Free vegetable seed kit-ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ ವಿತರಣೆಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದೆ

Free vegetable seed kit-ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ  ವಿತರಣೆಗೆ ಅರ್ಜಿ ಆಹ್ವಾನ

Free vegetable seed kit-ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ  ವಿತರಣೆಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.


ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್‌ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆ. 11 ರಿಂದ ತರಕಾರಿ ಬೀಜಗಳ ಕಿಟ್‌ನ್ನು ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-schemes

ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟ‌ರ್(Mini  tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ  ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಎಲ್ಲಿ ಅರ್ಜಿ ಸಲ್ಲಿಸಬೇಕು

ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಜಿದಾರರ ಅಧಾರ್ ಕಾರ್ಡ್‌ ಪ್ರತಿ.
• ಬ್ಯಾಂಕ್‌ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.


ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);

ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್‌ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn



ಹೆಚ್ಚಿನ ಮಾಹಿತಿಗಾಗಿ  ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು.