Karnataka weather report-ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ಕಡೆ ಮಳೆ ಇನ್ನೊಂದು ಕಡೆ ವಿಪರೀತ ಚಳಿ

ರಾಜ್ಯದ ಒಳನಾಡಿನಲ್ಲಿ ಚಳಿ ತಿವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ದಕ್ಷಿಣ ಕರ್ನಾಟಕದಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಲಿದೆ. ಹಲವೆಡೆ ಮಳೆ ಮುನ್ಸೂಚನೆ ಸಿಕ್ಕಿದೆ.

Karnataka weather report-ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ಕಡೆ ಮಳೆ ಇನ್ನೊಂದು ಕಡೆ ವಿಪರೀತ ಚಳಿ

Karnataka weather report-ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ರಾಜ್ಯದ ಒಳನಾಡಿನಲ್ಲಿ ಚಳಿ ತಿವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ದಕ್ಷಿಣ ಕರ್ನಾಟಕದಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಲಿದೆ. ಹಲವೆಡೆ ಮಳೆ ಮುನ್ಸೂಚನೆ ಸಿಕ್ಕಿದೆ.


ಜನವರಿ 26 ಸೋಮವಾರದಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಬಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ- ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಇದಲ್ಲದೆ ಜನವರಿ 27 ರಿಂದ ಜನವರಿ 31 ರವರೆಗೂ ಒಣಹವೆ ಇರಲಿದೆ.

ಬೆಂಗಳೂರು ಹವಾಮಾನ
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದೆ. ಬೆಳಗ್ಗೆ ಮಂಜು ಕವಿದ ವಾತಾವರಣ ಹಾಗೂ ತೀವ್ರ ಚಳಿ ಇರಲಿದೆ. ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ವಾತಾವರಣ ಇರಲಿದೆ.

ಹವಾಮಾನ ಸ್ಥಿತಿ:

ತಮಿಳುನಾಡು- ಶ್ರೀಲಂಕಾದ ಪಕ್ಕದ ಬಂಗಾಳಕೊಲ್ಲಿಯಲ್ಲಿ ಉಷ್ಣವಲಯ ಹರಡಿದೆ.

ರಾಜ್ಯದ ವಾತಾವರಣ ಮುನ್ಸೂಚನೆ

ಕರ್ನಾಟಕದ ಒಳನಾಡಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಕುಸಿಯಲಿದೆ. ದಕ್ಷಿಣ ಕರ್ನಾಟಕದಲ್ಲಿ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ. ಆದರೆ ಒಟ್ಟಾರೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಸಂಜೆ ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಜನವರಿ 26ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
28ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು. 

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 26ರಂದು ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ಒಣ ಹವೆ ಮುಂದುವರಿಯಲಿದೆ. 

ಉತ್ತರ ಕನ್ನಡ : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ಜನವರಿ 26ರಂದು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ. ಹಾಗೂ ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 26, 27ರಂದು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ ಮುಂದುವರಿದಿದ್ದರ ಪರಿಣಾಮದಿಂದ ತಮಿಳುನಾಡು ಕಡೆಯಿಂದ ತೇವಾಂಶ ಭರಿತ ಗಾಳಿಯು ಬೀಸುತ್ತಿರುವುದರಿಂದ ಈ ಮಳೆಯ ವಾತಾವರಣವು ಸೃಷ್ಟಿಯಾಗಿದೆ. ಜೊತೆಗೆ ಛಳಿಯ ಪ್ರಮಾಣವು ಕಡಿಮೆಯಾಗಿದೆ. 

ಉತ್ತರ ಭಾರತದಲ್ಲಿ ಈ ತಿಂಗಳ ಅಂತ್ಯದವರಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.