Flood relief fund-ರಾಜ್ಯ ಸರ್ಕಾರದಿಂದ ನೆರೆಹಾನಿ ಪರಿಹಾರದಲ್ಲಿ ಭಾರಿ ಹೆಚ್ಚಳ ಮಾಡಿ ಆದೇಶ

<Krushirushi> <ಮನೆಹಾನಿ> <ಮನೆಹಾನಿಪರಿಹಾರ> <Manehani> <belehani> <ಬೆಳೆಹಾನಿ> <belevime> <ಬೆಳೆವಿಮೆ> <croploss> <cropinsurance> <PMFBY> <WBCIS>

Flood relief fund-ರಾಜ್ಯ ಸರ್ಕಾರದಿಂದ ನೆರೆಹಾನಿ ಪರಿಹಾರದಲ್ಲಿ ಭಾರಿ ಹೆಚ್ಚಳ ಮಾಡಿ ಆದೇಶ

ಪ್ರವಾಹದಿಂದ ಮನೆಗೆ ಕಳೆದುಕೊಂಡವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಮನೆಗಳ ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿ ಆದೇಶವನ್ನು ಹೊರಡಿಸಿದೆ

 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಅತಿವೃಷ್ಟಿ/ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯಕ್ಕೆ ಹಚ್ಚಿನ ಪರಿಹಾರ ನೀಡುವ ಬಗ್ಗೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ರಾಜ್ಯದಲ್ಲಿ 2023ನೇ ಸಾಲಿನ ಮುಂಗಾರು ಋತುವಿನಲ್ಲಿ ಬಿದ್ದಂತಹ ಭಾರಿ ಮಳೆಯಿಂದ ಹಾಗೂ ನದಿ ಹರಿವಿನಿಂದ ರಾಜ್ಯದ ಹಲವೆಡೆ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಇದರಿಂದ ಜನ-ಜಾನುವಾರು, ಮನೆ ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಿಂದ ವರದಿಯಾಗಿರುತ್ತದೆ. ಮೇಲೆ ಓದಲಾದ (1)ರಲ್ಲಿ ಕೇಂದ್ರೀಯ ಗೃಹ ಮಂತ್ರಾಲಯವು SDRF/NDRF ಮಾರ್ಗಸೂಚಿ ದರಗಳನ್ನು ಘೋಷಿಸಿದೆ.

ರಾಜ್ಯದಲ್ಲಿ ಪುಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ವರೆಗೆ) ಅತಿವೃಷ್ಟಿ/ಪ್ರವಾಹದಿಂದ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, ಇದರಿಂದ ಜನ-ಜಾನುವಾರು, ಮನೆ ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿಯಾಗಿರುತ್ತದೆ. ಈ ಕುರಿತು ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿರುತ್ತಾರೆ. ಮೇಲೆ ಓದಲಾದ (2)ರ ಸರ್ಕಾರದ ಆದೇಶಗಳ ಅನುಸಾರ 2022ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ/ಪುವಾಹದಿಂದ ಮನೆಗಳು ಹಾನಿಯಾದಂತಹ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯಲ್ಲಿ ನಿಗಧಿಪಡಿಸಿರುವ ದರಕ್ಕಿಂತ ಹೆಚ್ಚುವರಿಯಾಗಿ ಪರಿಷ್ಕೃತ ದರದಲ್ಲಿ ಪರಿಹಾರವನ್ನು ಪಾವತಿಸಿರುವಂತೆ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಮನ ಹಾನಿ ಪ್ರಕರಣಗಳಿಗೆ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲು ಸರ್ಕಾರವು ನಿರ್ಧರಿಸಿ ಈ ಕೆಳಕಂಡಂತೆ ಆದೇಶಿಸಿದೆ. ಸರ್ಕಾರದ ಆದೇಶ ಸಂಖ್ಯೆ: ಕಂಇ 243 ಟಿಎನ್‌ಆರ್ 2023; ಬೆಂಗಳೂರು, ದಿನಾಂಕ: 03-08-2023. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023ನೇ ಸಾಲಿನ ಮುಂಗಾರು ಋತುವಿನ (1ನೇ ಜೂನ್ ರಿಂದ 30ನೇ ಸಪ್ಟೆಂಬರ್ ವರೆಗೆ) ಅತಿವೃಷ್ಟಿ/ ಪ್ರವಾಹದಿಂದ ಮನೆಗಳು ಹಾನಿಯಾದಂತಹ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯಲ್ಲಿ ನಿಗಧಿಪಡಿಸಿರುವ ದರಕ್ಕಿಂತ ಈ ಕೆಳಕಂಡಂತೆ ಹೆಚ್ಚುವರಿಯಾಗಿ ಪರಿಷ್ಕೃತ ದರದಲ್ಲಿ ಪರಿಹಾರವನ್ನು ಪಾವತಿಸಲು ಮಂಜೂರಾತಿ ನೀಡಿ ಆದೇಶಿಸಿದೆ.

1 ಶೇ.75ಕ್ಕಿಂತ ಹೆಚ್ಚು ಸಂಪೂರ್ಣ ಮನೆ ಹಾನಿ ವರ್ಗ ಎ
1,20,000/-
3,80,000/-
5,00,000/-

2 ಶೇ.25 ರಿಂದ ಶೇ.75 ರಷ್ಟು ತೀವ್ರು ಮನೆ ಹಾನಿ - 'ಬಿ1' ವರ್ಗ (ದುರಸ್ತಿ)
1,20,000/-
1,80,000/-
3,00,000/-


3. ಶೇ.25 ರಿಂದ ಶೇ.75 ರಷ್ಟು ತೀವ್ರ ಮನೆ ಹಾನಿ - 'ಬಿ2'ವರ್ಗ (ಕೆಡವಿ ಹೊಸದಾಗಿ ನಿರ್ಮಿಸುವುದು)
1,20,000/-
3,80,000/-
5,00,000/-

4 ಶೇ.15-25 ರಷ್ಟು ಭಾಗಶಃ ಮನೆ ಹಾನಿ - 'ಸಿ' ವರ್ಗ
6,500/-
43,500/-
50,000/-


ಇದೇ ವೇಳೆ ಅತಿವೃಷ್ಟಿ / ಪ್ರವಾಹದಿಂದಾಗಿ ಮನೆಹಾನಿ ಆದ ನೆರೆ ಸಂತ್ರಸ್ತರಿಗೆ ಮೇಲ್ಕಂಡ ಪರಿಷ್ಕೃತ ದರದಲ್ಲಿ ಪರಿಹಾರವನ್ನು ಈ ಕೆಳಕಂಡ ಷರತ್ತುಗಳನ್ವಯ ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದ. ಷರತ್ತುಗಳು:

1.2023ನೇ ಸಾಲಿನ ಮುಂಗಾರುನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ವರೆಗೆ) ಅತೀವೃಷ್ಟಿ/ಪವಾಹದಿಂದ ಮನೆಹಾನಿ ಉಂಟಾದಲ್ಲಿ ಜಿಲ್ಲಾಧಿಕಾರಿಗಳು ಜಂಟಿ ತಂಡ ರಚಿಸಿ ತಂಡದವರಿಂದ ಸಂತ್ರಸ್ತರ ವಿವರಗಳನ್ನು ಪಡೆದು ಜಿಲ್ಲಾಧಿಕಾರಿಗಳು ನಿಯಮಾನುಸಾರ ಎ, ಬಿ1, ಬಿ2 ಅಥವಾ ಸಿ ವರ್ಗಕ್ಕೆ ಸೀರಿಸುವ ಬಗ್ಗೆ ಅರ್ಹತೆಯನ್ನು ಪರಿಶೀಲಿಸಿ ಅನುಮೋದಿಸಿದ ಫಲಾನುಭವಿಗಳ ವಿವರಗಳನ್ನು RGHCL ತಂತ್ರಾಂಶದಲ್ಲಿ ಕಡ್ಡಾಯವಾಗಿ ದಾಖಲಿಸುವುದು.ಜಿಲ್ಲಾಧಿಕಾರಿಗಳು ಎ, ಬಿ1 ಮತ್ತು ಬಿ2 ವರ್ಗದ ಮನೆಗಳ ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯನ್ವಯ ಮೊದಲನೇ ಕಂತು ರೂ. 1.20 ಲಕ್ಷಗಳನ್ನು ಅರ್ಹ ಫಲಾನುಭವಿಗಳ ಆಧಾರ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡತಕ್ಕದ್ದು.ಮುಂದಿನ ಕಂತುಗಳ ಅನುದಾನವನ್ನು ನಿಯಮಾನುಸಾರ ಪ್ರಗತಿಯನುಸಾರ RGHCL ಸಂಸ್ಥೆಯಿಂದ ಭರಿಸಲಾಗುವುದು.ಜಿಲ್ಲಾಧಿಕಾರಿಗಳು ಸಿ ವರ್ಗದಲ್ಲಿ ಅರ್ಹರಿರುವ ಮನಹಾನಿ ಫಲಾನುಭವಿಗಳಿಗೆ ತಲಾ ರೂ. 50,000/- ರಂತೆ (SDRF ಮಾರ್ಗಸೂಚಿಯನ್ವಯ ರೂ. 6500/- ಸೇರಿದಂತೆ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ನಿಯಮಾನುಸಾರ ಅರ್ಹ ಫಲಾನುಭವಿಗಳ ಆಧಾರ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡತಕ್ಕದ್ದು.

2.ನಿಯಮಾನುಸಾರ ಜಂಟಿ ಸ್ಥಳ ತನಿಖೆಯ ವರದಿ ಬಂದು ಜಿಲ್ಲಾಧಿಕಾರಿಗಳು ಅರ್ಹತೆ ಬಗ್ಗೆ ಪರಿಶೀಲಿಸಿದ 20 ದಿನದೊಳಗೆ ಪರಿಹಾರ ಪಾವತಿಸುವುದು.


3. ಮನೆಹಾನಿ ಪರಿಹಾರ ಪಾವತಿಯಾಗಿರುವ ಫಲಾನುಭವಿಗಳ ವಿವರವನ್ನು ಜಿಲ್ಲಾಧಿಕಾರಿಗಳು ಜಿಲ್ಲೆಯ ಅಧಿಕೃತ ಜಾಲತಾಣದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪಕಟಿಸುವುದು. ಸದರಿ ಮಾಹಿತಿಯನ್ನು ತಾಲ್ಲೂಕು ಕಛೇರಿಯಲ್ಲಿ ಹಾಗೂ ಗ್ರಾಮ ಪಂಚಾಯತ್‌ಗಳ ಕಛೇರಿಗಳಲ್ಲಿ ಸಹ ಸಾರ್ವಜನಿಕರ ಮಾಹಿತಿಗಾಗಿ ಪುಕಟಿಸುವುದು.


4. ಮನೆಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತ ಅರ್ಹತೆಯನ್ನು ಹಾಗು ಮಾಹಿತಿಯನ್ನು ನಮೂದಿಸುವುದರಲ್ಲಿ ಏನಾದರೂ ಲೋಪದೋಷಗಳು ಉಂಟಾದಲ್ಲಿ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು.


5. ಸಂತ್ರಸ್ತರಿಗೆ ಪರಿಹಾರ ವಿತರಿಸಿಸುವ ಕುಟುಂಬವಾರು ವೆಚ್ಚದ ಲೆಕ್ಕಗಳನ್ನು ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ನಿರ್ವಹಿಸತಕ್ಕದ್ದು ಮತ್ತು ವೆಚ್ಚದ ಬಳಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

ಈ ಆದೇಶವನ್ನು ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ: ಆಇ 548 ವೆಚ್ಚ-7/2023, ದಿನಾಂಕ: 01.08.2023 ನೀಡಿರುವ ಸಹಮತದನ್ವಯ ಹೊರಡಿಸಿದೆ.

ಮನೆ ಹಾನಿಯಾದ ತಕ್ಷಣ ಮನೆಹಾನಿಯಾದ ಫೋಟೊ ಹಾಗೂ ದಾಖಲೆಯೊಂದಿಗೆ ತಾಲೂಕು ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕಂದಾಯ ಇಲಾಖೆಯನ್ನು ಸಂಪರ್ಕಿಸಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ರಾಜ್ಯ ಸರ್ಕಾರದಿಂದ ಮಳೆಯಿಂದ ಉಂಟಾದಂತ ಅತಿವೃಷ್ಠಿ ಹಾಗೂ ಪ್ರವಾಹದಂತ ಹಾನಿಗೆ ನೀಡಲಾಗುತ್ತಿದ್ದಂತ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ. 


ಈ ಸಂಬಂಧ ಪರಿಷ್ಕೃತ ದರವನ್ನು ಜಾರಿ ಮಾಡಿ ಸರ್ಕಾರ ಆದೇಶಿಸಿದ್ದು, 2023-24ನೇ ಸಾಲಿನಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ನೀಡುವ ಇನ್‌ಪುಟ್ ಸಬ್ಸಿಡಿ ಪರಿಷ್ಕರಿಸಿ ಆದೇಶ ಹೊರಡಿಸಿದೆ.

ಪ್ರತಿವರ್ಷ ಮುಂಗಾರು ಹಾಗೂ ಹಿಂಗಾರು ಋತುವಿನಲ್ಲಿ ಭಾರಿ ಮಳೆಯಿಂದ ಹಾಗೂ ನದಿ ಹರಿವಿನಿಂದ ಉಂಟಾಗುವ ಪ್ರವಾಹದಿಂದ ಜನ-ಜಾನುವಾರು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿ ಆಗುತ್ತದೆ ಎಂದಿದೆ.

ಪ್ರತಿ ವರ್ಷ ಬೆಳೆ ಹಾನಿ ಆಗುವ ಪ್ರಕರಣಗಳಿಗೆ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಗಳಂತೆ ಅರ್ಹ ಪ್ರಕರಣಗಳಿಗೆ ಮಾತ್ರ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲಾಗುತ್ತಿದೆ. 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರವಾಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್ / ಎನ್‌ಡಿಆ‌ ಎಫ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಪರಿಷ್ಕೃತ ದರದಲ್ಲಿ ನೀಡಿರುವ ಪರಿಹಾರದಂತೆ ಬೆಳೆ ಹಾನಿಯಾದ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಇನ್‌ಪುಟ್ ಸಬ್ಸಿಡಿ ಮೊತ್ತವನ್ನು ಗರಿಷ್ಠ 2 ಹೆಕ್ಟೇರ್‌ಗೆ ಸೀಮಿತಗೊಳಿಸಿ ಪರಿಷ್ಕೃತ ದರದಲ್ಲಿ ಪಾವತಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ

ಮಳೆಯಾಶ್ರಿತ ಬೆಳೆಗಳಿಗೆ ಮಾರ್ಗಸೂಚಿ ದರ 8,500 ರೂ. ಇದ್ದು ಅದನ್ನು 13,600 ರೂ.ಗೆ ನೀರಾವರಿ ಬೆಳೆಗಳಿಗೆ 17,000 ರೂ.ಗಳಿಂದ 22,500 ರೂ.ಗಳಿಗೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 22,000 ರೂ.ಗಳಿಂದ 28000 ರೂ.ಗೆ ಪರಿಷ್ಕರಿಸಿ, ಆದೇಶ ಹೊರಡಿಸಿದೆ.

ಬೆಳೆಹಾನಿ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ತುಂಬಿ,ಬೆಳೆಹಾನಿಯಾದ ಫೋಟೊ,ಆಧಾರ್ ಕಾರ್ಡ್,ಉತಾರ/ಪಹಣೆ,ಬ್ಯಾಂಕ್ ಫಾಸ್ ಬುಕ್ ನ್ನು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಿ

ಬೆಳೆಹಾನಿ ಪರಿಹಾರ ನಿಮ್ಮ ಖಾತೆಗೆ ಜಮಾ ಆಗಿರುವ ಕುರಿತು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿ.

https://landrecords.karnataka.gov.in/PariharaPayment/.

ವೆಬ್ ಸೈಟ್ open ಆದ ಮೇಲೆ ಆಧಾರ ಸಂಖ್ಯೆ ಮೇಲೆ click ಮಾಡಿ.


ನಂತರ Calamity Type "Flood" ಅಂತ select ಮಾಡಿ,Year"2023-24" select ಮಾಡಿ.
ನಿಮ್ಮ ಆಧಾರ್ ನಂಬರ್ ಹಾಕಿ,ನಂತರ captch type ಮಾಡಿ,ವಿವರಗಳನ್ನು ಪಡೆಯಲು/fetch details ಮೇಲೆ ಕ್ಲಿಕ್ ಮಾಡಿ

ನಿಮಗೆ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿರುವ ಕುರಿತು ಇಲ್ಲಿ ಮಾಹಿತಿ ಸಿಗುತ್ತದೆ.
ಪರಿಹಾರದ ಹಣ ಇನ್ನು ಜಮಾ ಆಗದಿದ್ದರೆ “ಹಣ ಸಂಧಾಯವಾಗಿಲ್ಲ/Payment not made” ಎಂದು ತೋರಿಸುತ್ತದೆ.

ಬೆಳೆಹಾನಿ ಜಮಾ ಆಗದೇ ಇದ್ದರೆ, ಕಂದಾಯ ಇಲಾಖೆಯನ್ನು ಸಂಪರ್ಕಿಸಿ

Annabhagya-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 5kg ಅಕ್ಕಿ ಜೊತೆ ಅಗಸ್ಟ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253