Free sewing machine-ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Uchitha Holige yantra

<Krushirushi> <Free sewing machine> <Uchita holige yantra> <ರಾಟಿ> <ಹೊಲಿಗೆ ಯಂತ್ರ> <How to apply for free sewing machine> <sewing machine> <ಉಚಿತ ಹೊಲಿಗೆ ಯಂತ್ರ> <ಹಣ> <ಸಂದಾಯ> <ಸಹಾಯಧನ> <Free sewing machine 2024> <ಉಚಿತ ಹೊಲಿಗೆ ಯಂತ್ರ 2024> <Free sewing machine scheme>

Free sewing machine-ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Uchitha Holige yantra

Free sewing machine-ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Uchitha Holige yantra

ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಗ್ರಾ ಪ್ರಸ್ತಕ ಸಾಲಿಗೆ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತವಾಗಿ 192 ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಅರ್ಜಿಗಳನ್ನು ಆನ್‌ಲೈನ್ ವೆಬ್‌ಸೈಟ್ ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 06 ಕೊನೆಯ ದಿನವಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ರಾಮೀಣ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ಉಚಿತ ವಸತಿಯೊಂದಿಗೆ ಶಿಷ್ಯವೇತನ ರಹಿತ ತರಬೇತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ವಿದ್ಯುತ್‌ ಚಾಲಿತ ಹೊಲಿಗೆ ಯಂತ್ರ ವಿತರಿಸಲಾಗುವುದು.

ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು(Free sewing machine/uchitha holige yantra) ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷ ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳಿಗೆ ವಿವಿಧ ವಲಯಗಳಲ್ಲಿ ಸ್ವ-ಉದ್ಯೋಗ ಮಾಡಲು ಅರ್ಥಿಕವಾಗಿ ನೆರವು ನೀಡಲು ರಾಜ್ಯದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಿವಿಧ ನಿಗಮಗಳಿಂದ ಉಚಿತವಾಗಿ ಹೊಲಿಗೆ ಯಂತ್ರವನ್ನು (Free sewing machine scheme) ನೀಡಲು ಅರ್ಜಿ ಆಹ್ವಾನಿಸಲಾಗುತ್ತಿದ್ದು ಇದರಂತೆ ಈ ವರ್ಷವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

1) ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. 

2) ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪುದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, 

3) ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು(Free sewing machine documents)

ಅರ್ಜಿ ಸಲ್ಲಿಸುವುದು ಹೇಗೆ? How to apply for free sewing machine application online)

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 

https://sevasindhu.karnataka.gov.in/

ಅಥವಾ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಮೂಲಕ ಅರ್ಜಿ ಸಲ್ಲಿಸಿ

ಇದನ್ನೂ ಓದಿ

Bele vime-17.60 ಲಕ್ಷ ರೈತರಿಗೆ 2021 ಕೋಟಿ ಪರಿಹಾರ-ಕೃಷಿ ಸಚಿವ ಚಲುವರಾಯಸ್ವಾಮಿ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್-crop insurance - https://krushirushi.in/Bele-vime-crop-insurance-1689