ ನಿರ್ದೇಶನ ನೀಡಿದ್ದು,20 ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ.

ಅನರ್ಹರು ಬಿಪಿಎಲ್‌ ಪಡಿತರ ಚೀಟಿ ಪಡೆಯುವುದನ್ನು ತಪ್ಪಿಸಲು ಪಹಣಿ, ವಾಹನ ನೋಂದಣಿ, ನೌಕರರ ವಿವರಗಳನ್ನು ಪಡಿತರ ಚೀಟಿ ದತ್ತಾಂಶಗಳ ಜತೆ ಬೆಸೆಯಬೇಕು' ಎಂದು ಆಡಳಿತ ಸುಧಾರಣಾ ಆಯೋಗ-2 ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಂಟನೇ ವರದಿಯನ್ನು ಗುರುವಾರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಆಯೋಗ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಈ ಕುರಿತು ಮಾಹಿತಿ ನೀಡಿದರು.

ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದ್ದರೆ ಬಿಪಿಎಲ್‌ ಪಡಿತರ ಚೀಟಿ ಪಡೆಯುವಂತೆ ಇಲ್ಲ. ಕೃಷಿ ಭೂಮಿಯ ದತ್ತಾಂಶಗಳನ್ನು ಪಡಿತರ ಚೀಟಿಗಳ ದತ್ತಾಂಶಗಳ ಜತೆ ಸಮೀಕರಿಸಿದರೆ ಕೃಷಿ ಭೂಮಿ ಹೊಂದಿರುವವರ ವಿವರಗಳನ್ನು ಪರಿಶೀಲಿಸಲು ಸುಲಭವಾಗುತ್ತದೆ' ಎಂದು ಹೇಳಿದರು.

ಎಚ್‌ಆರ್‌ಎಂಎಸ್‌ ತಂತ್ರಾಂಶದಿಂದ ಸರ್ಕಾರಿ ನೌಕರರ ಮಾಹಿತಿ, ವಾಹನ ನೋಂದಣಿ ದತ್ತಾಂಶ, ಆಸ್ತಿ ನೋಂದಣಿ ವಿವರಗಳನ್ನು ಆಹಾರ ಇಲಾಖೆಯ ಪಡಿತರ ವ್ಯವಸ್ಥೆಗೆ ಜೋಡಿಸಬೇಕು. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ನಿಗದಿಪಡಿಸಿದ ಮಾನದಂಡ ಮತ್ತು ವಿಧಾನವನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಪರಿಗಣಿಸಬೇಕು. ಗ್ರಾಮೀಣ, ನಗರ ಪ್ರದೇಶಗಳ ಗ್ರಾಮ ಅಥವಾ ವಾರ್ಡ್‌ ಸಭೆಗಳಲ್ಲೇ ಬಿಪಿಎಲ್‌ ಕುಟುಂಬಗಳನ್ನು ಗುರುತಿಸಿ, ಅಂತಿಮ ಅನುಮೋದನೆ ಪಡೆಯಬೇಕು ಎಂಬ ಶಿಫಾರಸು ಮಾಡಲಾಗಿದೆ ಎಂದರು.

ಆದಾಯ ಪ್ರಮಾಣಪತ್ರ ವಿತರಣೆಗೆ ಏಕರೂಪದ ವಿಧಾನ ಅನುಸರಿಸಬೇಕು. ಒಂದು ಕುಟುಂಬದ ಎಲ್ಲ ಸದಸ್ಯರಿಗೂ ಪ್ರತ್ಯೇಕ ಆದಾಯ ಪ್ರಮಾಣಪತ್ರ ನೀಡ ಬಾರದು ಎಂದು ಹೇಳಿದರು.

ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ