Karnataka rain report-ಮುಂದಿನ 3 ದಿನ ಭಾರಿ ಮಳೆ, ಈ 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
<Karnataka rain report-ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ>

Karnataka rain report-ಮುಂದಿನ 3 ದಿನ ಭಾರಿ ಮಳೆ, ಈ 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಇಂದು ಮತ್ತು ನಾಳೆ ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೇ. 20, 21 ರಂದು ಬಾಗಲಕೋಟೆ, ಬೀದರ್, ಧಾರಾವಾಡ, ಗದಗ, ಹಾವೇರಿ ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಿಗೆ ಮುಂದಿನ ಎರಡೂರು ದಿನಕ್ಕೆ, ಕರಾವಳಿ ಜಿಲ್ಲೆಗಳಿಗೆ ಇಡೀ ವಾರಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿಮೇ23ರಿಂದಮಳೆ ಪ್ರಮಾಣಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಇತ್ತೀಚಿನ ವರದಿ ಪ್ರಕಾರ, ರಾಜ್ಯದಲ್ಲಿ ಮೇ.22 ರವರೆಗೂ ಭಾರೀ ಮಳೆ ಸುರಿಯಲಿದೆ. ಶುಕ್ರವಾರ (ಮೇ.17) ಸಂಜೆಯ ನಂತರದಿಂದ ಮೇ.22ರ ತನಕ ಬಿರುಸಿನ ಮಳೆ ಹಲವೆಡೆ ಸುರಿಯಲಿದೆ ಎಂದು ತಿಳಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ವರುಣಾರ್ಭಟದ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ದಕ್ಷಿಣ ಕರ್ನಾಟದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಗಾಳಿ ಮಳೆ ಸಂಭವಿಸಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ಯೆ ಲೆಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು ಯಾದಗಿರಿ, ದಾವಣಗೆರೆ, ಚಿತ್ರದುರ್ಗ ಮತ್ತು ಗಡಿಪ್ರದೇಶಗಳು ಯೆ ಅಲರ್ಟ್ ಗೆ ಒಳಪಟ್ಟಿವೆ.