ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ-Gruhalakshmi pending amount
<ಮೇ ತಿಂಗಳಲ್ಲಿ ಮೂರೂ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ "ಬಾಕಿ ಉಳಿದಿರುವ(Gruhalakshmi pending amount) ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು!” ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ-Gruhalakshmi pending amount
ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.
ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
Hi