Belesala manna-ಸಾಲಮನ್ನಾ ನೀರಿಕ್ಷೆಯಲ್ಲಿದ್ದ ರೈತರಿಗೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

<Krushirushi> <ಬೆಳೆಸಾಲ ಮನ್ನಾ> <Belesala manna> <belesala baddimanna> <croploan interest wavie off> <ಬೆಳೆಸಾಲ> <croploan> <croploanwavier> <belesala> <belesalamanna> <loan waiver>

Belesala manna-ಸಾಲಮನ್ನಾ ನೀರಿಕ್ಷೆಯಲ್ಲಿದ್ದ ರೈತರಿಗೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

Belesala manna-ಸಾಲಮನ್ನಾ ನೀರಿಕ್ಷೆಯಲ್ಲಿದ್ದ ರೈತರಿಗೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕ್‌ಗಳಲ್ಲಿ ಪಡೆದಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ತುಸು ರಿಲೀಫ್‌ ನೀಡಲು ಕೈಗೊಂಡಿರುವ ಈ ನಿರ್ಧಾರವು ಪ್ರಾಥಮಿಕ ಸಹಕಾರ ಸಂಘ, ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಗಳು (ಪಿಕಾರ್ಡ್) ಮತ್ತು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಲ್ಲಿನ ಸುಸ್ತಿ ಸಾಲಗಳಿಗೆ ಅನ್ವಯವಾಗಲಿದೆ ಎಂದು ಹೇಳಲಾಗುತ್ತಿದೆ.


ಸಾಲಗಳ ಅಸಲು ಪಾವತಿಸಿದರೆ ಅದರ ಮೇಲಿನ ಬಡ್ಡಿ ಮನ್ನಾ ಆಗಲಿದೆ. ರೈತರು ಈ ಬಡ್ಡಿ ಮನ್ನಾ ಸೌಲಭ್ಯ ಪಡೆಯಬೇಕಾದರೆ ಇದೇ ತಿಂಗಳ 29 ರೊಳಗೆ ಸಾಲಗಳ ಅಸಲು ಮರುಪಾವತಿಸಬೇಕಿದೆ. 2023ರ ಡಿಸೆಂಬರ್ 31ಕ್ಕೆ ಸುಸ್ತಿಯಾಗಿರುವ ರೈತರ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಅನ್ವಯವಾಗುವಂತೆ ಕಳೆದ ಜ.20 ರಂದು ಸರಕಾರ ಆದೇಶ ಹೊರಡಿಸಿದೆ. ಈ ಕ್ರಮಕ್ಕೆ ಸಂಪುಟ ಸಭೆ ಘಟನೋತ್ತರ ಅನುಮೋದನೆ ನೀಡಿತು. ಈ ತೀರ್ಮಾನದಿಂದ ಕೃಷಿ ಸಾಲಗಳ ಮೇಲಿನ ಒಟ್ಟು 440.20 ಕೋಟಿ ರೂ. ಸುಸ್ತಿ ಬಡ್ಡಿ ಮನ್ನಾ ಆಗಲಿದೆ ಎಂದು ತಿಳಿದುಬಂದಿದೆ.


ಇದರಲ್ಲಿ ರೈತರು ರಾಜ್ಯದ ಸಹಕಾರ ಸಂಘಗಳು ಅಂದರೆ ಪ್ರಾಥಮಿಕ * ಕೃಷಿ ಪತ್ತಿನ ಸಹಕಾರ ಸಂಘ, ಲ್ಯಾಂಪ್ಸ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲ ಪಡೆದು ಸುಸ್ತಿಯಾಗಿರುವ ಸಾಲಗಳ ಡಿ.31ರವರೆಗಿನ ಕಂತುಗಳನ್ನು ಫೆ.20ರ ಒಳಗಾಗಿ ಪಾವತಿಸಿದರೆ ಅಂತಹವರ ಬಡ್ಡಿಯನ್ನು (ಮರುಪಾವತಿ ದಿನಾಂಕದವರೆಗೆ) ಸಂಪೂರ್ಣ ಮನ್ನಾ ಮಾಡಲಾಗುವುದು.

ಈ ಬಡ್ಡಿಯನ್ನು ಸಹಕಾರ ಸಂಘಗಳಿಗೆ ಸರ್ಕಾರದಿಂದ ಭರ್ತಿ ಮಾಡಿಕೊಡಲಾಗುವುದು ಎಂದು ತಿಳಿಸಲಾಗಿದೆ.
ಇದರಿಂದ 56,879 ಮಂದಿ ರೈತರ 440. 30 ಕೋಟಿ ರು. ಬಡ್ಡಿ ಮನ್ನಾ ಆಗಲಿದೆ. 2024ರ ಫೆ.20ರ ಒಳಗೆ ಸಂಬಂಧಪಟ್ಟ ಸಹಕಾರ ಸಂಘ ಹಾಗೂ ಬ್ಯಾಂಕ್‌ಗಳಿಗೆ ಸಂಪೂರ್ಣ ಸಾಲ ಬಾಕಿಯನ್ನು ಪಾವತಿಸಿದರೆ ಮಾತ್ರ ಮನ್ನಾ ಲಾಭ ಸಿಗಲಿದೆ ಎಂದು ಸಹಕಾರ ಇಲಾಖೆ ತಿಳಿಸಿದೆ.ರಾಜ್ಯ ಸರ್ಕಾರದ ಆದೇಶ ಆಧರಿಸಿ ಶನಿವಾರ ಎಲ್ಲಾ ಸಹಕಾರ ಬ್ಯಾಂಕ್ಗಳಿಗೂ ಸಹಕಾರ ಇಲಾಖೆಯು ಸುತ್ತೋಲೆ ಹೊರಡಿಸಿದೆ.


ಸುಸ್ತಿ ಸಾಲಗಾರರಾಗಿರುವ ರೈತರಿಗೆ 5 ದಿನಗಳೊಳಗಾಗಿ ತಿಳಿವಳಿಕೆಪತ್ರ ಕಳುಹಿಸಬೇಕು. ಸಾಲವಸೂಲಾತಿಗೆ ನಿಗದಿಪಡಿಸಿರುವ ಫೆ.20 ದಿನಾಂಕದಿಂದ 45 ದಿನಗಳೊಳಗಾಗಿ (ಏ.15ರ ಒಳಗಾಗಿ) ಬಡ್ಡಿ ಮನ್ನಾ ಬಗೆಗಿನ ಬಿಲ್ಲುಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಲ್ಯಾಂಪ್ಸ್, ಪಿಕಾರ್ಡ್, ಬ್ಯಾಂಕ್, ಡಿಸಿಸಿ ಬ್ಯಾಂಕ್‌ ಶಾಖೆಗಳು ಸಹಕಾರ ಇಲಾಖೆಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಈ ಬಡ್ಡಿ ಮನ್ನಾ ಯೋಜನೆಗೆ ತಗಲುವ ವೆಚ್ಚವನ್ನು ಸಹಕಾರ ಇಲಾಖೆಗೆ ಬಜೆಟ್‌ನಲ್ಲಿ ಒದಗಿಸಿರುವ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ (ಎಸ್ಸಿಪಿ-ಟಿಎಸ್‌ಪಿ) ಹಣದ ಮೂಲಕ ಭರಿಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.


ಬೆಳೆ ಸಾಲಕ್ಕೆ ಅನ್ವಯವಿಲ್ಲ ಬಡ್ಡಿ ಮನ್ನಾವು ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸುಸ್ತಿ ಸಾಲಗಳಿಗೆ ಮಾತ್ರ ಅನ್ವಯವಾಗಲಿದೆ. ಬೆಳೆ ಸಾಲವು ಅಲ್ಪಾವಧಿ ಸಾಲವಾಗಿದ್ದು, ಶೂನ್ಯ ಬಡ್ಡಿದರದಲ್ಲಿ ಬ್ಯಾಂಕ್ ಗಳು ನೀಡುತ್ತವೆ. ಹೀಗಾಗಿ ಅದಕ್ಕೆ ಬಡ್ಡಿ ಮನ್ನಾ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.ಮಧ್ಯಮಾವಧಿ ಸಾಲವನ್ನು 12 ತಿಂಗಳಿಂದ 36 ತಿಂಗಳಿಗೆ ಹಾಗೂ ದೀರ್ಘಾವಧಿ ಸಾಲವನ್ನು 10 ವರ್ಷದ ಅವಧಿವರೆಗೆ ನೀಡಲಾಗುತ್ತದೆ.

 ಸಾಲ ವಿವರ ಚೆಕ್ ಮಾಡುವುದು ಹೇಗೆ?

 ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

 ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.

ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ" ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ




Salamanna-ಯಾರಿಗೆಲ್ಲಾ ವಾಣೆಜ್ಯ ಬ್ಯಾಂಕ್ ಹಾಗೂ ಸೊಸೈಟಿ  ಸಾಲಮನ್ನಾ ಆಗಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-198 

30 laksha raithara khathege beelehani parihara-30 ಲಕ್ಷ ರೈತರ ಖಾತೆಗೆ ವಾರದಲ್ಲಿ ಮೊದಲ ಕಂತಿನ ಬರ ಪರಿಹಾರ: ಕೃಷ್ಣ ಬೈರೇಗೌಡ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಫೂಟ್ಸ್ ತಂತ್ರಾಂಶದಲ್ಲಿ ಶೇ.75ರಷ್ಟು ರೈತರ ಸಂಪೂರ್ಣ ಜಮೀನು ಮಾಹಿತಿಯನ್ನು ದಾಖಲಿಸಲಾಗಿದ್ದು, ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರದ ಹಣ ಬ್ಯಾಂಕ್‌ ಖಾತೆಗೆ ತಲುಪಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ

ಬರ ಪರಿಹಾರದ ಮೊದಲ ಕಂತಿನ ಹಣವನ್ನು ಶೀಘ್ರವೇ ರೈತರಿಗೆ ತಲುಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಜತೆಗಿನ ಮಾಸಿಕ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರೈತರಿಗೆ ಬರ ಹಾಗೂ ಮಳೆಹಾನಿ ಪರಿಹಾರ ತಲುಪಿಸುವ ವಿಚಾರದಲ್ಲೂ ಈ ಹಿಂದೆ ಭಾರೀ ಅವ್ಯವಹಾರಗಳು ನಡೆದಿವೆ. ಯಾರದೋ ಜಮೀನಿಗೆ ಇನ್ಯಾರೋ ಪರಿಹಾರ ಪಡೆದಿರುವ ಪ್ರಕರಣಗಳು ನನ್ನ ಗಮನಕ್ಕೆ ಬಂದಿದೆ. ಕಡೂರು ತಾಲೂಕೊಂದರಲ್ಲೇ 6 ಕೋಟಿ ರೂ. ಅಕ್ರಮವಾಗಿದೆ. ಹಣ ದುರ್ಬಳಕೆಯಾದವರ ಪಟ್ಟಿ ನನ್ನಲ್ಲಿದೆ. ಹಾನಗಲ್, ಶಿಗ್ಗಾಂವಿಯಲ್ಲೂ ಇಂತಹ ಪ್ರಕರಣಗಳು ಕಂಡುಬಂದಿದೆ ಎಂದರು.

ಈ ಹಿಂದೆ ಫೂಟ್ಸ್ ಡೇಟಾಬೇಸ್‌ನಲ್ಲಿ 7.7 ಲಕ್ಷ ರೈತರ
ಮಾಹಿತಿಯೇ ಇರಲಿಲ್ಲ. ಈಗ ಹೊಸದಾಗಿ
ಸೇರಿಸಲಾಗಿದೆ. 34 ಲಕ್ಷ ರೈತರ ಜಮೀನು
ಮಾಹಿತಿಯನ್ನು ಈ ತಂತ್ರಾಂಶದಲ್ಲಿ ದಾಖಲಿಸಲಾಗಿದೆ.
ಬಿಟ್ಟುಹೋಗಿರುವ ಅರ್ಹ ರೈತರ ಮಾಹಿತಿಯನ್ನು ಮತ್ತೆ
ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಳೆದ
15 ದಿನಗಳಿಂದ ನಮ್ಮ ಅಧಿಕಾರಿಗಳು ರಜೆ
ತೆಗೆದುಕೊಳ್ಳದೆ ಕೆಲಸ ಮಾಡಿದ್ದು, ರೈತರ ಹಣ
ದುರುಪಯೋಗವಾಗದಂತೆ ಅವರಿಗೆ
ತಲುಪಿಸಲಾಗುವುದು. ಈಗಾಗಲೇ ಈ ಪ್ರಕ್ರಿಯೆ
ಆರಂಭವಾಗಿದ್ದು, 15 ಲಕ್ಷಕ್ಕೂ ಅಧಿಕ ರೈತರಿಗೆ
ಈಗಾಗಲೇ ಹಣ ತಲುಪಿಸಲಾಗಿದೆ. ಮುಂದಿನ
ವಾರದೊಳಗೆ 30 ಲಕ್ಷ ರೈತರಿಗೆ ಪರಿಹಾರದ ಹಣ
ತಲುಪಲಿದೆ ಎಂದು ವಿವರಿಸಿದರು.


ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/FarmerDeclarationReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ

ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು  ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ


ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ



ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ  ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್​, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್‍ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಕೋರಲಾಗಿದೆ.

ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್‍ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.

ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.


FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?


ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.

 ನೋಂದಣಿ ಹೇಗೆ?


 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253