Raithavidyanidhi-ರೈತರ ಮಕ್ಕಳಿಗೆ ಇದ್ದ ರೈತವಿದ್ಯಾನಿಧಿ ಯೋಜನೆಗೆ ರಾಜ್ಯ ಸರ್ಕಾರದಿಂದ ಎಳ್ಳು ನೀರು

<Krushirushi> <ರೈತವಿದ್ಯಾನಿಧಿ> <ರೈತ ವಿದ್ಯಾನಿದಿ> <Raitha Vidya nidhi> <Raithavidyanidhi>

Raithavidyanidhi-ರೈತರ ಮಕ್ಕಳಿಗೆ ಇದ್ದ ರೈತವಿದ್ಯಾನಿಧಿ ಯೋಜನೆಗೆ ರಾಜ್ಯ ಸರ್ಕಾರದಿಂದ ಎಳ್ಳು ನೀರು

ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲು ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ’ಯ ಮೇಲೆ ಕಾರ್ಮೋಡ ಕವಿದಿದೆ. ಪ್ರಸಕ್ತ ಸಾಲಿನಲ್ಲಿ ಮುಂದುವರಿಸಬೇಕೋ, ಬೇಡವೋ ಎಂಬ ಬಗ್ಗೆ ಈಗಿನ ಕಾಂಗ್ರೆಸ್‌ ನೇತೃತ್ವದ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ.

2021–22ನೇ ಸಾಲಿನಿಂದ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಹಿಂದಿನ ಸಾಲಿನವರೆಗೂ ಚಾಲ್ತಿಯಲ್ಲಿತ್ತು. 19 ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡಿದ್ದರು. ‘ಯೋಜನೆಯನ್ನು ಈ ಸರ್ಕಾರ ರದ್ದುಪಡಿಸಿದೆ’ ಎಂದು ಬಿಜೆಪಿ ಆರೋಪಿಸಿದೆ. ‘ಸರ್ಕಾರದಿಂದ ಅಧಿಕೃತ ನಿರ್ದೇಶನ ಬಂದಿಲ್ಲ’ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಯೋಜನೆ ಮುಂದುವರಿಸಬೇಕು ಮತ್ತು ಮೊತ್ತ ಹೆಚ್ಚಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

2021–22ನೇ ಸಾಲಿನಲ್ಲಿ 10.44 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು ₹464 ಕೋಟಿ ವಿತರಣೆಯಾಗಿದ್ದರೆ, 2022–23ನೇ ಸಾಲಿನಲ್ಲಿ 8.56 ಲಕ್ಷ ವಿದ್ಯಾರ್ಥಿಗಳಿಗೆ ₹ 375 ಕೋಟಿ ವಿತರಣೆಯಾಗಿದೆ.

ಕೃಷಿ ಇಲಾಖೆ ಮೂಲಕ ಅನುಷ್ಠಾನಗೊಂಡಿರುವ ಈ ಯೋಜನೆಯಡಿ ಮೊದಲ ವರ್ಷ ವಿದ್ಯಾರ್ಥಿಗಳು ತಾವು ಕಲಿಯುವ ಶಿಕ್ಷಣ ಸಂಸ್ಥೆ ಮೂಲಕ ದಾಖಲೆಗಳನ್ನು ಸಲ್ಲಿಸಬೇಕಾಗಿತ್ತು. 2022ನೇ ಸಾಲಿನಲ್ಲಿ ನೇರವಾಗಿ ಸ್ಕಾಲರ್‌ಷಿಪ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿತ್ತು.

ರೈತರ ಮಕ್ಕಳು ಶಿಕ್ಷಣ ಮುಂದುವರಿಸಬೇಕೆಂಬ ಆಶಯದಿಂದ ಪಿಯುಸಿ ಹಂತದಿಂದ ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳಿಗೆ ₹2,500ರಿಂದ ಗರಿಷ್ಠ ₹11ಸಾವಿರದವರೆಗೆ ಇದನ್ನು ನೀಡಲಾಗುತ್ತಿದೆ.

‘ಪದವಿ ಓದುವಾಗ ₹5,000 ವಿದ್ಯಾರ್ಥಿವೇತನ ದೊರೆತಿತ್ತು. ಈಗ ಸ್ನಾತಕೋತ್ತರ ಪದವಿ ಓದುತ್ತಿದ್ದು, 2022–23ನೇ ಸಾಲಿನ ವಿದ್ಯಾರ್ಥಿ ವೇತನ ₹10ಸಾವಿರ ಕಳೆದ ಮಾರ್ಚ್‌ನಲ್ಲೇ ಖಾತೆಗೆ ಜಮಾ ಆಗಿದೆ. ಇದರಿಂದ ಶೈಕ್ಷಣಿಕ ವೆಚ್ಚಕ್ಕೆ ಪಾಲಕರಿಂದ ಹಣ ಕೇಳುವ ಪ್ರಮೇಯ ತಪ್ಪುತ್ತದೆ. ರೈತರ ಮಕ್ಕಳಲ್ಲಿ ಹೆಚ್ಚಿನವರು ಬಿಪಿಎಲ್ ಕಾರ್ಡ್‌ ಹೊಂದಿದವರೇ ಇರುತ್ತಾರೆ. ಹೀಗಾಗಿ, ವಿದ್ಯಾನಿಧಿ ಯೋಜನೆಯಿಂದ ತುಂಬಾ ಅನುಕೂಲವಾಗಿದ್ದು, ಈಗಿನ ಸರ್ಕಾರ ಈ ಮೊತ್ತ ಹೆಚ್ಚಳ ಮಾಡಬೇಕು’ ಎಂದು ಮಂಗಳೂರಿನ ವಿದ್ಯಾರ್ಥಿ ಶಂಕರ್ ಓಬಳಬಂಡಿ ವಿನಂತಿಸಿದರು.

‘ವಿಧಾನಸಭೆ ಚುನಾವಣೆ ಘೋಷಣೆಯಾಗುವ ಕೆಲದಿನಗಳ ಮೊದಲು ನಮ್ಮ ಬ್ಯಾಂಕ್ ಖಾತೆಗೆ ಈ ಸಾಲಿನ ರೈತ ವಿದ್ಯಾನಿಧಿ ಮೊತ್ತ ಜಮಾ ಆಗಿದೆ. ಪದವಿ ವಿದ್ಯಾರ್ಥಿಗಳಿಗೆ ನೀಡುವ ₹5,000 ಮೊತ್ತವನ್ನು ಹೆಚ್ಚಳ ಮಾಡಿದರೆ ಅನುಕೂಲ’ ಎಂದು ನಗರದ ಕಾಲೇಜಿನ ಬಿ.ಎ ದ್ವಿತೀಯ ವರ್ಷದ ವಿದ್ಯಾರ್ಥಿ ಶಂಕರ್ ಯಮನೂರ ಒತ್ತಾಯಿಸಿದರು.

ಈ ಹಿಂದೆ ಇದ್ದ ರೈತವಿಧ್ಯಾನಿದಿ ಯೋಜನೆಯ ಮಾಹಿತಿ

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ-ರೈತರ ಮಕ್ಕಳಿಗೆ 2,000 ದಿಂದ 11,000 ವರೆಗೆ ಶಿಷ್ಯವೇತನ

ರೈತರ ಮಕ್ಕಳ ವಿದ್ಯಾಭಾಸವನ್ನು ಪ್ರೋತ್ಸಾಹಿಸಲು ಮಾನ್ಯ ಮುಖ್ಯಮಂತ್ರಿಗಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮವನ್ನು ಘೋಷಣೆ ಮಾಡಿರುತ್ತಾರೆ.

ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ಮುಖ್ಯಮಂತ್ರಿ ರೈತ ವಿಧ್ಯಾನಿದಿ ಯೋಜನೆಯನ್ನು 75 ನೇ ಸ್ವಾತಂತ್ರೋತ್ಸವದಂದು ಮುಖ್ಯಮಂತ್ರಿಗಳು ಘೋಷಣಿ ಮಾಡಿದ್ದರು.

ರೈತರು ಹಾಗೂ ಕೃಷಿಕಾರ್ಮಿಕರ ಮಕ್ಕಳ ಜೊತೆಗೆ ಮೀನುಗಾರರು,ನೇಕಾರರು,ಕಾರ್ಮಿಕರು ಮತ್ತು ಅಟೋ ಟ್ಯಾಕ್ಸಿ ಚಾಲಕರ ಮಕ್ಕಳಿಗೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆೆಯನ್ನು ವಿಸ್ತರಿಸಲಾಗಿದ್ದು, ಈ ಯೋಜನೆಯಿಂದ 14 ಲಕ್ಷ ಮಕ್ಕಳಿಗೆ ವಿದ್ಯಾರ್ಥಿವೇತನ ಸಿಗಲಿದೆ

ಈ ಕಾರ್ಯಕ್ರಮದಡಿ 8, 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳು ಮತ್ತು ಎಸ್ ಎಸ್ ಎಲ್ ಸಿ /10 ನೇ ತರಗತಿಯನ್ನು ಪೂರೈಸಿರುವ ಹಾಗೂ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿ ಯಾಗಿರುವ ಶಿಕ್ಷಣ ಸಂಸ್ಥೆ/ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರು ಇರುತ್ತಾರೆ. ವಿದ್ಯಾರ್ಥಿ ವೇತನವನ್ನು ವಾರ್ಷಿಕವಾಗಿ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ ವರ್ಗಾಯಿಸಲಾಗುವುದು.
 ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನವನ್ನು ಅರ್ಹತೆ ಆಧಾರದ ಮೇಲೆ ಮತ್ತು ಅರ್ಜಿ ಎರಡರ ಆಧಾರದ ಮೇಲೆ ನೀಡಲಾಗುತ್ತಿದೆ. ಇ -ಆಡಳಿತ ಇಲಾಖೆಯು ನಿರ್ವಹಿಸುತ್ತಿರುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ(portal) ನಿಂದ ಕೃಷಿ ಇಲಾಖೆಗೆ ಅರ್ಹ ವಿದ್ಯಾರ್ಥಿಗಳ ದಾಖಲಾತಿಗಳನ್ನು ವಿದ್ಯಾರ್ಥಿ ವೇತನ ವರ್ಗಾವಣೆಗಾಗಿ  ನೀಡಲಾಗುತ್ತಿದೆ.
 ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ
 1.ರೈತ ಎಂದರೆ ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಮಾಡುವಂತಹ ಕೃಷಿ ಮಾಡುವಂತಹ ಜಮೀನನ್ನು ತನ್ನ ಹೆಸರಿನಲ್ಲಿ ಹೊಂದಿರುವಂತಹ ವ್ಯಕ್ತಿ
 2.ರೈತರ ಮಕ್ಕಳು ಎಂದರೆ ಕಾನೂನಿನ ಪ್ರಕಾರ ದತ್ತು ಪಡೆದಿರುವ ಮಕ್ಕಳು ಸೇರಿದಂತೆ ಪೋಷಕ/ಪೋಷಕರ ಜೈವಿಕ ಸಂತತಿ.ಒಂದು ಪಕ್ಷ ಯಾವುದೇ ಮಕ್ಕಳಿಗೆ ಪೋಷಕ /ಪೋಷಕರು ಇಲ್ಲದೆ ಇದ್ದ ಸಂದರ್ಭದಲ್ಲಿ ಉಳಿಮೆ ಮಾಡುವಂತಹ/ ಕೃಷಿ ಮಾಡುವಂತಹ ಜಮೀನನ್ನು ಅವರು ಹೊಂದಿರತಕ್ಕದ್ದು
 3.ರೈತ ಕುಟುಂಬದ ಎಲ್ಲಾ ಮಕ್ಕಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುತ್ತಾರೆ. ಸದರಿ ಉದ್ದೇಶಕ್ಕೆ ರೈತ ಕುಟುಂಬ ಎಂದರೆ ರಾಜ್ಯದ ಇ-ಆಡಳಿತ ಇಲಾಖೆಯು ನಿರ್ವಹಿಸುತ್ತಿರುವ ಕುಟುಂಬ ತಂತ್ರಾಂಶದ ದತ್ತಾಂಶದಲ್ಲಿ ದಾಖಲಾಗಿರುವ ಸದಸ್ಯರು
 4.ವಿದ್ಯಾರ್ಥಿಯು ಇತರೆ ಯಾವುದೇ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರು ಮುಖ್ಯಮಂತ್ರಿ ರೈತ ವಿಜ್ಞಾನಿಧಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುತ್ತಾರೆ
 5.ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ವಿತರಿಸುವ ಉದ್ದೇಶಕ್ಕೆ ರಾಜ್ಯದ ವಿವಿಧ ಇಲಾಖೆಗಳು ನಿರ್ವಹಿಸುತ್ತಿರುವ ಶೈಕ್ಷಣಿಕ ಹಾಗೂ ಇತರೆ ದತ್ತಾಂಶದ ಆಧಾರದ ಮೇಲೆ ಗುರುತಿಸಿ (on entitlement basis) ವಿದ್ಯಾರ್ಥಿ ವೇತನವನ್ನು ವಿತರಿಸುವುದು ಹಾಗೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಪ್ರಕರಣಗಳನ್ನು ಸಹ ಪರಿಗಣಿಸಿ ಅರ್ಹರಿಗೆ ವಿದ್ಯಾರ್ಥಿವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವರ್ಗಾಯಿಸಲಾಗುವುದು.
 6.ಪುನರಾವರ್ತಿತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುವುದಿಲ್ಲ 

ರಾಜ್ಯದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ಪ್ರವೇಶನವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ( Direct Benefit Transfer-DBT) ಪದ್ಧತಿಯ ಮೂಲಕ ರೂ 2,000 ದಿಂದ ರೂ 11,000 ವರೆಗೆ 2021 22ನೇ ಆರ್ಥಿಕ ವರ್ಷದ ಸಾಲಿನಿಂದ ಯಾರಿಗೆ ಬರುವಂತೆ ಶಿಷ್ಯವೇತನದ ಹಣವನ್ನು ವಾರ್ಷಿಕ ಶಿಷ್ಯವೇತನದ ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿರುತ್ತದೆ.
ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಪಡೆಯಲು ಅರ್ಹರಾಗಿರುತ್ತಾರೆ.


ಪ್ರೌಢ ಶಿಕ್ಷಣ( 8 ರಿಂದ 10ನೇ ತರಗತಿವರೆಗೆ ) ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ 2021 22ನೇ ಆರ್ಥಿಕ ವರ್ಷದಿಂದ ವಾರ್ಷಿಕವಾಗಿ 2,000ಗಳ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲಾಗಿದೆ.
2021 22 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಶಿಕ್ಷಣ ಕೋರ್ಸ್ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ  Sats ID & FID ಅನ್ವಯ ಅರ್ಹರನ್ನು ಗುರುತಿಸಿ ಪಾವತಿಸಲಾಗುವುದು.
ಇತರೆ ಎಲ್ಲಾ ಕೋರ್ಸ್ಗಳ ರೈತರ ಮಕ್ಕಳು ( ಜಾಲತಾಣ https://ssp.postmatric.karnataka.gov.in) ದಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ವಿದ್ಯಾರ್ಥಿಯು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮತ್ತು  NPCI Mapping ಮಾಡಿಸಿರಬೇಕು ಹಾಗೂ ತಂದೆ ಅಥವಾ ತಾಯಿಯ ರೈತರ ಗುರುತಿನ ಸಂಖ್ಯೆ(FID)ಹೊಂದಿರಬೇಕು.
FID ನೋಂದಣಿ ಮಾಡಲು ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು.

ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಕಾರ್ಯಕ್ರಮದಡಿ ನೀಡಲಾಗುವ ವಾರ್ಷಿಕ ಶಿಷ್ಯ ವೇತನದ ವಿವರ
1. ಪ್ರೌಢ ಶಿಕ್ಷಣ (8 ರಿಂದ 10ನೇ ತರಗತಿ)
ವಿದ್ಯಾರ್ಥಿನಿಯರು ಅಥವಾ ಅನ್ಯಲಿಂಗದವರಿಗೆ-2000 ರೂ

2. ಪದವಿಯ ಮುಂಚೆ ಪಿಯುಸಿ/ ಐಟಿಐ /ಡಿಪ್ಲೋಮ
ವಿದ್ಯಾರ್ಥಿಗಳು/ ಪುರುಷರು-ರೂ.
2500
ವಿದ್ಯಾರ್ಥಿನಿಯರು/ ಅನ್ಯಲಿಂಗದವರು-ರೂ 3000

3. ಎಲ್ಲಾ ಬಿಎ ಬಿಎಸ್ಸಿ ಬಿಕಾಂ ಇತ್ಯಾದಿ (ಎಂಬಿಬಿಎಸ್, ಬಿಇ/ಬಿ ಟೆಕ್ ಮತ್ತು ವೃತ್ತಿಪರ ಕೋರ್ಸ್ ಗಳನ್ನು ಹೊರತುಪಡಿಸಿ)
ವಿದ್ಯಾರ್ಥಿಗಳು/ ಪುರುಷರು -ರೂ 5000
ವಿದ್ಯಾರ್ಥಿನಿಯರು / ಅನ್ಯಲಿಂಗದವರು-ರೂ 5500

4. ಎಲ್ ಎಲ್ ಬಿ, ಪ್ಯಾರಾಮೆಡಿಕಲ್, ಬಿ ಫಾರ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಗಳು
ವಿದ್ಯಾರ್ಥಿಗಳು/ ಪುರುಷರು-ರೂ.7500
ವಿದ್ಯಾರ್ಥಿನಿಯರು / ಅನ್ಯಲಿಂಗದವರು-ರೂ 8000

5. ಎಂಬಿಬಿಎಸ್, ಬಿ ಇ/ಬಿ ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳು
ವಿದ್ಯಾರ್ಥಿಗಳು/ ಪುರುಷರು-ರೂ 10,000
ವಿದ್ಯಾರ್ಥಿನಿಯರು/ ಅನ್ಯಲಿಂಗದವರು-ರೂ 11,000

ವಿಶೇಷ ಸೂಚನೆ- ಪುನರಾವರ್ತಿತ ವಿದ್ಯಾರ್ಥಿಗಳು (REPEATORS) ಅರ್ಹರಿರುವುದಿಲ್ಲ.