Croploss compensation-3 ದಿನಗಳೊಳಗ ಎಲ್ಲಾ ರೈತರ ಖಾತೆಗೆ ಹಣ ಜಮಾ-ಕೃಷ್ಣ ಬೈರೆಗೌಡ, ನನ್ನ ಖಾತೆಗೆ ಜಮಾ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ

<Krushirushi> <ಬೆಳೆಹಾನಿ ಹಣ ಜಮಾ> <croploss compensation> <Belehani hana jama> <drought relief fund released> <Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>

Croploss compensation-3 ದಿನಗಳೊಳಗ ಎಲ್ಲಾ ರೈತರ ಖಾತೆಗೆ ಹಣ ಜಮಾ-ಕೃಷ್ಣ ಬೈರೆಗೌಡ, ನನ್ನ ಖಾತೆಗೆ ಜಮಾ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ

Croploss compensation-3 ದಿನಗಳೊಳಗ ಎಲ್ಲಾ ರೈತರ ಖಾತೆಗೆ ಹಣ ಜಮಾ-ಕೃಷ್ಣ ಬೈರೆಗೌಡ, ನನ್ನ ಖಾತೆಗೆ ಜಮಾ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ

https://youtu.be/Dwscq496w3w?si=0ZCrZMMer3yuuQIg 

ಸೈಲೇಜ್ ಹೇಗೆ ತಯಾರಿಸ್ತಾರೆ ಗೊತ್ತಾ?


ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ₹3,454.22 ಕೋಟಿಯನ್ನು ಸೋಮವಾರದಿಂದಲೇ ರೈತರ ಖಾತೆಗಳಿಗೆ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿದ್ದು, ಮುಂದಿನ 2-3 ದಿನಗಳಲ್ಲಿ ಎಲ್ಲ ರೈತರ ಖಾತೆಗಳಿಗೂ ಹಣ ಜಮೆ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಏ.26ರಂದು ₹3,454.22 ಕೋಟಿಯನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಕೇಂದ್ರದಿಂದ ಹಣ ಬಿಡುಗಡೆ ಆಗುತ್ತಿದ್ದಂತೆಯೇ ಅರ್ಹ ರೈತರಿಗೆ ಪರಿಹಾರ ಪಾವತಿಸಲು ತಕ್ಷಣ ಕ್ರಮಕೈಗೊಳ್ಳಲಾಗಿದೆ. ಆದರೆ, ಏ.27 ಮತ್ತು 28 ಎರಡೂ ರಜಾದಿನಗಳು ಆಗಿದ್ದವು. ಏ.29 ಮತ್ತು 30ರಂದು ಬೆಳೆ ಹಾನಿ ಪರಿಹಾರ ವಿತರಿಸಲು ಎಲ್ಲ ತಾಂತ್ರಿಕ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿತ್ತು. ಮೇ 1 ಕಾರ್ಮಿಕರ ದಿನಾಚರಣೆ ಆಗಿದ್ದರಿಂದ ಸರ್ಕಾರಿ ರಜೆ ಇತ್ತು ಎಂದು ಅವರು ಹೇಳಿದ್ದಾರೆ.
ಮೊದಲ ಹಂತದ ಬೆಳೆ ಹಾನಿ ಪರಿಹಾರ ನೀಡಿ ಇನ್ನುಳಿದ ಬಾಕಿ ಮೊತ್ತಕ್ಕೆ ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಅರ್ಹ ರೈತರಿಗೆ ಪಾವತಿ ಮಾಡಲು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಕೇಂದ್ರದ ಹಣ ಬಿಡುಗಡೆಗೊಳಿಸಲು ಮೇ 2ರಂದು ಆದೇಶ ಹೊರಡಿಸಲಾಗಿತ್ತು ಎಂದು ಕೃಷ್ಣ ಬೈರೇಗೌಡ ವಿವರಿಸಿದ್ದಾರೆ.


ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳ ಅನ್ವಯ ಮೊದಲ ಹಂತದ ಪರಿಹಾರವಾಗಿ 33,58,999 ರೈತರಿಗೆ ಒಟ್ಟು ₹636.45 ಕೋಟಿಯನ್ನು ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಪಾವತಿಸಲಾಗಿದೆ. ಈ ಪೈಕಿ ಅತಿ ಕಡಿಮೆ ಜಮೀನು ಹೊಂದಿರುವ 4,43,691 ರೈತರಿಗೆ ಎಸ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ಸಂಪೂರ್ಣ ಪರಿಹಾರ ಪಾವತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಇಲ್ಲಿಯವರೆಗೆ ಒಟ್ಟು 31,82,602 ರೈತರಿಗೆ ಸಂಪೂರ್ಣ ಬೆಳೆ ಹಾನಿ ಪರಿಹಾರ ಪಾವತಿಸಲಾಗಿದೆ. ಇನ್ನೂ 2 ಲಕ್ಷ ರೈತರಿಗೆ ಬರಪರಿಹಾರ ಮೊತ್ತವನ್ನು ಪಾವತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದಾರೆ.

ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಲಿದೆ


ಮಳೆಯಾಶ್ರಿತ ಬೆಳೆಗಳು: ₹8,500 
ನೀರಾವರಿ ಬೆಳೆಗಳು: ₹17,000 
ಬಹುವಾರ್ಷಿಕ ಬೆಳೆಗಳು: ₹22,500 

ಹೆಚ್ಚಿನ ಮಾಹಿತಿಗಾಗಿ ಹಾಗೂ ಬೆಳೆ ಪರಿಹಾರ ಹಣ ಖಾತೆಗೆ ಜಮಾ ಆಗದೆ ಇರುವ ಬಗ್ಗೆ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು ಸಾರ್ವಜನಿಕರು ದೂರುಗಳನ್ನು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ ಹಾಗೂ ಸಂಬಂಧಪಟ್ಟ ತಾಲ್ಲೂಕು ಕೃಷಿ ಅಧಿಕಾರಿ/ತಹಶೀಲ್ದಾರ್ ರವರ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ

ಈಗಾಗಲೇ ಜಮಾ ಆಗಿರುವ ಸ್ಟೇಟಸ್ ಹೀಗ್ ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ



Input subsidy for croploss-ಬೆಳೆಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ ಮಾಹಿತಿ ಸಿಗಲಿದೆ.

ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ

ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.