SSLC result 2024-ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ,ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್
<Krushirushi> <SSLC result> <SSLC result 2024> <SSLC> <ಎಸ್ ಎಸ್ ಎಲ್ ಸಿ> <ಎಸ್ ಎಸ್ ಎಲ್ ಸಿ ಫಲಿತಾಂಶ>

SSLC result 2024-ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ,ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ:25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
ಈ ವರ್ಷ ಸುಮಾರು 8.9 ಲಕ್ಷ ವಿದ್ಯಾರ್ಥಿಗಳು 2023-24ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಬರೆದಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಯಾವೆಲ್ಲ ವಿಧಾನಗಳಲ್ಲಿ ತಮ್ಮ ರಿಸಲ್ಟ್ ಚೆಕ್ ಮಾಡಬಹುದು, ಅಂಕಪಟ್ಟಿ ಪಡೆಯುವುದು ಹೇಗೆ ಎಂಬ ಮಾಹಿತಿಗಳನ್ನು ಇಲ್ಲಿ ತಿಳಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ವೆಬ್‌ಸೈಟ್ ಲಿಂಕ್ https://karresults.nic.in/ ಗೆ ಭೇಟಿ ನೀಡಿ.
ತಮ್ಮ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಡ್ಮಿಷನ್ ಟಿಕೆಟ್‌ನಲ್ಲಿರುವ ರಿಜಿಸ್ಟರ್ ನಂಬರ್ ಟೈಪಿಸಿ.
ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿ.
ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.