Baragala-ರಾಜ್ಯದ 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರಗಾಲ ಘೋಷಣೆ!
<Krushirushi> <ಬರಗಾಲ ಘೋಷಣೆ> <ಬರಗಾಲ> <Drought declaration> <ಮುಂಗಾರು ಮಳೆ> <ಮಳೆ ಕೊರತೆ> <Rain deviation> <Drought> <ನೀರಿಗೆ ಆಹಾಕಾರ>
Drought-ರಾಜ್ಯದ 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರಗಾಲ ಘೋಷಣೆ!
ರಾಜ್ಯದ 120 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, ಎನ್‌ಡಿಆರ್‌ಎಫ್ನ ಈಗಿರುವ ಮಾನದಂಡಗಳ ಅನ್ವಯವೇ ಬರ ಘೋಷಣೆ ಮಾಡಬೇಕಿರುವುರಿಂದ ತೀವ್ರ ಮಳೆ ಕೊರತೆ ಇರುವ 75 ತಾಲೂಕುಗಳನ ತಲಾ 10 ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ನಡೆಸಿ 10 ದಿನದಲ್ಲಿ ಒಂದು ನಿರ್ಣಯಕ್ಕೆ ಬರಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಬರ ಘೋಷಣೆ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ರಾಜ್ಯದ ಮಳೆ, ಬೆಳೆ, ಕುಡಿಯುವ ನೀರು, ಜಾನುವಾರುಗಳ ಮೇವು, ಜಲಾಶಯಗಳ ನೀರಿನ ಮಟ್ಟ, ಕೇಂದ್ರ ಸರಕಾರದ ಬರ ಕೈಪಿಡಿಯ ಮಾರ್ಗಸೂಚಿ ಸಹಿತ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ.
ಸಭೆಯ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ. 56ರಷ್ಟು ಮಳೆ ಕೊರತೆ ಆಗಿದ್ದರೆ, ಜುಲೈ ತಿಂಗಳಲ್ಲಿ ವಾಡಿಕೆಗಿಂತ ಶೇ. 30ರಷ್ಟು ಹೆಚ್ಚು ಮಳೆಯಾಗಿದೆ. ಆಗಸ್ಟ್‌ನಲ್ಲಿ ಶೇ. 50ಕ್ಕೂ ಹೆಚ್ಚು ಕೊರತೆ ಆಗಿದೆ. ಜೂ. 1ರಿಂದ ಆ. 21ರವರೆಗೆ ರಾಜ್ಯಾದ್ಯಂತ 487 ಮಿ.ಮೀ. ಮಳೆಯಾಗಿದ್ದು, ವಾಡಿಕೆ ಮಳೆಗಿಂತ ಶೇ. 23ರಷ್ಟು ಕೊರತೆ ಆಗಿದೆ. ಮುಂದಿನ ದಿನಗಳಲ್ಲೂ ಮಳೆ ಆಶಾದಾಯಕವಾಗಿಲ್ಲ ಎಂದರು.
10 ದಿನಗಳ ಕಾಲಾವಕಾಶ
ಮುಂಗಾರು ಅವಧಿಗೆ 82.35 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡುವ ಗುರಿಯಿತ್ತು. 51.87 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದ್ದು, ವಾಡಿಕೆಯ ಶೇ. 89ರಷ್ಟು ಬಿತ್ತನೆಯಾದಂತಾಗಿದೆ. 1.82 ಲಕ್ಷ ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ಬಿತ್ತನೆಯಾಗಿದ್ದು, ವಾಡಿಕೆಯ ಶೇ. 65ರಷ್ಟು ಬಿತ್ತನೆಯಾಗಿದೆ. ಮಳೆ ಮತ್ತು ತೇವಾಂಶದ ಕೊರತೆಯಿಂದ ಬೆಳೆಗಳು ಒಣಗುವ ಸ್ಥಿತಿ ತಲುಪುತ್ತಿವೆ. ಹೀಗಾಗಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 75 ತಾಲೂಕುಗಳ ತಲಾ 10 ಗ್ರಾಮಗಳಲ್ಲಿ 5 ವಿವಿಧ ಬೆಳೆಗಳನ್ನು ಸಮೀಕ್ಷೆ ಮಾಡುವಂತೆ ಸೂಚಿಸಲಾಗಿದೆ. ಇದಕ್ಕಾಗಿ 10 ದಿನಗಳ ಕಾಲಾವಕಾಶ ನೀಡಲಾಗಿದ್ದು, ಮಾದರಿ ಬೆಳೆ ಸಮೀಕ್ಷೆಯ ವರದಿ ಬಂದ ಬಳಿಕ ಮತ್ತೂಮ್ಮೆ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಎನ್‌ಡಿಆರ್‌ಎಫ್ನ ಈಗಿರುವ ಮಾನದಂಡಗಳು ಕಠಿನವಾಗಿದ್ದು, 2016 ರ ಮಾರ್ಗಸೂಚಿ ಪ್ರಕಾರ ರಾಜ್ಯ ಸರಕಾರವೇ ಕೆಲವೊಂದು ಮಾರ್ಪಾಡುಗಳನ್ನು ಮಾಡಿಕೊಂಡು ಬರಪೀಡಿತ ಎಂದು ಘೋಷಿಸಬಹುದಾಗಿತ್ತು. ಆದರೆ ಈಗಿನ ನಿಯಮದಂತೆ ಶೇ.60ರಷ್ಟು ಮಳೆ ಕೊರತೆಯಾಗಿರಬೇಕು ಮತ್ತು ಹಿಂದಿನ ಮೂರು ವಾರಗಳ ಕಾಲ ಮಳೆ ಬಂದಿರಲೇಬಾರದು ಸಡಿಲಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಮ್ಮ ಸಿಎಂ ಪತ್ರ ಬರೆದಿದ್ದರು. ತಿದ್ದುಪಡಿ ಸೂಕ್ತ ಎಂದು ಅಧಿಕಾರಿಗಳು ಅನೌಪಚಾರಿಕವಾಗಿ ಹೇಳಿದ್ದರೂ ಸದ್ಯಕ್ಕೆ ತಿದ್ದುಪಡಿ ಬಗ್ಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಈಗಿರುವ ಮಾನದಂಡಗಳ ಪ್ರಕಾರ ಶೇ. 60ರಷ್ಟು ಮಳೆ ಕೊರತೆ ಇರಬೇಕು. ರಾಜ್ಯದ ಸರಾಸರಿ ಮಳೆ ಕೊರತೆಯು ಶೇ. 28ರಷ್ಟಿದೆ. ಈಗಲೂ ಮಾನದಂಡ ತಿದ್ದುಪಡಿಗೆ ನಮ್ಮ ಒತ್ತಾಯವಿದೆ. ಬೆಳೆ ಸಮೀಕ್ಷೆ ವರದಿ ಬರುವ ವೇಳೆಗೆ ಇನ್ನಷ್ಟು ತಾಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿದರೂ ಆಚ್ಚರಿಯಿಲ್ಲ ಎಂದರು.
ಜೂ. 1ರಿಂದ ಆ. 21ರ ವರೆಗೆ ರಾಜ್ಯಾದ್ಯಂತ 487 ಮಿ.ಮೀ. ಮಳೆ, ವಾಡಿಕೆಗಿಂತ ಶೇ. 23ರಷ್ಟು ಕೊರತೆ
– ಜೂನ್‌ನಲ್ಲಿ ಶೇ. 56ರಷ್ಟು ಕೊರತೆ, ಜುಲೈಯಲ್ಲಿ ಶೇ. 30ರಷ್ಟು ಹೆಚ್ಚಿಗೆ ಮಳೆ, ಆಗಸ್ಟ್‌ನಲ್ಲಿ ಶೇ. 50ರಷ್ಟು ಕೊರತೆ
– ಮುಂಗಾರು ಅವಧಿಯಲ್ಲಿ 83.35 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ, 51.87 ಲಕ್ಷ ಹೆಕ್ಟೇರ್‌ನಲ್ಲಷ್ಟೇ ಬಿತ್ತನೆ
– ಮಳೆ ಮತ್ತು ತೇವಾಂಶ ಕೊರತೆಯಿಂದ ನಾಲ್ಕು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಒಣಗುವ ಸ್ಥಿತಿಯಲ್ಲಿ ಬೆಳೆ
– ಆಲಮಟ್ಟಿ ಬಿಟ್ಟು ಉಳಿದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ
– ಕಾವೇರಿ ಜಲಾನಯನ ಪ್ರದೇಶದಲ್ಲಿ 15 ದಿನಕ್ಕೊಮ್ಮೆ ಬೆಳೆಗಳಿಗೆ ನೀರು, 3 ತಿಂಗಳಿಗೆ ಸಾಕಾಗುವಷ್ಟೇ ನೀರಿದೆ.
– ನೀರಾವರಿ ಆಶ್ರಿತ ಬೆಳೆ ಬದಲು ಖುಷ್ಕಿ ಬೆಳೆ ಬೆಳೆಯಲು ರೈತರಿಗೆ ಸಲಹೆ
– 1.50 ಕೋಟಿ ಟನ್ ಮೇವು ಲಭ್ಯ, 28 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು
– 147 ಗ್ರಾಮಗಳಿಗೆ 161 ಖಾಸಗಿ ಕೊಳವೆಬಾವಿ ಹಾಗೂ 18 ಗ್ರಾಮಗಳಿಗೆ 24 ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ
ಪ್ರಸ್ತುತ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಒಟ್ಟು 520 ಕೋಟಿ ರೂ. ಲಭ್ಯ
ರಾಜ್ಯದ 120 ತಾಲೂಕುಗಳಲ್ಲಿ ಮಳೆ ಕೊರತೆ ಇದೆ. ಕೇಂದ್ರದ ಬರ ಕೈಪಿಡಿಯ ಮಾನದಂಡ ತಿದ್ದುಪಡಿಗೆ ಈಗಲೂ ನಮ್ಮ ಒತ್ತಾಯವಿದೆ. ಈಗಿರುವ ಮಾನದಂಡದ ಪ್ರಕಾರ, ಬರಪೀಡಿತ ಪ್ರದೇಶಗಳನ್ನು ಘೋಷಿಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ. 10 ದಿನದಲ್ಲಿ ಬೆಳೆ ನಷ್ಟ ಸಮೀಕ್ಷೆಯ ವರದಿ ಬರಲಿದ್ದು, ಅನಂತರ ನಿರ್ಣಯ ಕೈಗೊಳ್ಳಲಾಗುವುದು.
– ಕೃಷ್ಣ ಬೈರೇಗೌಡ, ಕಂದಾಯ ಸಚಿವ
ಮುಂಗಾರು ಹಂಗಾಮಿನಲ್ಲಿ ಒಟ್ಟು 82.35 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. 51.87 ಲಕ್ಷ ಹೆಕ್ಟೇರ್ (ಶೇ. 89)ನಲ್ಲಿ ಬಿತ್ತನೆಯಾಗಿದ್ದು, ಮಳೆ ಮತ್ತು ತೇವಾಂಶದ ಕೊರತೆಯಿಂದ ಹಲವೆಡೆ ಬೆಳೆ ಒಣಗುವ ಸ್ಥಿತಿ ತಲುಪಿವೆ. ಈಗಿರುವ ಪರಿಸ್ಥಿತಿ ಮುಂದುವರಿದರೆ ಸಹಜವಾಗಿ ಆಹಾರದ ಕೊರತೆಯೂ ಎದುರಾಗಬಹುದು. ಸಮೀಕ್ಷೆ ವರದಿ ಅನಂತರ ಬರದ ಬಗ್ಗೆ ತೀರ್ಮಾನ ಕೈಗೊಳ್ಳಲು ಸಾಧ್ಯ.
– ಎನ್. ಚಲುವರಾಯಸ್ವಾಮಿ, ಕೃಷಿ ಸಚಿವ
ಪ್ರವಾಹದಿಂದ ಮನೆಗೆ ಕಳೆದುಕೊಂಡವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಮನೆಗಳ ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿ ಆದೇಶವನ್ನು ಹೊರಡಿಸಿದೆ
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಅತಿವೃಷ್ಟಿ/ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯಕ್ಕೆ ಹಚ್ಚಿನ ಪರಿಹಾರ ನೀಡುವ ಬಗ್ಗೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ರಾಜ್ಯದಲ್ಲಿ 2023ನೇ ಸಾಲಿನ ಮುಂಗಾರು ಋತುವಿನಲ್ಲಿ ಬಿದ್ದಂತಹ ಭಾರಿ ಮಳೆಯಿಂದ ಹಾಗೂ ನದಿ ಹರಿವಿನಿಂದ ರಾಜ್ಯದ ಹಲವೆಡೆ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಇದರಿಂದ ಜನ-ಜಾನುವಾರು, ಮನೆ ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಿಂದ ವರದಿಯಾಗಿರುತ್ತದೆ. ಮೇಲೆ ಓದಲಾದ (1)ರಲ್ಲಿ ಕೇಂದ್ರೀಯ ಗೃಹ ಮಂತ್ರಾಲಯವು SDRF/NDRF ಮಾರ್ಗಸೂಚಿ ದರಗಳನ್ನು ಘೋಷಿಸಿದೆ.
ರಾಜ್ಯದಲ್ಲಿ ಪುಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ವರೆಗೆ) ಅತಿವೃಷ್ಟಿ/ಪ್ರವಾಹದಿಂದ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, ಇದರಿಂದ ಜನ-ಜಾನುವಾರು, ಮನೆ ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿಯಾಗಿರುತ್ತದೆ. ಈ ಕುರಿತು ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿರುತ್ತಾರೆ. ಮೇಲೆ ಓದಲಾದ (2)ರ ಸರ್ಕಾರದ ಆದೇಶಗಳ ಅನುಸಾರ 2022ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ/ಪುವಾಹದಿಂದ ಮನೆಗಳು ಹಾನಿಯಾದಂತಹ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯಲ್ಲಿ ನಿಗಧಿಪಡಿಸಿರುವ ದರಕ್ಕಿಂತ ಹೆಚ್ಚುವರಿಯಾಗಿ ಪರಿಷ್ಕೃತ ದರದಲ್ಲಿ ಪರಿಹಾರವನ್ನು ಪಾವತಿಸಿರುವಂತೆ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಮನ ಹಾನಿ ಪ್ರಕರಣಗಳಿಗೆ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲು ಸರ್ಕಾರವು ನಿರ್ಧರಿಸಿ ಈ ಕೆಳಕಂಡಂತೆ ಆದೇಶಿಸಿದೆ. ಸರ್ಕಾರದ ಆದೇಶ ಸಂಖ್ಯೆ: ಕಂಇ 243 ಟಿಎನ್‌ಆರ್ 2023; ಬೆಂಗಳೂರು, ದಿನಾಂಕ: 03-08-2023. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023ನೇ ಸಾಲಿನ ಮುಂಗಾರು ಋತುವಿನ (1ನೇ ಜೂನ್ ರಿಂದ 30ನೇ ಸಪ್ಟೆಂಬರ್ ವರೆಗೆ) ಅತಿವೃಷ್ಟಿ/ ಪ್ರವಾಹದಿಂದ ಮನೆಗಳು ಹಾನಿಯಾದಂತಹ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯಲ್ಲಿ ನಿಗಧಿಪಡಿಸಿರುವ ದರಕ್ಕಿಂತ ಈ ಕೆಳಕಂಡಂತೆ ಹೆಚ್ಚುವರಿಯಾಗಿ ಪರಿಷ್ಕೃತ ದರದಲ್ಲಿ ಪರಿಹಾರವನ್ನು ಪಾವತಿಸಲು ಮಂಜೂರಾತಿ ನೀಡಿ ಆದೇಶಿಸಿದೆ.
1 ಶೇ.75ಕ್ಕಿಂತ ಹೆಚ್ಚು ಸಂಪೂರ್ಣ ಮನೆ ಹಾನಿ ವರ್ಗ ಎ
1,20,000/-
3,80,000/-
5,00,000/-
2 ಶೇ.25 ರಿಂದ ಶೇ.75 ರಷ್ಟು ತೀವ್ರು ಮನೆ ಹಾನಿ - 'ಬಿ1' ವರ್ಗ (ದುರಸ್ತಿ)
1,20,000/-
1,80,000/-
3,00,000/-
3. ಶೇ.25 ರಿಂದ ಶೇ.75 ರಷ್ಟು ತೀವ್ರ ಮನೆ ಹಾನಿ - 'ಬಿ2'ವರ್ಗ (ಕೆಡವಿ ಹೊಸದಾಗಿ ನಿರ್ಮಿಸುವುದು)
1,20,000/-
3,80,000/-
5,00,000/-
4 ಶೇ.15-25 ರಷ್ಟು ಭಾಗಶಃ ಮನೆ ಹಾನಿ - 'ಸಿ' ವರ್ಗ
6,500/-
43,500/-
50,000/-
ಇದೇ ವೇಳೆ ಅತಿವೃಷ್ಟಿ / ಪ್ರವಾಹದಿಂದಾಗಿ ಮನೆಹಾನಿ ಆದ ನೆರೆ ಸಂತ್ರಸ್ತರಿಗೆ ಮೇಲ್ಕಂಡ ಪರಿಷ್ಕೃತ ದರದಲ್ಲಿ ಪರಿಹಾರವನ್ನು ಈ ಕೆಳಕಂಡ ಷರತ್ತುಗಳನ್ವಯ ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದ. ಷರತ್ತುಗಳು:
1.2023ನೇ ಸಾಲಿನ ಮುಂಗಾರುನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ವರೆಗೆ) ಅತೀವೃಷ್ಟಿ/ಪವಾಹದಿಂದ ಮನೆಹಾನಿ ಉಂಟಾದಲ್ಲಿ ಜಿಲ್ಲಾಧಿಕಾರಿಗಳು ಜಂಟಿ ತಂಡ ರಚಿಸಿ ತಂಡದವರಿಂದ ಸಂತ್ರಸ್ತರ ವಿವರಗಳನ್ನು ಪಡೆದು ಜಿಲ್ಲಾಧಿಕಾರಿಗಳು ನಿಯಮಾನುಸಾರ ಎ, ಬಿ1, ಬಿ2 ಅಥವಾ ಸಿ ವರ್ಗಕ್ಕೆ ಸೀರಿಸುವ ಬಗ್ಗೆ ಅರ್ಹತೆಯನ್ನು ಪರಿಶೀಲಿಸಿ ಅನುಮೋದಿಸಿದ ಫಲಾನುಭವಿಗಳ ವಿವರಗಳನ್ನು RGHCL ತಂತ್ರಾಂಶದಲ್ಲಿ ಕಡ್ಡಾಯವಾಗಿ ದಾಖಲಿಸುವುದು.ಜಿಲ್ಲಾಧಿಕಾರಿಗಳು ಎ, ಬಿ1 ಮತ್ತು ಬಿ2 ವರ್ಗದ ಮನೆಗಳ ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯನ್ವಯ ಮೊದಲನೇ ಕಂತು ರೂ. 1.20 ಲಕ್ಷಗಳನ್ನು ಅರ್ಹ ಫಲಾನುಭವಿಗಳ ಆಧಾರ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡತಕ್ಕದ್ದು.ಮುಂದಿನ ಕಂತುಗಳ ಅನುದಾನವನ್ನು ನಿಯಮಾನುಸಾರ ಪ್ರಗತಿಯನುಸಾರ RGHCL ಸಂಸ್ಥೆಯಿಂದ ಭರಿಸಲಾಗುವುದು.ಜಿಲ್ಲಾಧಿಕಾರಿಗಳು ಸಿ ವರ್ಗದಲ್ಲಿ ಅರ್ಹರಿರುವ ಮನಹಾನಿ ಫಲಾನುಭವಿಗಳಿಗೆ ತಲಾ ರೂ. 50,000/- ರಂತೆ (SDRF ಮಾರ್ಗಸೂಚಿಯನ್ವಯ ರೂ. 6500/- ಸೇರಿದಂತೆ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ನಿಯಮಾನುಸಾರ ಅರ್ಹ ಫಲಾನುಭವಿಗಳ ಆಧಾರ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡತಕ್ಕದ್ದು.
2.ನಿಯಮಾನುಸಾರ ಜಂಟಿ ಸ್ಥಳ ತನಿಖೆಯ ವರದಿ ಬಂದು ಜಿಲ್ಲಾಧಿಕಾರಿಗಳು ಅರ್ಹತೆ ಬಗ್ಗೆ ಪರಿಶೀಲಿಸಿದ 20 ದಿನದೊಳಗೆ ಪರಿಹಾರ ಪಾವತಿಸುವುದು.
3. ಮನೆಹಾನಿ ಪರಿಹಾರ ಪಾವತಿಯಾಗಿರುವ ಫಲಾನುಭವಿಗಳ ವಿವರವನ್ನು ಜಿಲ್ಲಾಧಿಕಾರಿಗಳು ಜಿಲ್ಲೆಯ ಅಧಿಕೃತ ಜಾಲತಾಣದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪಕಟಿಸುವುದು. ಸದರಿ ಮಾಹಿತಿಯನ್ನು ತಾಲ್ಲೂಕು ಕಛೇರಿಯಲ್ಲಿ ಹಾಗೂ ಗ್ರಾಮ ಪಂಚಾಯತ್‌ಗಳ ಕಛೇರಿಗಳಲ್ಲಿ ಸಹ ಸಾರ್ವಜನಿಕರ ಮಾಹಿತಿಗಾಗಿ ಪುಕಟಿಸುವುದು.
4. ಮನೆಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತ ಅರ್ಹತೆಯನ್ನು ಹಾಗು ಮಾಹಿತಿಯನ್ನು ನಮೂದಿಸುವುದರಲ್ಲಿ ಏನಾದರೂ ಲೋಪದೋಷಗಳು ಉಂಟಾದಲ್ಲಿ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು.
5. ಸಂತ್ರಸ್ತರಿಗೆ ಪರಿಹಾರ ವಿತರಿಸಿಸುವ ಕುಟುಂಬವಾರು ವೆಚ್ಚದ ಲೆಕ್ಕಗಳನ್ನು ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ನಿರ್ವಹಿಸತಕ್ಕದ್ದು ಮತ್ತು ವೆಚ್ಚದ ಬಳಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ: ಆಇ 548 ವೆಚ್ಚ-7/2023, ದಿನಾಂಕ: 01.08.2023 ನೀಡಿರುವ ಸಹಮತದನ್ವಯ ಹೊರಡಿಸಿದೆ.
ಮನೆ ಹಾನಿಯಾದ ತಕ್ಷಣ ಮನೆಹಾನಿಯಾದ ಫೋಟೊ ಹಾಗೂ ದಾಖಲೆಯೊಂದಿಗೆ ತಾಲೂಕು ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕಂದಾಯ ಇಲಾಖೆಯನ್ನು ಸಂಪರ್ಕಿಸಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ರಾಜ್ಯ ಸರ್ಕಾರದಿಂದ ಮಳೆಯಿಂದ ಉಂಟಾದಂತ ಅತಿವೃಷ್ಠಿ ಹಾಗೂ ಪ್ರವಾಹದಂತ ಹಾನಿಗೆ ನೀಡಲಾಗುತ್ತಿದ್ದಂತ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ.
ಈ ಸಂಬಂಧ ಪರಿಷ್ಕೃತ ದರವನ್ನು ಜಾರಿ ಮಾಡಿ ಸರ್ಕಾರ ಆದೇಶಿಸಿದ್ದು, 2023-24ನೇ ಸಾಲಿನಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ನೀಡುವ ಇನ್‌ಪುಟ್ ಸಬ್ಸಿಡಿ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ಪ್ರತಿವರ್ಷ ಮುಂಗಾರು ಹಾಗೂ ಹಿಂಗಾರು ಋತುವಿನಲ್ಲಿ ಭಾರಿ ಮಳೆಯಿಂದ ಹಾಗೂ ನದಿ ಹರಿವಿನಿಂದ ಉಂಟಾಗುವ ಪ್ರವಾಹದಿಂದ ಜನ-ಜಾನುವಾರು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿ ಆಗುತ್ತದೆ ಎಂದಿದೆ.
ಪ್ರತಿ ವರ್ಷ ಬೆಳೆ ಹಾನಿ ಆಗುವ ಪ್ರಕರಣಗಳಿಗೆ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಗಳಂತೆ ಅರ್ಹ ಪ್ರಕರಣಗಳಿಗೆ ಮಾತ್ರ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲಾಗುತ್ತಿದೆ. 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರವಾಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್ / ಎನ್‌ಡಿಆ ಎಫ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಪರಿಷ್ಕೃತ ದರದಲ್ಲಿ ನೀಡಿರುವ ಪರಿಹಾರದಂತೆ ಬೆಳೆ ಹಾನಿಯಾದ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಇನ್‌ಪುಟ್ ಸಬ್ಸಿಡಿ ಮೊತ್ತವನ್ನು ಗರಿಷ್ಠ 2 ಹೆಕ್ಟೇರ್‌ಗೆ ಸೀಮಿತಗೊಳಿಸಿ ಪರಿಷ್ಕೃತ ದರದಲ್ಲಿ ಪಾವತಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ
ಮಳೆಯಾಶ್ರಿತ ಬೆಳೆಗಳಿಗೆ ಮಾರ್ಗಸೂಚಿ ದರ 8,500 ರೂ. ಇದ್ದು ಅದನ್ನು 13,600 ರೂ.ಗೆ ನೀರಾವರಿ ಬೆಳೆಗಳಿಗೆ 17,000 ರೂ.ಗಳಿಂದ 22,500 ರೂ.ಗಳಿಗೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 22,000 ರೂ.ಗಳಿಂದ 28000 ರೂ.ಗೆ ಪರಿಷ್ಕರಿಸಿ, ಆದೇಶ ಹೊರಡಿಸಿದೆ.
ಬೆಳೆಹಾನಿ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ತುಂಬಿ,ಬೆಳೆಹಾನಿಯಾದ ಫೋಟೊ,ಆಧಾರ್ ಕಾರ್ಡ್,ಉತಾರ/ಪಹಣೆ,ಬ್ಯಾಂಕ್ ಫಾಸ್ ಬುಕ್ ನ್ನು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಿ
ಬೆಳೆಹಾನಿ ಪರಿಹಾರ ನಿಮ್ಮ ಖಾತೆಗೆ ಜಮಾ ಆಗಿರುವ ಕುರಿತು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿ.
https://landrecords.karnataka.
ವೆಬ್ ಸೈಟ್ open ಆದ ಮೇಲೆ ಆಧಾರ ಸಂಖ್ಯೆ ಮೇಲೆ click ಮಾಡಿ.
ನಂತರ Calamity Type "Flood" ಅಂತ select ಮಾಡಿ,Year"2023-24" select ಮಾಡಿ.
ನಿಮ್ಮ ಆಧಾರ್ ನಂಬರ್ ಹಾಕಿ,ನಂತರ captch type ಮಾಡಿ,ವಿವರಗಳನ್ನು ಪಡೆಯಲು/fetch details ಮೇಲೆ ಕ್ಲಿಕ್ ಮಾಡಿ
ನಿಮಗೆ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿರುವ ಕುರಿತು ಇಲ್ಲಿ ಮಾಹಿತಿ ಸಿಗುತ್ತದೆ.
ಪರಿಹಾರದ ಹಣ ಇನ್ನು ಜಮಾ ಆಗದಿದ್ದರೆ “ಹಣ ಸಂಧಾಯವಾಗಿಲ್ಲ/Payment not made” ಎಂದು ತೋರಿಸುತ್ತದೆ.
ಬೆಳೆಹಾನಿ ಜಮಾ ಆಗದೇ ಇದ್ದರೆ, ಕಂದಾಯ ಇಲಾಖೆಯನ್ನು ಸಂಪರ್ಕಿಸಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 5kg ಅಕ್ಕಿ ಜೊತೆ ಅಗಸ್ಟ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253
Ration card ekyc-ರೇಷನ್ ಕಾರ್ಡ್ ನಂಬರ್ ಹಾಕಿ,ಇಕೆವೈಸಿ ಚೆಕ್ ಮಾಡಿ
ಅಗಸ್ಟ್ 31 ರೊಳಗೆ ಇಕೆವೈಸಿ ಕಡ್ಡಾಯ,ಇಲ್ಲದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ ಎಂದು ಆಹಾರ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ
ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-status ಮೇಲೆ ಕ್ಲಿಕ್ ಮಾಡಿ
ನಂತರ DBT Status ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ select ಮಾಡಿ
ನಂತರ "Status of Ration Card/ಪಡಿತರ ಚೀಟಿ ವಿವರ"ಮೇಲೆ ಕ್ಲಿಕ್ ಮಾಡಿ
ನಂತರ without OTP Select ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ರೇಷನ್ ಕಾರ್ಡ್ ನ ಸಂಪೂರ್ಣ ವಿವರ,ನಿಮ್ಮ ಕುಟುಂಬದಲ್ಲಿ ಎಷ್ಟು ಜನರ ಇಕೆವೈಸಿ ಆಗಿದೆ,ಎಷ್ಟು ಜನರ ಇಕೆವೈಸಿ ಬಾಕಿ ಇದೆ ಎಂಬ ವಿವರ ಹಾಗೂ ಇಲ್ಲಿಯವರೆಗೂ ಎಷ್ಟು ಅಕ್ಕಿ ಪಡೆದಿದ್ದಿರಿ ಎಂಬ ಮಾಹಿತಿ ಸಿಗಲಿದೆ
Cancelled ration card list-ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ,ಇಲ್ಲಿದೆ ರದ್ದಾದ ರೇಷನ್ ಕಾರ್ಡ್ ಲಿಸ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ
ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ ಎಂದು ಆಹಾರ ಸಚಿವ K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವರು ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ, ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದು K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.
ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ, ಯೆಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ ಎಂದರು.ಅದೇ ರೀತಿ ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ K.H ಮುನಿಯಪ್ಪ ಹೇಳಿದರು. ನೀತಿ ಸಂಹಿತಿ ಜಾರಿ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಜೊತೆಗೆ ಪಡಿತರಕಾರ್ಡ್ ಗೆ ಕೂಡಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.
ಪಡಿತರದಾರರಿಗೆ ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಆಂಧ್ರ ಹಾಗೂ ತೆಲಂಗಾಣ ಅಕ್ಕಿ ನೀಡಲು ಮುಂದಾಗಿದೆ, ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ಅಕ್ಕಿ ನೀಡುವ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ . ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೇವೆ, ಕೆಜಿಗೆ 34 ರೂ ದರದಲ್ಲಿ ಅಕ್ಕಿ ನೀಡುವಂತೆ ಕೇಳಿದ್ದೇವೆ. ಸದ್ಯ, 5 ಕೆಜಿ ಅಕ್ಕಿ ಬದಲಾಗಿ ಜನರಿಗೆ ಹಣ ಹಾಕುತ್ತಿದ್ದೇವೆ, ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.5 ಕೆಜಿ ಅಕ್ಕಿ ಬದಲು ಇದುವರೆಗೆ 1 ಕೋಟಿ ಕುಟುಂಬಕ್ಕೆ 556 ಕೋಟಿ ಹಣ ಜಮಾ ಮಾಡಲಾಗಿದೆ ಎಂದರು.
Annabhagya amount-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅಗಸ್ಟ 10 ರಂದು ಅನ್ನಭಾಗ್ಯ ಅಕ್ಕಿ ಮತ್ತು ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್