ಮಿನಿ ಟ್ರ್ಯಾಕ್ಟರ್ ಸೇರಿದಂತೆ ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture department subsidy schemes
<Krushirushi> <ತೋಟಗಾರಿಕೆ ಇಲಾಖೆ> <Horticulture department schemes> <ತೋಟಗಾರಿಕೆ> <Horticulture> <Horticulture department> <ತೋಟಗಾರಿಕೆ ಇಲಾಖೆ ಯೋಜನೆಗಳು> <totagarike elake yojane> <totagarike elake> <mini tractor> <Fiber doti> <subsidy schemes> <ರೈತ> <ಹಣ> <ಸಂದಾಯ> <ಸಹಾಯಧನ> <ಬೆಳೆ ವಿಮೆ> <ಬೆಳೆ ಸುದ್ದಿ> <ಆಧಾರ್> <ಕೃಷಿಹೊಂಡ> <ಪ್ಯಾಕ್ ಹೌಸ್> <farm pond> <pack house> <Horticulture department schemes-2024> <National horticulture mission 2024>
ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-subsidy-schemes-2024
ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
• ಡ್ರಾಗನ್ ಪೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು
ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
• ಬ್ಯಾಂಕ್ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);
ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್‌ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ವಿವಿಧ ಯೋಜನೆಗಳು:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:(MGNAREGA)
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟಾ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ(farm pond), ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:(NHM)
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ(farm pond), ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್‍ಹೌಸ್(pack house) ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:(Pradan mantri Krishi sinchayi yojane)
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ (Drip irrigation) ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:
ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.