Bele sala Manna-2 ಲಕ್ಷದವರೆಗಿನ ಬೆಳೆಸಾಲ ಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ,ಹಾಗಾದರೆ ಕುಮಾರಸ್ವಾಮಿ 2018ರಲ್ಲಿ ಯಾರಿಗೆಲ್ಲಾ ಎಷ್ಟು ಸಾಲಮನ್ನಾ ಮಾಡಿದ್ದಾರೆ ಹೀಗೆ ಚೆಕ್ ಮಾಡಿ
<Krushirushi> <ಬೆಳೆಸಾಲಮನ್ನಾ> <ಬೆಳೆಸಾಲ> <croploan> <croploanwavier> <belesala> <belesalamanna> <loan waiver>
Bele sala Manna-2 ಲಕ್ಷದವರೆಗಿನ ಬೆಳೆಸಾಲ ಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ,ಹಾಗಾದರೆ ಕುಮಾರಸ್ವಾಮಿ 2018ರಲ್ಲಿ ಯಾರಿಗೆಲ್ಲಾ ಎಷ್ಟು ಸಾಲಮನ್ನಾ ಮಾಡಿದ್ದಾರೆ ಹೀಗೆ ಚೆಕ್ ಮಾಡಿ
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ವಿಧಾನಸಭೆಯಲ್ಲಿ ಗುರುವಾರ ಬರಗಾಲ ವಿಷಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಪ್ರಚಾರದ ಮೇಲೆ ಇರುವ ಆಸಕ್ತಿ ರೈತರ ಬಗ್ಗೆ ಇಲ್ಲ ಎಂದು ಟೀಕಿಸಿದ್ದಾರೆ.
ಸರ್ಕಾರ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಬೇಕು. ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ತಕ್ಷಣ 10,000 ಕೋಟಿ ರೂ. ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ಸರ್ಕಾರ ಅಸಡ್ಡೆ ತೋರಿಸುತ್ತಿದೆ ಎಂದು ಟೇಕಿಸಿದ ಕುಮಾರಸ್ವಾಮಿ, ಕಳೆದ ಆರು ತಿಂಗಳಿಂದ ಕೇವಲ ಗ್ಯಾರಂಟಿಗಳ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ. ರೈತರಿಗೆ ಬರೆ ಎಳೆಯುತ್ತಿದೆ. ಬೆಳೆ ನಾಶದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲ ಮನ್ನಾ ಮಾಡಬೇಕು. ಈ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.
Crop loan wavier-2018 ರಲ್ಲಿ ಯಾರಿಗೆಲ್ಲಾ ಎಷ್ಟು ಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
2018 ಡಿಸೆಂಬರ್ 31ರವರೆಗಿನ 2 ಲಕ್ಷದವರೆಗಿನ ಎಲ್ಲಾ ರೈತರ ಸಾಲಮನ್ನಾ ಆಗಿದೆ. ಆದರೆ ಕೆಲವು ರೈತರ ಸಾಲಮನ್ನಾ ಆಗಿಲ್ಲ,ಅದಕ್ಕೆ ಕಾರಣ ಪಹಣೆ,ಆಧಾರ್,ರೇಷನ್ ಕಾರ್ಡ್,ಬ್ಯಾಂಕ್ ಪಾಸ್ ಬುಕ್ ನಲ್ಲಿ ಹೆಸರು ಬೇರೆ ಬೇರೆ ಇರುವುದು.
ಹಾಗಾದರೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಸಾಲಮನ್ನಾ ಅರ್ಹತೆ ಹಾಗೂ ದಾಖಲೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಬಹಳಷ್ಟು ರೈತರು ತಮ್ಮ ಸಾಲಮನ್ನಾ ಆಗಿಲ್ಲ ಎಂದು ಕೇಳುವುದುಂಟು.ಆದರೆ ಸಾಲಮನ್ನಾ ಮಾಡಲು ಕೆಲವು ದಾಖಲೆ ಮತ್ತು ಅರ್ಹತೆಗಳಿವೆ.
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ರೈತರ ಸಾಲಮನ್ನಾ ಆಗಬೇಕಾದರೆ ಏನೇಲ್ಲಾ ದಾಖಲೆ ಹಾಗೂ ಅರ್ಹತೆ ಹೊಂದಿರಬೇಕು ಎಂದು ತಿಳಿಯಬಹುದು
Sala manna-ಸಾಲಮನ್ನಾಗೆ ಬೇಕಾದ ದಾಖಲೆ ಮತ್ತು ಅರ್ಹತೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
Salamanna-ಯಾರಿಗೆಲ್ಲಾ ವಾಣೆಜ್ಯ ಬ್ಯಾಂಕ್ ಹಾಗೂ ಸೊಸೈಟಿ ಸಾಲಮನ್ನಾ ಆಗಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-198