Belehani parihara bidugade-ಇಂದಿನಿಂದ ರೈತರ ಖಾತೆಗೆ ಬೆಳೆಹಾನಿ ಪರಿಹಾರ ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <ಬೆಳೆಹಾನಿ ಹಣ ಬಿಡುಗಡೆ> <Belehani hana bidugade> <drought relief fund released> <Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>
Belehani parihara bidugade-ಇಂದಿನಿಂದ ರೈತರ ಖಾತೆಗೆ ಬೆಳೆಹಾನಿ ಪರಿಹಾರ ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಇನ್ನು ಮೂರ್ನಾಲ್ಕು ದಿನಗಳಲ್ಲಿ ಕಳೆದ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರದ ಹಣ ಕೈಸೇರಲಿದೆ. ಕೇಂದ್ರದಿಂದ ಬಂದಿರುವ 3,454 ಕೋಟಿ ರೂ. ಅನ್ನು ಇನ್ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡಿಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ. ಈಗಾಗಲೇ ರೈತರಿಗೆ ವಿತರಿಸಿರುವ ಗರಿಷ್ಠ 2,000 ರೂ.ವರೆಗಿನ ಪರಿಹಾರ ಮೊತ್ತವನ್ನು ಕಡಿತ ಮಾಡಿಕೊಂಡು ಬಾಕಿ ಮೊತ್ತವನ್ನು ಡಿಬಿಟಿ ಮೂಲಕ ಖಾತೆಗೆ ಜಮಾ ಮಾಡಲಾಗುತ್ತಿದೆ
ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಖುಷ್ಕಿ, ನೀರಾವರಿ, ತೋಟಗಾರಿಕೆ ಬೆಳೆಗಳಿಗೆ ನಿಗದಿಯಾಗಿರುವ ಮೊತ್ತವನ್ನು ಅರ್ಹ ಫಲಾನುಭವಿ ರೈತರ ಖಾತೆಗೆ ಜಮಾ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಮೊದಲಿಗೆ 15 ಲಕ್ಷ ರೈತರಿಗೆ ಜಮಾ ಮಾಡುವ ಪ್ರಕ್ರಿಯೆ ನಡೆಯಲಿದೆ. ಉಳಿದ ರೈತರಿಗೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪರಿಹಾರದ ಹಣ ತಲುಪಲಿದೆ ಎಂದು ಕಂದಾಯ ಇಲಾಖೆ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ರಾಜ್ಯದಲ್ಲಿ 2ನೇ ಹಂತದ ಚುನಾವಣೆ ವೇಳೆಗೆ ಬಹುತೇಕ ಬೆಳೆ ನಷ್ಟ ಪರಿಹಾರ ರೈತರಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ.
ಆದೇಶಕ್ಕೆ ಕಾಯದಿರಲು ನಿರ್ಧಾರ
ಕಳೆದ ಏ. 24ರಂದು ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತಾಧಿಕಾರ ಸಮಿತಿ ಸಭೆಯ ನಿರ್ಣಯದಂತೆ ಏ. 26ರಂದು ರಾಜ್ಯಕ್ಕೆ 3,454 ಕೋಟಿ ರೂ. ಬೆಳೆ ನಷ್ಟ ಮಂಜೂರು ತೀರ್ಮಾನ ಪ್ರಕಟಿಸಲಾಗಿತ್ತು. ಈ ಸಂಬಂಧ ಮಂಜೂರಾತಿ ಆದೇಶ ಇನ್ನೂ ರಾಜ್ಯ ಸರಕಾರಕ್ಕೆ ತಲುಪಿಲ್ಲ. ಆದರೆ, ಪೂರ್ಣ ಹಣ ರಾಜ್ಯ ಸರಕಾರಕ್ಕೆ ಬಂದಿದೆ. ಕೇಂದ್ರದಿಂದ ಬಿಡುಗಡೆಯಾಗಿರುವ ಹಣ ವೆಚ್ಚಕ್ಕೆ ರಾಜ್ಯ ಸರಕಾರ ಆದೇಶ ಹೊರಡಿಸಲು ಕೇಂದ್ರದ ಮಂಜೂರಾತಿ ಆದೇಶ ತಲುಪದಿರುವುದು ಅಡ್ಡಿಯಾಗಿದೆ. ಆದರೆ, ಕೇಂದ್ರದ ಪತ್ರಕ್ಕೆ ಕಾಯುತ್ತಾ ಕುಳಿತರೆ ವಿಳಂಬವಾಗಲಿದೆ ಎಂಬ ಕಾರಣಕ್ಕೆ ರೈತರ ಖಾತೆಗೆ ಜಮಾ ಮಾಡಲು ಸರಕಾರ ತೀರ್ಮಾನ ಕೈಗೊಂಡಿದೆ.
ಕೇಂದ್ರದಿಂದ ಬಂದಿರುವ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡಲು ಚುನಾವಣಾ ಆಯೋಗದ ಸಹಮತಿ ಪಡೆಯಲಾಗಿದ್ದು, 'ಫ್ರೂಟ್ಸ್' ಸಾಫ್ಟ್ವೇರ್ನಲ್ಲಿ ಯಾವ ರೈತರಿಗೆ ಎಷ್ಟು ಪರಿಹಾರ ಎಂಬುದನ್ನು ಲೆಕ್ಕ ಹಾಕಲಾಗಿದೆ. ಕಳೆದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಪರಿಹಾರಕ್ಕೆ ಅರ್ಹರಾಗಿದ್ದ 33.60 ಲಕ್ಷ ರೈತರ ಪೈಕಿ ಅರ್ಧ ಎಕರೆ ಮತ್ತು ಅದಕ್ಕಿಂತ ಕಡಿಮೆ ವಿಸ್ತೀರ್ಣದ ರೈತರಿಗೆ ಮಧ್ಯಂತರ ಪರಿಹಾರದಲ್ಲೇ ಪೂರ್ಣ ಮೊತ್ತ ತಲುಪಿದ್ದು, ಉಳಿದ ರೈತರಿಗೆ ಈಗ ಬಾಕಿ ಪರಿಹಾರ ಮೊತ್ತ ತಲುಪಲಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದರು.
ಮೂರು ದಿನಗಳಲ್ಲಿ ಎಲ್ಲರ ಖಾತೆಗೆ ಹಣ ಜಮಾ
''ಕೇಂದ್ರ ಸರಕಾರ ಮಂಜೂರಾತಿ ಪತ್ರ ನೀಡದ ಕಾರಣ ಬಿಡುಗಡೆ ಮಾಡಿರುವ 3,454 ರೂ. ಮೊತ್ತದಲ್ಲಿ ಬೆಳೆ ನಷ್ಟ, ಕುಡಿಯುವ ನೀರು, ಜಾನುವಾರು ಮೇವು, ಜೀವನೋಪಾಯ ನಷ್ಟ ಪರಿಹಾರ ಒಳಗೊಂಡು ಯಾವುದಕ್ಕೆ ಎಷ್ಟು ಎಂಬ ಸ್ಪಷ್ಟತೆ ರಾಜ್ಯ ಸರಕಾರಕ್ಕೆ ಇಲ್ಲ. ಪರಿಹಾರಕ್ಕೆ ಕಾಯುತ್ತಿರುವ ರೈತರ ಹಿತದೃಷ್ಟಿಯಿಂದ ಕೇಂದ್ರದಿಂದ ಬಂದಿರುವ ಹಣವನ್ನು ಇನ್ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡುವುದು. ಕೇಂದ್ರದಿಂದ ಮಂಜೂರಾತಿ ಪತ್ರ ತಲುಪಿದ ಬಳಿಕ ಬೇರೆ ಉದ್ದೇಶಕ್ಕೆ ಬಳಸಬೇಕಾದ ಮೊತ್ತವನ್ನು ರಾಜ್ಯದ ಬೊಕ್ಕಸದಿಂದಲೇ ಭರಿಸುವ ತೀರ್ಮಾನಕ್ಕೆ ಬರಲಾಗಿದೆ,'' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
''ಯಾವ ಕಾರಣಕ್ಕೆ ಇನ್ನೂ ಕೇಂದ್ರದ ಮಂಜೂರಾತಿ ಪತ್ರ ಬಂದಿಲ್ಲ ಎಂಬುದು ಖಚಿತವಾಗಿಲ್ಲ. ಆದರೆ, ಅದಕ್ಕಾಗಿ ಕಾಯುತ್ತಾ ಕುಳಿತರೆ ರೈತರಿಗೆ ತೊಂದರೆಯಾಗಲಿದೆ. ಜತೆಗೆ, ಚುನಾವಣೆ ಸಮಯವಾದ ಕಾರಣ ಇನ್ನೂ ಪರಿಹಾರ ಬಂದಿಲ್ಲ ಎಂಬ ಅತೃಪ್ತಿ ನಿವಾರಿಸಲು ಈ ತೀರ್ಮಾನ ಮಾಡಲಾಗಿದೆ. ಅದಕ್ಕಾಗಿ ಕೇಂದ್ರದ ಮಂಜೂರಾತಿ ಪತ್ರ ಇಲ್ಲದೆಯೂ ಪರಿಹಾರದ ಆದೇಶ ಹೊರಡಿಸಲಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎಲ್ಲ ರೈತರ ಖಾತೆಗಳಿಗೆ ಹಣ ಜಮಾ ಆಗಲಿದೆ,'' ಎಂದು ಹೇಳಿದರು.
ಯಾರಿಗೆಲ್ಲಾ ಸಿಗಲಿದೆ ಬರಪರಿಹಾರ ಹೀಗೆ ಚೆಕ್ ಮಾಡಿ
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ (FID)ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ
ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಲಿದೆ
ಮಳೆಯಾಶ್ರಿತ ಬೆಳೆಗಳು: ₹8,500 ಬೆಲೆ
ನೀರಾವರಿ ಬೆಳೆಗಳು: ₹17,000 ರೂ
ಬಹುವಾರ್ಷಿಕ ಬೆಳೆಗಳು: ₹22,500 ಪ್ರತಿ ಬೆಲೆ
ಬರಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ
ಈಗಾಗಲೇ ಜಮಾ ಆಗಿರುವ ಸ್ಟೇಟಸ್ ಹೀಗ್ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ