Karnataka weather report-ಈ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ
ಕರ್ನಾಟಕದಲ್ಲಿ ಮೇ ತಿಂಗಳ ಮೊದಲ ವಾರದಲ್ಲೂ ಬಹುತೇ ಕ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದ್ದು, ಭಾನುವಾರದಂದು ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಿದೆ. ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಮುನ್ಸೂಚನೆ ನೀಡಲಾಗಿದೆ.

Karnataka weather report-20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ
ಕರ್ನಾಟಕದಲ್ಲಿ ಕಲಬುರಗಿ ನಗರದಲ್ಲಿಯೇ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಇದಲ್ಲದೇ ವಿಜಯಪುರ, ಬೀದರ್ ಜಿಲ್ಲೆಯ ಉಷ್ಣಾಂಶ ಪ್ರಮಾಣವೂ ಅಧಿಕವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಪ್ರಮಾಣವು ಏರಿಕೆಯಾಗಿತ್ತು. ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತ್ರ ತಾಪಮಾನವು ಗಮನಾರ್ಹ ಏರಿಕೆಯಾಗಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಕರ್ನಾಟಕದಲ್ಲಿ ಮೇ ತಿಂಗಳ ಮೊದಲ ವಾರದಲ್ಲೂ ಬಹುತೇ ಕ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದ್ದು, ಭಾನುವಾರದಂದು ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಿದೆ. ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಮುನ್ಸೂಚನೆ ನೀಡಲಾಗಿದೆ.
ಬೇಸಿಗೆ ಕಾಲದ ಮಾರ್ಚ್, ಏಪ್ರಿಲ್ ನ ನಂತರ ಮೇ ತಿಂಗಳಲ್ಲೂ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಭಾನುವಾರವೂ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ದಕ್ಷಿಣ ಕರ್ನಾಟಕ ಭಾಗದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ನಾಲ್ಕೈದು ಜಿಲ್ಲೆಗಳಲ್ಲಿ ಮಳೆಯಾಗಬಹುದು. ಆದರೆ ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಆಗೂ ಹಾಸನ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಾತ್ರ ಭಾರೀ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲೂ ಗುಡುಗು ಸಹಿತ ಹಗುರ ಮಳೆಯಾಗಬಹುದು ಎನ್ನುವ ಸೂಚನೆಗಳಿವೆ. ಕಲಬುರಗಿ ಜಿಲ್ಲೆಯಲ್ಲಿ ಬಿಸಿಲ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು. ಭಾನುವಾರ ಕಲಬುರಗಿ ಜಿಲ್ಲೆಯಲ್ಲೂ ಮಳೆಯಾಗಿ ವಾತಾವರಣ ತಂಪಾಗಿಸುವ ಲಕ್ಷಣಗಳಿವೆ.
ಮೇ 4ರ ಭಾನುವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಬಹುದು. ಗುಡುಗು ಸಹಿತ ಮಳೆಯೂ ಸುರಿಯಬಹುದು. ಗಾಳಿಯ ವೇಗವೂ ಹೆಚ್ಚಿರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ.
ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಮಧ್ಯಮಮಳೆಯಾಗಲಿದೆ. ಗುಡುಗು ಕೂಡ ಇರಲಿದೆ. ಬೀದರ್. ವಿಜಯಪುರ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಕರ್ನಾಟಕದ ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಆಗಬಹುದು. ಚಿಕ್ಕಮಗಳೂರು, ಬಳ್ಳಾರಿ, ಹಾಸನ, ಮಂಡ್ಯ, ಮೈಸೂರು, ಕೊಡಗು, ವಿಜಯನಗರ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗಬಹುದು.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಬೆಂಗಳೂರಿನ ಕೆಲ ಪ್ರದೇಶದಲ್ಲಿ ಸುರಿಯಬಹುದು. ಗಾಳಿಯ ವೇಗವೂ ಇರಲಿದೆ. ಗರಿಷ್ಠ ಹಾಗ ಕನಿಷ್ಠ ತಾಪಮಾನವು ಬೆಂಗಳೂರು ಭಾಗದಲ್ಲಿ ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು
ಕರ್ನಾಟಕದ ನಾನಾ ಭಾಗಗಳಲ್ಲಿ ಶುಕ್ರವಾರ ಹಾಗೂ ಶನಿವಾರವೂ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಅತ್ಯಧಿಕ ಮಳೆಯಾಗಿದೆ. ದಾವಣಗೆರೆ ನಗರ, ಚಿಕ್ಕಮಗಳೂರು, ಬೆಂಗಳೂರಿನ ಟಿಜಿಹಳ್ಳಿ, ಕೊಡಗಿನ ಸೋಮವಾರಪೇಟೆ, ಹಾವೇರಿ ಜಿಲ್ಲೆಯ ಹಿರೇಕೇರೂರು, ಶಿಗ್ಗಾಂವ್, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿ, ಹುಂಚದಕಟ್ಟೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಮಂಡ್ಯ ಜಿಲ್ಲೆಯ ನಾಗಮಂಗಲ, ಕೊಪ್ಪಳ ಜಲ್ಲೆಯ ಗಂಗಾವತಿ, ಮುನಿರಾಬಾದ್, ಯಲಬುರ್ಗಾ, ದಕ್ಷಿಣ ಕನ್ನಡದ ಬೆಳ್ತಂಗಡಿ, ಸುಳ್ಯ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ತರೀಕೆರೆ,ಜಯಪುರ, ಕೊಟ್ಟಿಗೆಹಾರ, ಮೈಸೂರು ಜಿಲ್ಲೆಯ ಎಚ್‌ಡಿಕೋಟೆ, ತುಮಕೂರು ಜಿಲ್ಲೆಯ ಕುಣಿಗಲ್, ಮಧುಗಿರಿ, ಕಿಬ್ಬನಹಳ್ಳಿ, ರಾಯಚೂರು ಜಿಲ್ಲೆಯ ಸಿಂಧನೂರ, ಹಾಸನ ಜಿಲ್ಲೆ ಅರಕಲಗೂಡು, ವಿಜಯಪುರ ನಗರ, ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟ, ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಮಳೆಯಾಗಿದೆ.
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೊಡದ ವಾತಾವರಣ ಇರಬಹುದು.
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 9ರಿಂದ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.
ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಯಚೂರು, ಯಾದಗಿರಿ ಜಿಲ್ಲೆಗಳ ಆಂದ್ರಾ ಗಡಿ ಭಾಗಗಳ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೇ 6ರ ನಂತರ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.