Karnataka budget 2024-ಕರ್ನಾಟಕ ಬಜೇಟ್ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇಷ್ಟು?
<Krushirushi> <ಕರ್ನಾಟಕ ಬಜೇಟ್2024> <Karnataka budget 2024> <budget 2024> <budget> <ಸಾಲಮನ್ನಾ> <belesala manna> <croploan wavier>

Karnataka budget 2024-ಕರ್ನಾಟಕ ಬಜೇಟ್ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇಷ್ಟು?
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ರಾಜ್ಯ ಬಜೆಟ್ 2024-25ಅನ್ನು ಮಂಡಿಸಿ, ಕೃಷಿ ಕ್ಷೇತ್ರಕ್ಕೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹಾಗಾದ್ರೇ ಅವರು ಇಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ.
ಕೃಷಿ
ಹೊಲವನುತ್ತು ಬಿತ್ತೋರು
ಬೆಳೆಯ ಕುಯ್ದು ಬೆವರೋರು
ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು
- ಪದ್ಮಶ್ರೀ ಡಾ|| ಸಿದ್ದಲಿಂಗಯ್ಯ
ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು;
ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು.
ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು.
ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು.
ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು.
ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.
ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ
1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು.
ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ
ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು.
ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು.
ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ PMFME ಯೋಜನೆಯಡಿಯಲ್ಲಿ 80 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.
ಕೃಷಿ ನಾವೀನ್ಯತೆಯ ಯುಗದಲ್ಲಿ ಪಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಉಪಗ್ರಹ ಚಿತ್ರ, ಸೆನ್ಸರ್ಗಳ ಬಳಕೆ ಮತ್ತು ಮಷಿನ್ ಲರ್ನಿಂಗ್ ನಂತಹ (Machine Learning) ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು.
ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ
ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ
ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ
Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.
ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು.
ಹೊಲವನುತ್ತು ಬಿತ್ತೋರು
ಬೆಳೆಯ ಕುಯ್ದು ಬೆವರೋರು
ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು
- ಪದ್ಮಶ್ರೀ ಡಾ|| ಸಿದ್ದಲಿಂಗಯ್ಯ
1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು.
ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ
ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ
Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಈ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253