50% ಸಬ್ಸಿಡಿಯಲ್ಲಿ 25 ಲಕ್ಷದವರೆಗೆ ಕೃಷಿ ಭೂಮಿ ಖರೀದಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Land purchase subsidy scheme 2024

<Krushirushi> <ಭೂಒಡೆತನ ಯೋಜನೆ> <Boo odethana Yojana> <land purchase subsidy> <subsidy for land purchase>

50% ಸಬ್ಸಿಡಿಯಲ್ಲಿ 25 ಲಕ್ಷದವರೆಗೆ ಕೃಷಿ ಭೂಮಿ ಖರೀದಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Land purchase subsidy scheme 2024

50% ಸಬ್ಸಿಡಿಯಲ್ಲಿ 25 ಲಕ್ಷದವರೆಗೆ ಕೃಷಿ ಭೂಮಿ ಖರೀದಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Land purchase subsidy scheme 2024 

ಈ ಯೋಜನೆಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾಕೃಷಿ ಕಾರ್ಮಿಕರನ್ನು ಭೂ ಒಡೆಯರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿರುತ್ತದೆ. ಖರೀದಿಸುವ ಜಮೀನು ಫಲಾಪೇಕ್ಷಿಯ ವಾಸಿಸುವ ಸ್ಧಳದಿಂದ 10 ಕಿಮೀ ವ್ಯಾಪ್ತಿಯಲ್ಲಿರಬೇಕು. ಘಟಕ ವೆಚ್ಚದ ಮಿತಿಯೊಳಗೆ ಕನಿಷ್ಟ 2.00 ಎಕರೆ ಖುಷ್ಕಿ, 1.00 ಎಕರೆ ನೀರಾವರಿ, 1/2 ಎಕರೆ ಭಾಗಾಯ್ತು ಖರೀದಿಸಿ ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರ ಹೆಸರಿನಲ್ಲಿ ನೊಂದಾಯಿಸಲಾಗುವುದು.

ಈ ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿಯನ್ನು ನೀಡುವ ಅಧಿಕಾರವನ್ನು ಆಯಾ ಜಿಲ್ಲೆಯಲ್ಲಿನ ಜಿಲ್ಲಾಧಿಕಾರಿಗಳಿಗೆ ನೀಡಲಾಗಿರುತ್ತದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸೀಮಿತಗೊಂಡಂತೆ ಈ ಯೋಜನೆಯಡಿ ಘಟಕ ವೆಚ್ಚವನ್ನು ರೂ.25.00 ಲಕ್ಷಗಳು ಮತ್ತು ಉಳಿದ 26 ಜಿಲ್ಲೆಗಳಲ್ಲಿ ಘಟಕ ವೆಚ್ಚವನ್ನು ರೂ.20.00 ಲಕ್ಷಗಳಿಗೆ ನಿಗದಿಪಡಿಸಲಾಗಿರುತ್ತದೆ. ಒಟ್ಟು ಘಟಕ ವೆಚ್ಚದಲ್ಲಿ ಶೇ.50 ರಷ್ಟು ಸಹಾಯಧನ ಮತ್ತು ಶೇ.50 ರಷ್ಟು ಅವಧಿಸಾಲವಾಗಿರುತ್ತದೆ.

ಅವಧಿಸಾಲವನ್ನು ನಿಗಮದಿಂದಲೇ ಭರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಶೇ.6ರ ದರದಲ್ಲಿ ಬಡ್ಡಿ ವಿಧಿಸಲಾಗುತ್ತದೆ.  ಸಾಲ ಮತ್ತು ಬಡ್ಡಿಯನ್ನು 10 ವರ್ಷಗಳ ಅವಧಿಯಲ್ಲಿ ವಾರ್ಷಿಕ ಸಮ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗಿರುತ್ತದೆ. ಜಮೀನು ಮಾರಾಟ ಮಾಡುವ ಭೂ ಮಾಲೀಕರು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬಾರದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ಜಮೀನಿನ ದರವನ್ನು ನಿಗದಿಪಡಿಸುತ್ತದೆ.

ಡಾ| ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯು ಪರಿಶಿಷ್ಟ ಜಾತಿ- ಪಂಗಡ ನಿಗಮದ ಪ್ರತಿಷ್ಠಿತ ಯೋಜನೆಯಾಗಿದೆ. ಈ ಯೋಜನೆಯಡಿ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಭೂಮಿಯನ್ನು ಖರೀದಿಸಿ ಶೇ.50 ಸಹಾಯಧನದೊಂದಿಗೆ ನೀಡಲಾಗುವುದು. ಆದಿಕರ್ನಾಟಕ, ಆದಿ ದ್ರಾವಿಡ ಸಹಿತ ಇತರ ಉಪಜಾತಿಗೆ ಸೇರಿರುವ ಅರ್ಹರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?
ಪ್ರತೀ ವರ್ಷ ಎಪ್ರಿಲ್‌ ಬಳಿಕ ಅರ್ಜಿಗಳನ್ನು ಆಹ್ವಾನಿಸಲಾಗುವುದು. ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಆನ್‌ಲೈನ್‌ ಸುವಿಧ ವೆಬ್‌ಸೈಟ್‌ ಅಥವಾ ಆ್ಯಪ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗೆ ಬೇಕಾಗುವ ದಾಖಲೆ ಏನು?
1. ಅರ್ಜಿದಾರರ ಭಾವಚಿತ್ರ(Photo)
2. ಜಾತಿ- ಆದಾಯ ಪ್ರಮಾಣ ಪತ್ರ(Caste certificate)
3. ಪಡಿತರ ಚೀಟಿ/ ಮತದಾರರ ಗುರುತಿನ ಚೀಟಿ/ ಆಧಾರ್‌ ಕಾರ್ಡ್‌ ಪ್ರತಿ(Aadhaar)
4. ಯೋಜನಾ ವರದಿ/ ದರ ಪಟ್ಟಿ(Detail project report)


ಯೋಜನೆ ಜಾರಿಗೊಳಿಸಿರುವ ನಿಗಮಗಳು

1.ಅಂಬೇಡ್ಕರ್‌ ಅಭಿವೃದ್ಧಿ ನಿಗಮ
2. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ

ಯಾರ್ಯಾರು ಅರ್ಹರು?
ಪರಿಶಿಷ್ಟ ಜಾತಿ-ಪಂಗಡ ಸಮುದಾಯದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರು ಆಗಿರಬೇಕು(ಕಳೆದ 15 ವರ್ಷದಿಂದ ರಾಜ್ಯದ ನಿವಾಸಿ ಆಗಿರಬೇಕು).
ಈ ಯೋಜನೆಗೆ ಜಮೀನು ಮಾರಾಟ ಮಾಡುವ ಭೂ ಮಾಲಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬಾರದು.
8 ವರ್ಷದಿಂದ 50 ವರ್ಷ ವಯೋಮಿತಿ ಹೊಂದಿರಬೇಕು.
ಕುಟುಂಬದ ಯಾವುದೇ ಸದಸ್ಯರು ಸರಕಾರಿ/ ಅರೆ ಸರಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿ ಇರಬಾರದು.
ಈ ಹಿಂದೆ ಕುಟುಂಬದವರು ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮೀಣ ಭಾಗಕ್ಕೆ 1.5 ಲಕ್ಷ ರೂ. ಹಾಗೂ ನಗರ ನಿವಾಸಿಗಳಿಗೆ 2 ಲಕ್ಷ ರೂ. ಮಿತಿಯಲ್ಲಿರಬೇಕು.

ಸಿಗುವ ಸೌಲಭ್ಯ
ಈ ಯೋಜನೆಯಡಿ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಘಟಕ ವೆಚ್ಚ 15 ಲಕ್ಷ ರೂ.ಗಳಲ್ಲಿ ಲಭ್ಯವಾಗುವಷ್ಟು ಖುಷ್ಕಿ ಅಥವಾ ತರಿ/ ಭಾಗಾಯ್ತು ಜಮೀನನ್ನು ಖರೀದಿಸಿ ನೀಡಲಾಗುತ್ತದೆ. (ಬೆಂಗಳೂರು ನಗರ, ಬೆಂ. ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಘಟಕದ ವೆಚ್ಚ 20 ಲಕ್ಷ ರೂ. ಆಗಿದೆ.) ಇದರಲ್ಲಿ ಶೇ.50ರಷ್ಟು ಸಹಾಯಧನ ಸಿಗುತ್ತದೆ. ಉಳಿದ ಶೇ.50 ಸಾಲವಾಗಿರುತ್ತದೆ. ಈ ಸಾಲವನ್ನು 10 ವಾರ್ಷಿಕ ಸಮ ಕಂತುಗಳಲ್ಲಿ ಶೇ.6ರ ಬಡ್ಡಿದರದಲ್ಲಿ ಮರು ಪಾವತಿ ಮಾಡಬೇಕಿದೆ. ಫ‌ಲಾನುಭವಿಯು ವಾಸಿಸುವ ಸ್ಥಳದಿಂದ ಗರಿಷ್ಠ 10 ಕಿ.ಮೀ.ವ್ಯಾಪ್ತಿಯೊಳಗೆ ಜಮೀನನ್ನು ಖರೀದಿಸಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://kmvstdcl.karnataka.gov.in/info-2/Land+Purchase+Scheme/kn