Cm meets pm for drought relief fund-ಬರಪರಿಹಾರಕ್ಕಾಗಿ ಪ್ರಧಾನ ಮಂತ್ರಿಗಳನ್ನು ಬೇಟಿಯಾದ ಮುಖ್ಯಮಂತ್ರಿಗಳು, ಯಾರಿಗೆ ಎಷ್ಟು ಪರಿಹಾರ ಮನವಿ ಮಾಡಿದರು?

<Krushirushi> <ಬರಪರಿಹಾರ ಪಟ್ಟಿ> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>

Cm meets pm for drought relief fund-ಬರಪರಿಹಾರಕ್ಕಾಗಿ ಪ್ರಧಾನ ಮಂತ್ರಿಗಳನ್ನು ಬೇಟಿಯಾದ ಮುಖ್ಯಮಂತ್ರಿಗಳು, ಯಾರಿಗೆ ಎಷ್ಟು ಪರಿಹಾರ ಮನವಿ ಮಾಡಿದರು?

Cm meets pm for drought relief fund-ಬರಪರಿಹಾರಕ್ಕಾಗಿ ಪ್ರಧಾನ ಮಂತ್ರಿಗಳನ್ನು ಬೇಟಿಯಾದ ಮುಖ್ಯಮಂತ್ರಿಗಳು, ಯಾರಿಗೆ ಎಷ್ಟು ಪರಿಹಾರ ಮನವಿ ಮಾಡಿದರು?


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4,663 ಕೋಟಿ ರೂ. ಇನ್ಸುಟ್ ಸಬ್ಸಿಡಿ, 12,577 ಕೋಟಿ ರೂ.ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.


ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್.ಡಿ.ಆ‌ರ್.ಎಫ್. ನಿಂದ 4,663 ಕೋಟಿ ರೂ. ಇನ್ಸುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.


ರೈತರಿಗೆ ಇನ್ಸುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದೇನೆ. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬ‌ರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆ‌ರ್.ಎಫ್. ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಸುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ.ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ