Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

<Krushirushi> <ಪಶುಸಂಗೋಪನಾ ಇಲಾಖೆ> <Vetarnary department> <Krushirushi> <National livestock mission 2024> <NLM scheme 2024> <NLM> <National livestock mission> <ರಾಷ್ಟ್ರೀಯ ಜಾನುವಾರು ಮಿಷನ್> <NLM scheme in Kannada> <sheep farming in kannada> <Goat farming> <dairy farming in Karnataka> <dairy> <Silage> <ರಸಮೇವು> <ರೈತ> <ಸಹಾಯಧನ> <koli> <koli sakanike> <kuri> <Kuri sakanike>

Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.


ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.

ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.



ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.

ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630 

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732