Crop survey:2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಸಮೀಕ್ಷೆ ಆ್ಯಪ್ ಬಿಡುಗಡೆ

<Krushirushi> <ಬೆಳೆ ಸಮಿಕ್ಷೆ> <ಬೆಳೆವಿಮೆ> <crop insurance> <ಬೆಳೆಸಮಿಕ್ಷೆ> <belevime> <crop survey> <PMFBY> <WBCIS> <Crop loss> <MSP>

Crop survey:2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಸಮೀಕ್ಷೆ ಆ್ಯಪ್ ಬಿಡುಗಡೆ

Crop survey:2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಸಮೀಕ್ಷೆ ಆ್ಯಪ್ ಬಿಡುಗಡೆ

ಕರ್ನಾಟಕ ಸರ್ಕಾರ ಈ ಆಡಳಿತ ಮತ್ತು ಕೃಷಿ ಇಲಾಖೆ ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ(crop survey) ರೈತರ ಆಪ್ ಬಿಡುಗಡೆ ಮಾಡಿದ್ದು, ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2023-24 ಆಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬಹುದು.


 ಸದರಿ ಮಾಹಿತಿಯನ್ನು ಬೆಳೆ ವಿಮೆ(crop insurance), ಬೆಳೆ ನಷ್ಟ ಪರಿಹಾರ(crop loss), ಬೆಂಬಲ ಬೆಲೆ(MSP) ಮತ್ತು ಸರ್ಕಾರದ ವಿವಿಧ ಯೋಜನೆ ಅಡಿ ಸವಲತ್ತುಗಳನ್ನು ಒದಗಿಸಲು ಆರ್ ಟಿ ಸಿ ಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಬೇಕು.

ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರ್‌ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಸರ್ವೆ ನಂಬರ್‌ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಾದ್ಯವಾಗುತ್ತದೆ.

ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ, ಆರ್‌.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ತಪ್ಪದೇ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರ ದಾಖಲಾಗದಿದ್ದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ.

ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ 2023-24 ಎಂಬ ಮೊಬೈಲ್‌ ಆ್ಯಪ್‌ ಗೂಗಲ್‌ ಪ್ಲೇಸ್ಟೋರ್‌ ನಿಂದ ಡೌನ್‌ಲೋಡ್‌ ಮಾಡಿ

https://play.google.com/store/apps/details?id=com.csk.farmer23_24.cropsurvey

 ನಂತರ ಆಧಾರ ಕ್ಯೂಆರ್‌ ಕೋಡ್‌ನ್ನು ಸ್ಕ್ಯಾನ್‌ ಮಾಡಿ ಮೊಬೈಲ್‌ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರಲಿದೆ. ಒಟಿಪಿಯನ್ನು ದಾಖಲಿಸಿ ಮೊಬೈಲ್‌ ಆ್ಯಪ್‌ನಲ್ಲಿ ಮೊದಲು ಮಾಸ್ಟರ್‌ ವಿವರಗಳನ್ನು ಡೌನ್‌ ಲೋಡ್‌ ಮಾಡಿಕೊಳ್ಳಬೇಕು, ನಂತರ ಗ್ರಾಮದ ಪಹಣಿ ಮತ್ತು ಜಮೀನಿನ ವಿವರ ಅಂದರೆ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್‌, ಮಾಲೀಕರ ಹೆಸರು ಆಯ್ಕೆಮಾಡಿ ಕ್ಷೇತ್ರವನ್ನು ನಮೂದಿಸಿ ಸರ್ವೇ ನಂಬರಿನ ಗಡಿರೇಖೆ ಒಳಗೆ ನಿಂತು ತಾವು ಬೆಳೆದ ಪ್ರತಿ ಬೆಳೆಗಳ ವಿವರ ದಾಖಲಿಸಿ ಪ್ರತಿ ಬೆಳೆಯ 2 ಛಾಯಾ ಚಿತ್ರ ತೆಗೆದು ಅಪ್‌‌ಲೋಡ್‌ ಮಾಡಬೇಕು ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮದ ಖಾಸಗಿ ನಿವಾಸಿ (ಪಿ.ಆರ್‌), ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾ ಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಟೋಲ್‌ ಫ್ರೀ ಸಂಖ್ಯೆ 8448447715ಗೆ ಸಂಪರ್ಕಿಸಬಹುದಾಗಿದೆ

ಇದನ್ನೂ ಓದಿ

Bele vime:ಮುಂಗಾರು ಬೆಳೆವಿಮೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ? - https://krushirushi.in/Krushirushi-1000-321 

Crop insurance-ನೀವು ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಎಷ್ಟು ಪರಿಹಾರ ಸಿಗಲಿದೆ? ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-322

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

Free electricity:ಕಳೆದ 12 ತಿಂಗಳ ಬಳಸಿದ ವಿದ್ಯುತ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-289 


Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253