ಸೆ. 3-4 ಕ್ಕೆ ಮತ್ತೆ ಕರಾವಳಿಯಲ್ಲಿ ಮಳೆ ಆರ್ಭಟ ಜೋರು: ಆರೆಂಜ್ ಅಲರ್ಟ್, ಬೆಂಗಳೂರಿಗೆ ಮಳೆ ಮುನ್ಸೂಚನೆ ಏನಿದೆ?

ಸೆ. 3-4 ಕ್ಕೆ ಮತ್ತೆ ಕರಾವಳಿಯಲ್ಲಿ ಮಳೆ ಆರ್ಭಟ ಜೋರು: ಆರೆಂಜ್ ಅಲರ್ಟ್, ಬೆಂಗಳೂರಿಗೆ ಮಳೆ ಮುನ್ಸೂಚನೆ ಏನಿದೆ?

ಸೆ. 3-4 ಕ್ಕೆ ಮತ್ತೆ ಕರಾವಳಿಯಲ್ಲಿ ಮಳೆ ಆರ್ಭಟ ಜೋರು: ಆರೆಂಜ್ ಅಲರ್ಟ್, ಬೆಂಗಳೂರಿಗೆ ಮಳೆ ಮುನ್ಸೂಚನೆ ಏನಿದೆ?

ರಾಜ್ಯದ ಕರಾವಳಿಯಲ್ಲಿ ಈ ಒಂದು ವಾರ ವ್ಯಾಪಕವಾಗಿ ಮಳೆಯಾಗಲಿದ್ದು, ಒಳನಾಡಿನಲ್ಲಿ ಸಾಧಾರಣವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈ ಮೇಘಸ್ಪೋಟದ ಕಾರಣ ಬೆಂಗಳೂರಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಈ ವಾರ ಪೂರ್ತಿ ಯೆಲ್ಲೋ ಅಲರ್ಟ್ ಇದ್ದು, ಸೆ,3 ಹಾಗೂ 4 ಮಳೆ ಆರ್ಭಟ ಹೆಚ್ಚು ಇರುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಸೆ.2 ಮತ್ತು 3 ರಂದು ಸಾಧಾರಣ ಮಳೆಯಾಗಲಿದ್ದು, ಉಳಿದ ನಾಲ್ಕು ದಿನ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗಲಿದ್ದು, ಆನಂತರದ ಆರು ದಿನ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆ:

ತಮಿಳುನಾಡಿನ ಚೆನ್ನೈನಲ್ಲಿ ಭಾನುವಾರ ಮೇಘ ಸ್ಫೋಟವಾದ ಹಿನ್ನೆಲೆಯಲ್ಲಿ ಭಾರಿ ಮಳೆಯಾಗಿದೆ. ದಕ್ಷಿಣ ಬೆಂಗಳೂರಿನ ಭಾಗಗಳಲ್ಲಿ 2 ಗಂಟೆಗೂ ಹೆಚ್ಚು ಕಾಲ ಮಳೆ ಆರ್ಭಟಿಸಿದ್ದು, ತಗ್ಗು ರಸ್ತೆಗಳಲ್ಲಿ ನೀರು ನಿಂತಿತ್ತು. ವಾಹನ ಸವಾರರು ಟ್ರಾಫಿಕ್ ಜಾಂಗೆ ಸಿಲುಕಿ ಪರದಾಡಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಸುತ್ತಮುತ್ತ ಸೋಮವಾರ ಮತ್ತು ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಸೋಮವಾರ ಎಲ್ಲೆಲ್ಲಿ ಮಳೆ ಅಲರ್ಟ್?

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಗೆ ಇಂದು ಭಾರಿ ಮಳೆ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ನಾಳೆಯ ಹವಾಮಾನ

ಸೆಪ್ಟೆಂಬರ್ 2 ಮಂಗಳವಾರದಂದು, ಕರಾವಳಿಯ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಗೆ ಇಂದು ಭಾರಿ ಮಳೆ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಈ ನಡುವೆ, ಕರಾವಳಿಯ ಅನೇಕ ಕಡೆ, ಒಳನಾಡಿನ ಕೆಲವೆಡೆ ಭಾನುವಾರ ಮಳೆಯಾಗಿದೆ. ಪ್ರಮುಖವಾಗಿ, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಶಿವಮೊಗ್ಗ ಜಿಲ್ಲೆಯ ಆಗುಂಬೆ, ದ.ಕ. ಜಿಲ್ಲೆಯ ಮೂಡಬಿದರೆಯಲ್ಲಿ ತಲಾ 6 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.