Ganga Kalyan yojane-ಗಂಗಾ ಕಲ್ಯಾಣ ಯೋಜನೆಯಡಿ ಬೊರ್ವೇಲ್ ಕೊರೆಸಲು 3.5 ಲಕ್ಷ ಸಬ್ಸಿಡಿ, ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

<Krushirushi> <ಗಂಗಾಕಲ್ಯಾಣ ಯೋಜನೆ> <ಗಂಗಾಕಲ್ಯಾಣಯೋಜನೆ> <ಗಂಗಾಕಲ್ಯಾಣ ಯೋಜನೆ 2023> <Ganga Kalyan yojana 2023> <Gangakalyanyojane2023> <Freeborewell> <Free borewell> <ಉಚಿತ ಬೋರ್ ವೆಲ್> <ಉಚಿತಬೋರ್ವೇಲ್>

Ganga Kalyan yojane-ಗಂಗಾ ಕಲ್ಯಾಣ ಯೋಜನೆಯಡಿ ಬೊರ್ವೇಲ್ ಕೊರೆಸಲು 3.5 ಲಕ್ಷ ಸಬ್ಸಿಡಿ, ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

Ganga Kalyan yojane-ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೊರ್ವೇಲ್ ಕೊರೆಸಲು ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

https://kmdconline.karnataka.gov.in/Portal/login

ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,captcha code ಹಾಕಿ Next ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಗೆ ಬರುವ OTP ಹಾಕಿ,continue ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ Digilocker account ತೆರೆದುಕೊಳ್ಳುತ್ತದೆ, Allow ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 6 ಸಂಖ್ಯೆಯ mPIN ಹಾಕಿ ಸಲ್ಲಿಸಿ ಕ್ಲಿಕ್ ಮಾಡಿ

ನಂತರ ಅಗತ್ಯ ದಾಖಲೆಗಳನ್ನು ಅಪ್ಲೌಡ್ ಮಾಡಿ ಅರ್ಜಿ ಸಲ್ಲಿಸಿ

ಅಥವಾ

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ಅರ್ಜಿ ನಮೂನೆಯನ್ನು ಭರ್ತಿ ಮಾಡಿ,ದೇವರಾಜ ಅರಸು ಇಲಾಖೆಗೆ ಸಲ್ಲಿಸಿ

https://kvcdc.karnataka.gov.in/uploads/media_to_upload1658122511.pdf

ಯೋಜನೆಯಡಿ ಸಣ್ಣ ಹಾಗೂ ಅತೀ ಸಣ್ಣ ರೈತರು ಅರ್ಜಿ ಸಲ್ಲಿಸಿ ಉಚಿತವಾಗಿ ಕೊಳವೆ ಬಾವಿ/ ತೆರೆದ ಬಾವಿಯ ಸೌಲಭ್ಯ ಪಡೆಯಬಹುದಾಗಿದ್ದು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರಕಾರದ ಬಜೆಟ್‌ನಲ್ಲಿ ಬಿಡುಗಡೆಯಾದ ಅನುದಾನದ ಆಧಾರದ ಮೇಲೆ ಗಂಗಾ ಕಲ್ಯಾಣ ಯೋಜನೆಗೆ ಹಣ ಬಿಡುಗಡೆ ಆಗುತ್ತದೆ.

ಅಂದರೆ ಆಯಾ ನಿಗಮಗಳಲ್ಲಿ ಅದರದ್ದೇ ಆದ ನಿಯಮಗಳು ಜಾರಿಯಲ್ಲಿವೆ.

ಆಯ್ಕೆ ಪಟ್ಟಿ ಮತ್ತು ವಿಧಾನ ಹೇಗೆ?


ಜಿಲ್ಲಾ ವ್ಯವಸ್ಥಾಪಕರು ಪ್ರತೀ ಜಿಲ್ಲೆಯಲ್ಲಿ ಜಾಹೀರಾತಿನ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸುತ್ತಾರೆ. ಆನ್‌ಲೈನ್‌ನಲ್ಲಿ ದಾಖಲಾತಿಯೊಂದಿಗೆ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾ ವ್ಯವಸ್ಥಾಪಕರು ಗಮನಿಸಿ ಶಾಸಕರ ನೇತೃತ್ವದ ತಾಲೂಕು ಸಮಿತಿಗೆ ಅರ್ಜಿ ವರ್ಗಾಯಿಸುತ್ತಾರೆ. ಅನಂತರ ಸಮಿತಿಯು ಸಂಬಂಧಿಸಿದ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸುತ್ತದೆ. ಈ ಸಂಬಂಧ ಗಂಗಾ ಕಲ್ಯಾಣ ಯೋಜನೆಯ ವಿವರಗಳನ್ನು https://kmvstdcl.karnataka.gov.in/info-2/Ganga+Kalyana+Scheme/en ನಲ್ಲಿ ಪಡೆಯಬಹುದಾಗಿದೆ. ಅಲ್ಲದೇ ಹೆಚ್ಚಿನ ಮಾಹಿತಿಗಾಗಿ ಅರ್ಹರು +91 08022864720ಕ್ಕೆ ಸಂಪರ್ಕಿಸಬಹುದು.

ಏನಿದು ಗಂಗಾ ಕಲ್ಯಾಣ?


ಬೋರ್‌ವೆಲ್‌ ಕೊರೆಯುವ ಮೂಲಕ ಹಾಗೂ ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆಯಾಗಿದೆ. ಅಲ್ಲದೇ ಈ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಿ ಪಂಪ್‌-ಮೋಟಾರ್‌ ಅಳವಡಿಸುವುದಾಗಿದೆ.

ಎಲ್ಲೆಲ್ಲಿ ಅರ್ಜಿ? 
1. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
2. ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ
3. ಪರಿಶಿಷ್ಟ ಜಾತಿ- ವರ್ಗಗಳ ಅಭಿವೃದ್ಧಿ ನಿಗಮ
4. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
5. ವಿಶ್ವಕರ್ಮ ಅಭಿವೃದ್ಧಿ ನಿಗಮ
6. ಉಪ್ಪಾರ ಅಭಿವೃದ್ಧಿ ನಿಗಮ
7. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ
8. ನಿಜಗುಣ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ

ಅರ್ಹರು ಯಾರ್ಯಾರು?
ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು.
ಪ್ರವರ್ಗ 1, 2ಎ, 3ಎ, 3ಬಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು.
ಕನಿಷ್ಠ 1.20 ಎಕ್ರೆ ಗರಿಷ್ಠ 5 ಎಕ್ರೆ ಜಮೀನು ಹೊಂದಿರಬೇಕು.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಯ ರೈತರಿಗೆ ಕನಿಷ್ಠ 1 ಎಕ್ರೆ ಇದ್ದರೆ ಸಾಕು
ಅರ್ಜಿದಾರ ಯಾವುದೇ ಕೇಂದ್ರ-ರಾಜ್ಯ ಸರಕಾರದ ಹುದ್ದೆಯಲ್ಲಿ ಇರಬಾರದು
ರಾಜ್ಯ ಖಾಯಂ ನಿವಾಸಿ ಆಗಿರಬೇಕು
ಅರ್ಜಿದಾರರು 18-55 ವರ್ಷಗಳ ನಡುವೆ ಇರಬೇಕು
9. ಬೋವಿ ಸಮುದಾಯದ ಅಭಿವೃದ್ಧಿ ನಿಗಮ

ವೈಯಕ್ತಿಕ ಬೋರ್‌ವೆಲ್‌ಗೆ‌ ಠೇವಣಿ
1. ನೋಂದಣಿ ಶುಲ್ಕ – 50 ರೂ. ಪ್ಲಸ್‌ ಶೇ.18 ಜಿಎಸ್‌ಟಿ
2. ಭದ್ರತಾ ಠೇವಣಿ ಶುಲ್ಕ- 1290 ರೂ., 1 ಎಚ್‌ಪಿಗೆ
3. ಮೀಟರ್‌ ಸುರಕ್ಷ ಠೇವಣಿ 3 ಸಾವಿರ ರೂ.,
4. ಮೀಟರ್‌ ಬಾಕ್ಸ್‌ 2100 ರೂ.
5. ಮೇಲ್ವಿಚಾರಣ ಶುಲ್ಕ 150 ಪ್ಲಸ್‌ ಶೇ.18 ಜಿಎಸ್‌ಟಿ

ಅರ್ಜಿ ಸಲ್ಲಿಕೆಗೆ ಸೆ.18 ಕೊನೇ ದಿನ
ಅಂತರ್ಜಲ ಕಡಿಮೆಯಾಗಿರುವ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಅನ್ವಯವಾಗುತ್ತದೆ. ಇತರ ಜಿಲ್ಲೆಗಳಿಗೆ 3 ಲಕ್ಷ ರೂ.ಗಳನ್ನು ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಕೆಗೆ ಸೆ.18 ಕೊನೇ ದಿನವಾಗಿದ್ದು ಅರ್ಹ ರೈತರು https://kmvstdcl.karnataka.gov.ininfo-2/Ganga+ Kalyana+Scheme/en P ಕ್ಕೆ ಭೇಟಿ ನೀಡಬಹುದಾಗಿದೆ.

ಏನೇನು ಬೇಕು? 
ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಫ‌ಲಾನುಭವಿಗಳ ಭಾವಚಿತ್ರ, ಬ್ಯಾಂಕ್‌ ಪಾಸ್‌ ಬುಕ್‌, ಹೊಲದ ದಾಖಲೆ, ಜಾತಿ-ಆದಾಯ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಸ್ವಯಂ ಘೋಷಿತ ಪತ್ರ ಅವಶ್ಯ.


Gangakalyan-2023:ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್ ವೆಲ್ ಕೊರೆಸಲು 4 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

ಉದ್ದೇಶ:

ಗ್ರಾಮಾಂತರ ಕೃಷಿ ಕಾರ್ಮಿಕರು ಕಡಿಮೆ ಜಮೀನು ಹೊಂದಿರುವವರು ಮಳೆಯ ನೀರನ್ನು ಅವಲಂಬಿಸಿಕೊಂಡು ಕೃಷಿ ಮಾಡುವುದು ಕಷ್ಟಕರವಾಗಿರುತ್ತದೆ. ಅವರಿಗೆ ಕೊಳವೆ ಬಾವಿ ಅಥವಾ ತೆರೆದ ಬಾವಿ ತೆಗೆಸುವುದರಿಂದ ವಾಣಿಜ್ಯ ಫಸಲುಗಳನ್ನು ಬೆಳೆದು, ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ಅನುಕೂಲವಾಗುತ್ತದೆ.ಬೆಳಗಾವಿ, ಬಾಗಲಕೋಟೆ, ಬಿಜಾಪುರ ಮುಂತಾದ ಕಡೆಗಳಲ್ಲಿ ಸಮೀಪದಲ್ಲಿಯೇ ನದಿಗಳು ಹರಿಯುವುದರಿಂದ ತೆರೆದ ಬಾವಿಗಳಿಗೆ ಹೆಚ್ಚಿನ ಬೇಡಿಕೆ ಇದೆ.ಕೊಳವೆಬಾವಿಗಳಿ ಅವಶ್ಯವಿರುವಲ್ಲಿ ಕೊಳವೆಬಾವಿಗಳನ್ನು ಮತ್ತು ತೆರೆದಬಾವಿಗಳ ಅವಶ್ಯಕತೆ ಇರುವಲ್ಲಿ ತೆರೆದ ಬಾವಿಗಳಿಗೆ ಆರ್ಥಿಕ ಸೌಲಭ್ಯ ಒದಗಿಸಿದರೆ, ಕೃಷಿಕನ ಜೀವನ ಸುಧಾರಿಸುತ್ತದೆ.ಈ ಹಿನ್ನೆಲೆಯಲ್ಲಿ, ಈ ಯೋಜನೆಗೆ ನಿಗಮದ ಮೂಲಕ ಆರ್ಥಿಕ ಸಹಾಯವನ್ನು ನೀಡಲು ಉದ್ದೇಶಿಸಿದೆ.

ಸೌಲಭ್ಯ:


೧. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆ: ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಫಲಾನುಭವಿಯು ಕನಿಷ್ಟ ಒಂದು (೦೧) ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಟ ಎರಡು (೦೨) ಎಕರೆ ಜಮೀನು ಇರಬೇಕು.
ಘಟಕ ವೆಚ್ಚ:ರೂ.೪,೦೦,೦೦೦/- ಗಳು,ಸಹಾಯಧನ : ರೂ.೩,೫೦,೦೦೦/-, ಸಾಲ ರೂ.೫೦,೦೦೦/- ಶೇ.೪ ರ ಬಡ್ಡಿ ದರ, ಮರುಪಾವತಿ ಅವಧಿ: ೩೬ ತಿಂಗಳು.

ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಆರ್ ಆರ್ ಸಂಖ್ಯೆ ನೀಡಿದ ನಂತರ ವಿದ್ಯುತ್ ಸರಬರಾಜು ಕಂಪನಿಗಳಿಗೆ ವಿದ್ಯುದ್ದೀಕರಣ ವೆಚ್ಚವಾಗಿ ಪ್ರತಿ ಕೊಳವೆ ಬಾವಿಗೆ ರೂ.೫೦,೦೦೦/- ಗಳಂತೆ ಘಟಕ ವೆಚ್ಚದಲ್ಲಿ ಪಾವತಿಸಲಾಗುವುದು.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ ಬಾವಿಯ ಘಟಕ ವೆಚ್ಚ ರೂ.೪,೦೦,೦೦೦/- ಗಳು. ಇದರಲ್ಲಿ ರೂ.೩,೫೦,೦೦೦/- ಗಳ ಸಹಾಯಧನ ಹಾಗೂ ರೂ.೫೦,೦೦೦/- ಗಳ ಸಾಲ ಪಡೆಯಲು ಅವಕಾಶವಿರುತ್ತದೆ.

೨. ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆ: ಒಕ್ಕಲಿ ಸಮುದಾಯಕ್ಕೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರು ಹೊಂದಿರುವ ೦೮ ಎಕರೆ ಮತ್ತು ಅದಕ್ಕಿಂತ ಹೆಚ್ಚಿನ ಜಮೀನಿಗೆ ಸಾಮೂಹಿಕ ನೀರಾವರಿ ಸೌಲಭ್ಯ.

ಘಟಕ ವೆಚ್ಚ: ೮-೧೫ ಎಕರೆ ಜಮೀನಿಗೆ ರೂ.೬,೦೦,೦೦೦/- ಗಳ ವೆಚ್ಚದಲ್ಲಿ ಎರಡು ಕೊಳವೆಬಾವಿ ಹಾಗೂ ೧೫ ಎಕರೆಗಿಂತ ಹೆಚ್ಚು ಜಮೀನು ಒಳಪಡುವ ಘಟಕಗಳಿಗೆ ನಿಗಧಿತ ಘಟಕ ವೆಚ್ಚ ರೂ.೮,೦೦,೦೦೦/- ಗಳ ವೆಚ್ಚದಲ್ಲಿ ೦೩ ಕೊಳವೆಬಾವಿಗಳನ್ನು ಕೊರೆಯಿಸಿ ಪಂಪ್ ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡುವುದು ಹಾಗೂ ವಿದ್ಯುದ್ದೀಕರಣಕ್ಕೆ ಠೇವಣಿ ಪಾವತಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದು. ಇದು ಪೂರ್ಣ ಅನುದಾನವಾಗಿರುತ್ತದೆ.

೩. ತೆರೆದ ಬಾವಿ: ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಮಲೆನಾಡು ಪ್ರದೇಶದ ಜಿಲ್ಲೆ ತೆರೆದಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

೪. ಸಾಮೂಹಿಕ ಏತ ನೀರಾವರಿ ಯೋಜನೆ:ಭೂಮಟ್ಟದಲ್ಲಿ ಶಾಶ್ವತವಾಗಿ ದೊರೆಯುವ ಜಲ ಸಂಪನ್ಮೂಲಗಳಾದ ನದಿ. ಕೆರೆ, ಹಳ್ಳ ಇವುಗಳಿಗೆ ಮೋಟಾರು ಅಳವಡಿಸಿ, ಪೈಪ್‌ಲೈನ್ ಮೂಲಕ ಖುಷ್ಕಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.


ಘಟಕ ವೆಚ್ಚ: ಸಾಮೂಹಿಕ ನೀರಾವರಿ ಕೊಳವೆ ಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಈ ಸೌಲಭ್ಯ ಒದಗಿಸಲಾಗುವುದು.

೫. ಕರ್ನಾಟಕ ಅಂರ್ತಜಲ ಅಧಿನಿಯಮದನ್ವಯ ಈ ಕೆಳಕಂಡ ೪೩ ತಾಲ್ಲೂಕುಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕೊಳವೆ ಬಾವಿ ಕೊರೆಯುವ ಮುನ್ನ ಅಂರ್ತಜಲ ಪ್ರಾಧಿಕಾರದಿಂದ ಅನುಮತಿ ಪಡೆಯತಕ್ಕದ್ದು. ಅನುಮತಿ ಪಡೆದಂತಹ ಫಲಾನುಭವಿಗಳ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಯಲು ಕ್ರಮವಹಿಸಲಾಗುವುದು.

ಈ ಮೇಲ್ಕಂಡ ಯೋಜನೆಗಳ ಅನುಷ್ಟಾನಕ್ಕಾಗಿ ಮಾರ್ಗಸೂಚಿಗಳು ಈ ಕೆಳಕಂಡಂತಿವೆ:


೧. ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.೯೮,೦೦೦/- ಗಳ ಮಿತಿಯಲ್ಲಿರಬೇಕು.
೨. ಅರ್ಜಿದಾರರ ವಯಸ್ಸು ೧೮-೫೫ ವರ್ಷದೊಳಗಿರಬೇಕು.
೩. ಕರ್ನಾಟಕ ರಾಜ್ಯ ಖಾಯಂ ನಿವಾಸಿಯಾಗಿರಬೇಕು- ಕನಿಷ್ಟ ೧೦ ವರ್ಷ.
೪. ಈ ಹಿಂದೆ ಸರ್ಕಾರದ / ನಿಗಮಗಳ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.
೫. ಮೂರು ವರ್ಷಗಳ ಒಳಗಾಗಿ ಸಾಲ ಮತ್ತು ಬಡ್ಡಿಯನ್ನು ಚುಕ್ತಾ ಮಾಡುವುದು.
೬. ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
೭. ಅರ್ಜಿದಾರರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಉಳಿತಾಯ ಖಾತೆ ಹೊಂದಿರಬೇಕು.
೮. ಈ ಯೋಜನೆಯ ಅಡಿಯಲ್ಲಿ ಕೈಗೊಳ್ಳುವ ಚಟುವಟಿಕೆಯ ಬಗ್ಗೆ ತರಬೇತಿ / ಅನುಭವ / ತಿಳುವಳಿಕೆ ಹೊಂದಿರಬೇಕು.
೯. ನಿಗಮದ ಮಂಡಳಿ ಸಭೆಯ ವಿವೇಚನಾ ಕೋಟಾದಡಿಯಲ್ಲಿ ಶೇ.೧೦ ರಷ್ಟು ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
೧೦. ಫಲಾನುಭವಿಗಳ ಆಯ್ಕೆಯನ್ನು ಸಂಬಂಧಿಸಿದ ಶಾಸಕರ ಅಧ್ಯಕ್ಷತೆಯ ಸಮಿತಿಯ ಮೂಲಕ ಮಾಡಲಾಗುವುದು.

Gruhalakshmi amount-1.10 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ

ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಭಾರತದ ಅತಿದೊಡ್ಡ ಕಾರ್ಯಕ್ರಮವೇ ಗೃಹಲಕ್ಷ್ಮಿ. ಸುಮಾರು 1.10 ಕೋಟಿ ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಿದ್ದು ಎಲ್ಲರ ಖಾತೆಗೂ 2 ಸಾವಿರ ಹಣ ಸೇರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಆ. 30 ರಂದು ಮೈಸೂರಿನಲ್ಲಿ ನಡೆಯುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಭಾಗವಹಿಸಲಿದ್ದು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಭಾಗದ ಹೆಣ್ಣು ಮಕ್ಕಳು ನೇರವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮ 10,400 ಜಾಗಗಳಲ್ಲಿ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳಲ್ಲಿ, ಮೂರು ಪಂಚಾಯಿತಿಗಳಿಗೆ ಒಂದು ಕಡೆಯಂತೆ, ವಾರ್ಡ್‌ಗಳಲ್ಲಿ ಒಂದು ಕಡೆ, ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದೆ. ಜೂಮ್ ಆನ್‌ಲೈನ್‌ ವೇದಿಕೆಯಲ್ಲೂ ಪ್ರಸಾರವಾಗಲಿದೆ ಎಂದು ಹೇಳಿದರು.

ಇಡೀ ದೇಶದಲ್ಲೇ ವಿನೂತನವಾದ ಕಾರ್ಯಕ್ರಮ ಇದಾಗಿದೆ. ಪಂಚಾಯಿತಿ ಮಟ್ಟದ ಒಂದಷ್ಟು ಜನ ಹೆಣ್ಣು ಮಕ್ಕಳು ರಾಷ್ಟ್ರೀಯ ನಾಯಕರ ಜೊತೆ ನೇರವಾಗಿ ಸಂವಾದ ಮಾಡಬಹುದು. ಮೈಸೂರಿನಲ್ಲಿ ಇರುವ ವೇದಿಕೆಯ ಅಳತೆಯಷ್ಟೇ 140 ಅಡಿಯ ಪರದೆಯ ವ್ಯವಸ್ಥೆ ಮಾಡಿದ್ದು ಆ ಪರದೆಯಲ್ಲಿ ಎಲ್ಲಾ ಪಂಚಾಯಿತಿಗಳ ವೀಕ್ಷಕರನ್ನು ತೋರಿಸಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಫಲಾನುವಭವಿಗಳು ಮನೆಯ ಮುಂದೆ " ನಾ ನಾಯಕಿ", "ಗೃಹಲಕ್ಷ್ಮೀ" ಎಂದು ರಂಗೋಲಿ ಹಾಕಿ ಸಂಭ್ರಮಿಸುವ ಕಾರ್ಯಕ್ರಮವೂ ಇದೆ ಎಂದಿದ್ದಾರೆ.

ಪ್ರತಿ ಯಜಮಾನಿಯ ಮನೆಗೆ ಹೋಗಿ ಅಧಿಕಾರಿಗಳು ಖುದ್ದಾಗಿ ಆಹ್ವಾನ ಪತ್ರಿಕೆ ನೀಡುತ್ತಾರೆ. ಯಾವುದೇ ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಇದು ಪಕ್ಷಾತೀತ ಕಾರ್ಯಕ್ರಮ. ಎಲ್ಲಾ ಪಕ್ಷದ ಶಾಸಕರು ಸಂಭ್ರಮದಿಂದ ಭಾಗವಹಿಸಬಹುದು. 5 ಜಿಲ್ಲೆಗಳ ಮಹಿಳೆಯರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಪಿಡಿಓಗಳು, ಅಂಗನವಾಡಿ ಕಾರ್ಯಕರ್ತರು ಅರ್ಜಿ ಹಾಕಿದ ಮಹಿಳೆಯರಲ್ಲಿ ಪಂಚಾಯಿತಿವಾರು ಆಯ್ಕೆಮಾಡಿ ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಮೊದಲ 4 ಜಿಲ್ಲೆಗಳಿಗೆ ಸಾಂಕೇತಿಕವಾಗಿ ಅಗಸ್ಟ್ 30 ರಂದು ಹಣ ಬಿಡುಗಡೆ

ಮೈಸೂರು,ಮಂಡ್ಯ,ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯವರಿಗೆ ಮೊದಲ ಕಂತಿನ ಹಣ ಬಿಡುಗಡೆ

ನಂತರ ಉಳಿದ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಜುಲೈ 19ರಿಂದ ಅಗಸ್ಟ್ 25 ರವರೆಗೆ ಅರ್ಜಿ ಸಲ್ಲಿಸಿದವರಿಗೆ ಮೊದಲ ಕಂತಿನ ಹಣ ಬಿಡುಗಡೆ

ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅಗಸ್ಟ 30ರಂದು 2000 ರೂಪಾಯಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253