FID is compulsory for crop insurance and crop loss compensation-ಜಂಟಿಖಾತೆಯಲ್ಲಿ ಇರುವ ಎಲ್ಲರಿಗೆ FID  ಕಡ್ಡಾಯ,ಮೊಬೈಲ್ ನಲ್ಲೇ ಮಾಡಿಕೊಳ್ಳಿ ನಿಮ್ಮ FID

<Krushirushi> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>

FID is compulsory for crop insurance and crop loss compensation-ಜಂಟಿಖಾತೆಯಲ್ಲಿ ಇರುವ ಎಲ್ಲರಿಗೆ FID  ಕಡ್ಡಾಯ,ಮೊಬೈಲ್ ನಲ್ಲೇ ಮಾಡಿಕೊಳ್ಳಿ ನಿಮ್ಮ FID

FID is compulsory for crop insurance and crop loss compensation-ಜಂಟಿಖಾತೆಯಲ್ಲಿ ಇರುವ ಎಲ್ಲರಿಗೆ FID  ಕಡ್ಡಾಯ,ಮೊಬೈಲ್ ನಲ್ಲೇ ಮಾಡಿಕೊಳ್ಳಿ ನಿಮ್ಮ FID

ಬೆಳೆವಿಮೆ(Bele vime),ಬೆಳೆಹಾನಿ ಪರಿಹಾರ(Bele parihara),ಬೆಂಬಲ ಬೆಲೆ(MSP) ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ(FID) ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ  ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್​, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

ಬೆಳೆ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ(FRUITS PORTAL) ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನಿಂದ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್‍ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಕೋರಲಾಗಿದೆ.

ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್‍ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.

ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.

ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು