Cancelled ration card list-20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ರದ್ದು-ಸಿಎಂ ಸಿದ್ದರಾಮಯ್ಯ, ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರಿದ್ದರೆ ಅನ್ನಭಾಗ್ಯ,ಗೃಹಲಕ್ಷ್ಮಿ ಹಣ ಬಂದ್

“ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.” ಎಂದು ಸಿಎಂ ಸಿದ್ದರಾಮಯ್ಯ, ತಿಳಿಸಿದ್ದಾರೆ

Cancelled ration card list-20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ರದ್ದು-ಸಿಎಂ ಸಿದ್ದರಾಮಯ್ಯ, ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರಿದ್ದರೆ ಅನ್ನಭಾಗ್ಯ,ಗೃಹಲಕ್ಷ್ಮಿ ಹಣ ಬಂದ್

Cancelled ration card list-20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ರದ್ದು-ಸಿಎಂ ಸಿದ್ದರಾಮಯ್ಯ,ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರಿದ್ದರೆ ಅನ್ನಭಾಗ್ಯ,ಗೃಹಲಕ್ಷ್ಮಿ ಹಣ ಬಂದ್

“ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.”
ಸಿದ್ದರಾಮಯ್ಯ, ಮುಖ್ಯಮಂತ್ರಿಗಳು

ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ

ಅನರ್ಹ ಬಿಪಿಎಲ್ ಕಾರ್ಡ್ (Ineligible BPL card) ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅನರ್ಹ ಕಾರ್ಡ್ ರದ್ದತಿಗೆ ತಯಾರಿ ನಡೆಯುತ್ತಿದೆ. ಬಡತನ ರೇಖೆಗಿಂತ ಮೇಲಿರುವ ಹಲವರು ಸೌಲಭ್ಯ ಪಡೆಯುತ್ತಿರುವುದರಿಂದ ಅರ್ಹರಿಗೆ ಸೌಲಭ್ಯ ತಲುಪುತ್ತಿಲ್ಲ.


ಹೀಗಾಗಿ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ಇಲಾಖೆ ಮುಂದಾಗಿದ್ದು, ಇದರಿಂದ 20 ಲಕ್ಷಕ್ಕೂ ಅಧಿಕ ಬಿಪಿಎಲ್‌ ಕಾರ್ಡ್‌ದಾರರಿಗೆ ಶಾಕ್ ಫಿಕ್ಸ್ ಎನ್ನಲಾಗಿದೆ.
ರಾಜ್ಯದಲ್ಲಿ ಹಾಲಿ 1,27,35,786 ಬಿಪಿಎಲ್ ಕಾರ್ಡ್ಗಳಿದ್ದು, 4,36,84,635 ಜನರು ಸೌಲಭ್ಯ ಪಡೆಯುತ್ತಿದ್ದಾರೆ. ಹೊಸದಾಗಿ ಬಿಪಿಎಲ್ ಕಾರ್ಡ್‌ಗಾಗಿ 3 ಲಕ್ಷ ಜನರಿಂದ ಅರ್ಜಿ ಸಲ್ಲಿಕೆಯಾಗಿದೆ. ಇದೀಗ ಅನರ್ಹ ಕಾರ್ಡ್ ರದ್ದು ಮಾಡಲು ಆಹಾರ ಇಲಾಖೆಗೆ ನಾಲ್ಕು ಇಲಾಖೆಗಳು ಸಾಥ್ ನೀಡುತ್ತಿವೆ.

ಬಿಪಿಎಲ್ ಕಾರ್ಡುದಾರರ ಹೆಸರಿನಲ್ಲಿ ವಾಹನಗಳು ಇದೆಯಾ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡುತ್ತಿದ್ದು, ಫಲಾನುಭವಿಗಳ ಹೆಸರಲ್ಲಿ ಭೂಮಿ ಎಷ್ಟಿದೆ ಎಂಬ ಮಾಹಿತಿಯನ್ನು ಕಂದಾಯ ಇಲಾಖೆ ನೀಡುತ್ತಿದೆ. ಇನ್ನು ಐಟಿ ಪಾವತಿ ಬಗ್ಗೆ ಐಟಿ ಇಲಾಖೆಯಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸರ್ಕಾರಿ ನೌಕರಿ, ಸರ್ಕಾರಿ ಪ್ರಾಯೋಜಿತ ಇಲಾಖೆ, ನಿಗಮ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವವರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.

ರಾಜ್ಯದಲ್ಲಿ ಎಷ್ಟು ಕಾರ್ಡ್ ರದ್ದಾಗುತ್ತೆ?
ಬಿಪಿಎಲ್ ಕಾರ್ಡ್ ಹೊಂದಿರುವವರಲ್ಲಿ ಹಲವರು ಜೀವನೋಪಾಯಕ್ಕಾಗಿ ಒಂದು ವಾಣಿಜ್ಯ ವಾಹನ ಹೊರತುಪಡಿಸಿ ಅದಕ್ಕಿಂತ ಹೆಚ್ಚು ವಾಹನ ಹೊಂದಿರುವುದು ಕಂಡುಬಂದಿದೆ. ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಹೆಚ್ಚಿನ ಆದಾಯ, ಭೂಮಿ ಹೊಂದಿರುವವರು ಕೂಡ ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಅಂತಹ 20 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.


ಯಾರ ಕಾರ್ಡ್ ರದ್ದಾಗುತ್ತೆ?
1. ವೈಟ್ ಬೋರ್ಡ್‌ನ ನಾಲ್ಕು ಚಕ್ರದ ವಾಹನ ಇದ್ದರೆ ಕಾರ್ಡ್ ರದ್ದು
2. ಐಟಿ ರಿಟರ್ನ್ಸ್ ಮಾಡುತ್ತಿದ್ದರೆ ಬಿಪಿಎಲ್ ಕಾರ್ಡ್ ರದ್ದು
3. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಇದ್ದವರ ಕಾರ್ಡ್ ರದ್ದು
4. ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವವರ ಕಾರ್ಡ್ ರದ್ದು
5. ಪ್ರತಿ ಮಾಹೆ 150 ಯುನಿಟ್‌ಗಳಿಂಗಿತಲೂ ಹೆಚ್ಚಿನ ವಿದ್ಯುಚ್ಛಕ್ತಿಯನ್ನು ಬಳಕೆ ಮಾಡುವ ಕುಟುಂಬದ ಕಾರ್ಡು ರದ್ದು.
6. ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷಕ್ಕಿಂತಲೂ ಹೆಚ್ಚಿದ್ದರೆ ಕಾರ್ಡು ರದ್ದು