GruhaLakshmi Scheme: ಈ ದಿನಾಂಕದ ಒಳಗೆ ಹಣ ಬಿಡುಗಡೆ ಮಾಡುತ್ತೇವೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್
GruhaLakshmi Scheme: ಈ ದಿನಾಂಕದ ಒಳಗೆ ಹಣ ಬಿಡುಗಡೆ ಮಾಡುತ್ತೇವೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯದಲ್ಲಿ ಗೃಹಲಕ್ಷ್ಮಿ (GruhaLakshmi) ಹಣಕ್ಕೆ ಮಹಿಳೆಯರು ಪ್ರತಿ ತಿಂಗಳೂ ಕಾದು ಕುಳಿತುಕೊಳ್ಳುವಂತೆ ಆಗುತ್ತಿದೆ. ಸರಿಯಾದ ಸಮಯಕ್ಕೆ ಹಣ ಜಮೆ ಮಾಡದ ಕಾರಣ ಇದನ್ನೇ ನಂಬಿಕೊಂಡಿದ್ದ ಸಾಕಷ್ಟು ಮಹಿಳೆಯರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಲೇ ಇದ್ದಾರೆ.
ದಯಮಾಡಿ ನಮ್ಮ ಖಾತೆಗೆ ಹಣ ಜಮೆ ಮಾಡಿ ಎಂದು ಬೇಡಿಕೊಳ್ಳುತ್ತಿದ್ದಾರೆ.
ಈ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Minister Lakshmi Hebbalkar) ಮಾಹಿತಿ ನೀಡಿದ್ದು, ಶೀಘ್ರದಲ್ಲೇ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ರಾಜ್ಯದ 1.27 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ. ಈ ಹಣವನ್ನು ಇದೇ ತಿಂಗಳ 28ರೊಳಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಈವರೆಗೂ ತಲಾ 44,000 ರೂ. ಖಾತೆಗೆ ಹಾಕಲಾಗಿದೆ. ಇದೀಗ ಸೆಪ್ಟೆಂಬರ್ ತಿಂಗಳ 23ನೇ ಕಂತಿನ ಹಣ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ಒಂದು ವಾರದಲ್ಲಿ ಈ ಹಣವನ್ನು ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಇದರಿಂದಾಗಿ ಸಾಕಷ್ಟು ಬಡ ಮಹಿಳೆಯರು ನಿಟ್ಟುಸಿರು ಬಿಡುವಂತೆ ಆಗಿದೆ.
ಇದರೊಂದಿಗೆ ಗೃಹಲಕ್ಷ್ಮಿ ಯೋಜನೆ ಯಶಸ್ಸಾಗಿದ್ದು, ಇದರ ಮುಂದುವರೆದ ಭಾಗವಾಗಿ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ ಬ್ಯಾಂಕ್ ಅನ್ನು ಪ್ರಾರಂಭಿಸಲಾಗುತ್ತಿದೆ. ಈ ಮೂಲಕ ಮಹಿಳೆಯರನ್ನು ಆರ್ಥಿಕ ಸ್ವಾವಲಂಭಿಗಳನ್ನಾಗಿ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಮಹಿಳೆಯರಿಗೆ ಸಾಲ
'ಈ ಬ್ಯಾಂಕ್‌ನಲ್ಲಿ ಮಹಿಳೆಯರು ಷೇರುದಾರಾಗಬಹುದು. ಇಲ್ಲಿ ಅವರು ಪ್ರತಿ ತಿಂಗಳೂ ಸಹ 200 ರೂ.ಉಳಿತಾಯ ಮಾಡಬೇಕಿದೆ. 6 ತಿಂಗಳ ಉಳಿತಾಯದ ಬಳಿಕ ಅವರು ಸಾಲ ಪಡೆಯಲು ಅರ್ಹರಾಗುತ್ತಾರೆ. ಈ ಬ್ಯಾಂಕಿನ ಮುಖಾಂತರ ಕೃಷಿ, ಶಿಕ್ಷಣ, ಆರೋಗ್ಯಕ್ಕಾಗಿ ಸಾಲ ಪಡೆಯಲು ಅನುಕೂಲ ಮಾಡಿಕೊಡಲಾಗಿದೆ. ಇಲ್ಲಿ ಪ್ರತಿಯೊಬ್ಬರು 30 ಸಾವಿರದಿಂದ 3 ಲಕ್ಷದ ವರೆಗೂ ಸಾಲ ಪಡೆಯಬಹುದಾಗಿದೆ ಎಂದು ಹೇಳಿದರು.
ಅಕ್ಕಪಡೆ
ಈ ನಡುವೆ ರಾಜ್ಯದಲ್ಲಿ ಅಕ್ಕಪಡೆ ಸಹ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಅಕ್ಕಪಡೆ ಆರಂಭ ಮಾಡಲಾಗುತ್ತದೆ. ಇದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಇದು ಕಾರ್ಯ ನಿರ್ವಹಿಸಲಿದೆ. ಕಾಲೇಜು, ದೇವಾಲಯ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಡೆಗಳಲ್ಲಿಅಕ್ಕಪಡೆ ಗಸ್ತು ತಿರುಗಲಿದ್ದಾರೆ ಎಂದು ಹೆಬ್ಬಾಳ್ಕರ್ ಮಾಹಿತಿ ನೀಡಿದರು.

