Cyclone-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಭಾರಿ ಮಳೆ ಅಲರ್ಟ್
ಉತ್ತರ ಪ್ರದೇಶದಿಂದ ತಮಿಳುನಾಡಿನವರೆಗೆ ವಾಯುಭಾರ ಕುಸಿತ(Cyclone) ಉಂಟಾಗಿರುವ ಹಿನ್ನಲೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Cyclone-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಭಾರಿ ಮಳೆ ಅಲರ್ಟ್
ಉತ್ತರ ಪ್ರದೇಶದಿಂದ ತಮಿಳುನಾಡಿನವರೆಗೆ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ವರದಿಯ ಪ್ರಕಾರ, ವಾಯುಭಾರ ಕುಸಿತದಿಂದಾಗಿ ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಹಾಗೂ ಕರಾವಳಿಯ ಒಂದೆರಡು ಕಡೆ, ಉತ್ತರ ಕನ್ನಡದ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿಯಲ್ಲಿ ಮೇ 11 ಅಥವಾ 12ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಮೇ 11 ಅಥವಾ 12ರಿಂದ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಅಥವಾ ತುಂತುರು ಮಳೆಯ ಸಾಧ್ಯತೆಗಳಿದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ತುಂತುರು ಮಾತ್ರ ಇರಬಹುದು.
ಈಗಿನಂತೆ ಮೇ 10ನೇ ತಾರೀಕಿನ ನಂತರ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.
2025ನೇ ಸಾಲಿನ ಮುಂಗಾರು ನಿರೀಕ್ಷೆಯಂತೆ ಸಮಯಕ್ಕೆ ಸರಿಯಾಗಿ ಅಂದರೆ ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸುವ ವರದಿಗಳಿವೆ.
ಮೇಲಿನ ಮೇ 12ರ ನಕ್ಷೆಯಲ್ಲಿ ಮುಂಗಾರು ರೀತಿಯ ಮಾರುತಗಳ ಚಲನೆಯನ್ನು ಗಮನಿಸಬಹುದು.