MSIL tour package-ಕೇವಲ 20 ಸಾವಿರದಲ್ಲಿ 18 ದಿನಗಳ ಉತ್ತರ ಭಾರತ ಪ್ರವಾಸ

<Krushirushi> <MSIL tour package> <tour package> <Golden chariot train> <Train> <goa> <Train time to Goa> <tourism train> <ಗೊಲ್ಡನ್ ಚಾರಿಯಟ್> <ಗೋವಾ> <Krushirushi> <Subsidy for Dwaraka> <tour subsidy> <ದ್ವಾರಕಾ ಸಬ್ಸಿಡಿ>

MSIL tour package-ಕೇವಲ 20 ಸಾವಿರದಲ್ಲಿ 18 ದಿನಗಳ ಉತ್ತರ ಭಾರತ ಪ್ರವಾಸ

MSIL tour package-ಕೇವಲ 20 ಸಾವಿರದಲ್ಲಿ 18 ದಿನಗಳ ಉತ್ತರ ಭಾರತ ಪ್ರವಾಸ


ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್‌ ಪ್ಯಾಕೇಜುಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಬುಧವಾರ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್‌ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಎಂಎಸ್‌ಐಎಲ್‌ ಮೊದಲಿನಿಂದಲೂ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಗೆ ಹೆಸರಾಗಿದೆ. ಈಗ ಟೂರ್‌ ಪ್ಯಾಕೇಜುಗಳ ಮೂಲಕ ಸಂಸ್ಥೆಯು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಈ ಪ್ಯಾಕೇಜುಗಳ ಅಡಿಯಲ್ಲಿ‌ ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆದಿಕೈಲಾಸ ಮತ್ತು ವಾರಣಾಸಿಗೆ ಪ್ರವಾಸ ಆಯೋಜಿಸಲಾಗುವುದು. ಮುಖ್ಯವಾಗಿ ನಾವು ಆಫ್-ಲೈನ್‌ ಪ್ರವಾಸಿಗರಿಗೆ ಆದ್ಯತೆ ಕೊಡುತ್ತಿದ್ದೇವೆ,ʼ ಎಂದಿದ್ದಾರೆ.

ಈ ಪ್ಯಾಕೇಜುಗಳಲ್ಲಿ ಸುರಕ್ಷತೆ, ಶುಚಿರುಚಿಯಾದ ಆಹಾರ, ಮನೆ ಬಾಗಿಲಿನಿಂದಲೇ ಕರೆದುಕೊಂಡು ಹೋಗಿ ವಾಪಸ್‌ ಅಲ್ಲಿಗೇ ಬಿಡುವುದು, ಸಹಾಯಕರ ನೆರವು, ಮಾಸಿಕ ಕಂತುಗಳಲ್ಲಿ ಹಣ ಪಾವತಿ, ಲಕ್ಕಿ ಡ್ರಾ, ಕೈಗೆಟುಕುವ ವೆಚ್ಚದಲ್ಲಿ ಉತ್ತರ ಭಾರತ ಪ್ರವಾಸ ಮುಂತಾದ ಸೌಲಭ್ಯ ಮತ್ತು ಆಕರ್ಷಣೆಗಳಿವೆ. ಗುಂಪು ಪ್ರವಾಸ ಮಾಡಲು ಬಯಸುವವರಿಗೆ ಪ್ರತಿ ಬ್ಯಾಚಿನಲ್ಲಿ ಗರಿಷ್ಠ 100 ಮಂದಿಗೆ ಅವಕಾಶ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆಂದು ʻಸ್ಟಡಿ-ಕಂ-ಪ್ಲೆಷರ್‌ ಟೂರ್), ಇಕೋ ಟೂರಿಸಂ ಮತ್ತು ಕರಾವಳಿ ಪ್ರದೇಶಗಳ ವೀಕ್ಷಣೆ ಇರುವ ಕೋಸ್ಟಲ್‌ ಟೂರಿಸಂ ಮುಂತಾದ ಪ್ಯಾಕೇಜುಗಳನ್ನು ರೂಪಿಸಲು ಎಂಎಸ್‌ಐಎಲ್‌ ಚಿಂತಿಸುತ್ತಿದೆ. ಸಂಸ್ಥೆಯು ಸದ್ಯಕ್ಕೆ ರೂಪಿಸಿರುವ ಪ್ಯಾಕೇಜಿನಲ್ಲಿ ಕೇವಲ 20 ಸಾವಿರ ರೂ. ವೆಚ್ಚದಲ್ಲಿ 15 ರಿಂದ 18 ದಿನಗಳ ಉತ್ತರ ಭಾರತ ಪ್ರವಾಸ ಮಾಡಿಕೊಂಡು ಬರಬಹುದು ಎಂದು ಅವರು ವಿವರಿಸಿದ್ದಾರೆ.

ಸರಕಾರಿ ಉದ್ಯೋಗಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮಾಡಿರುವ ಪ್ಯಾಕೇಜಿನಲ್ಲಿ ಮೊದಲು ಶೇ. 50ರಷ್ಟು ಹಣ ಪಾವತಿಸಿ, ಪ್ರವಾಸ ಕೈಗೊಳ್ಳಬಹುದು. ಪ್ರವಾಸ ಮುಗಿಸಿಕೊಂಡು ಬಂದ ಬಳಿಕ ಉಳಿದ ಶೇ. 50ರಷ್ಟು ಹಣವನ್ನು ಮಾಸಿಕ ಕಂತುಗಳಲ್ಲಿ ಕಟ್ಟಬಹುದು. ಹಾಗೆಯೇ ಲಕ್ಕಿ ಡ್ರಾದಲ್ಲಿ ವಿಜೇತರಾಗುವ ಅದೃಷ್ಟಶಾಲಿಗಳು ಡ್ರಾ ನಂತರದ ಹಣವನ್ನು ಪಾವತಿಸಬೇಕಾಗಿಲ್ಲ. ಈ ಎಲ್ಲ ಪ್ಯಾಕೇಜುಗಳಲ್ಲೂ ಎಂಎಸ್‌ಐಎಲ್‌ ವತಿಯಿಂದ ಟೂರ್‌ ಮ್ಯಾನೇಜರ್‌ ಅಥವಾ ಸಹಾಯಕರೊಬ್ಬರು ಜತೆಗಿರಲಿದ್ದು, ಪ್ರವಾಸಿಗರ ಬೇಕು-ಬೇಡಗಳನ್ನು ಆಲಿಸಿ, ನೆರವು ನೀಡಲಿದ್ದಾರೆ ಎಂದು ಅವರು ನುಡಿದಿದ್ದಾರೆ.

ಪ್ರವಾಸಿಗರಿಗೆ ಆದಷ್ಟು ಕಡಿಮೆ ವೆಚ್ಚದಲ್ಲಿ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಸಾಧ್ಯವಾಗಬೇಕು ಎನ್ನುವ ಆಶಯದೊಂದಿಗೆ ಎಂಎಸ್‌ಐಎಲ್‌ ಮೂಲಕ ಈ ಹೆಜ್ಜೆ ಇಡಲಾಗುತ್ತಿದೆ. ಖಾಸಗಿ ಸಂಸ್ಥೆಗಳ ದರಕ್ಕೆ ಹೋಲಿಸಿದರೆ ನಾವು ನಿಗದಿ ಪಡಿಸಿರುವ ದರ ತುಂಬಾ ಕಡಿಮೆ ಇದೆ. ಹಾಗೆಯೇ ಪ್ರತಿಯೊಂದು ಸೇವೆಯನ್ನೂ ಗುಣಮಟ್ಟದೊಂದಿಗೆ ಒದಗಿಸಲಾಗುವುದು ಎಂದು ಪಾಟೀಲ್‌ ಹೇಳಿದ್ದಾರೆ.

ಎಲ್ಲೆಲ್ಲಿಗೆ ಪ್ರವಾಸ ಪ್ಯಾಕೇಜು?


ಎಂಎಸ್‌ಐಎಲ್‌ ಸಂಸ್ಥೆಯ ಟೂರ್ಸ್‌ ಅಂಡ್‌ ಟ್ರಾವೆಲ್ಸ್‌ ವಿಭಾಗವು ಈ ಟೂರ್‌ ಪ್ಯಾಕೇಜುಗಳನ್ನು ನಿರ್ವಹಿಸಲಿದೆ. ಇದರಡಿಯಲ್ಲಿ ಕಾಶಿ, ಅಯೋಧ್ಯೆ, ಪುರಿ, ಆದಿ ಕೈಲಾಸ ಮುಂತಾದ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳಿಗೆ ಪ್ರವಾಸಿಗರನ್ನು ಅದು ಕರೆದೊಯ್ಯಲಿದೆ.

ಜೊತೆಗೆ ದುಬೈ, ಸಿಂಗಾಪುರ್‌, ವಿಯಟ್ನಾಂ, ಶ್ರೀಲಂಕಾ, ನೇಪಾಳ, ಥಾಯ್ಲೆಂಡ್‌ ಮತ್ತು ಯೂರೋಪಿನ ಹಲವು ದೇಶಗಳಿಗೂ ಎಂಎಸ್‌ಐಎಲ್‌ ಟೂರ್‌ ಪ್ಯಾಕೇಜುಗಳನ್ನು ರೂಪಿಸಿದೆ. ಈ ಪ್ರವಾಸಗಳಿಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಸಾರ್ವಜನಿಕರು ಮಾಹಿತಿ ಪಡೆದುಕೊಳ್ಳಬಹುದು.

24/7 ಸಹಾಯವಾಣಿ ಸೌಲಭ್ಯ


ಪ್ರವಾಸಿಗರ ಅನುಕೂಲಕ್ಕೆ ಎಂಎಸ್‌ಐಎಲ್‌ 24/7 ಸಹಾಯವಾಣಿ ಮತ್ತು ವಾಟ್ಸ್ಯಾಪ್‌ ಸೌಲಭ್ಯವನ್ನೂ (080-45888882, 9353645921) ಹೊಂದಿದೆ. ಇದರ ನಿರ್ವಹಣೆಗಾಗಿ ಪ್ರತ್ಯೇಕ ತಂಡವೇ ಇರಲಿದೆ. ಒಂದು ನಂಬರಿನಲ್ಲಿ ಯಾರಾದರೂ ಮಾತನಾಡುತ್ತಿದ್ದರೆ, ಅದು ತಾನಾಗಿಯೇ ಮತ್ತೊಂದು ಸಂಖ್ಯೆಗೆ ಸಂಪರ್ಕ ಕಲ್ಪಿಸುವ ಕ್ಲೌಡ್‌ ಬೇಸ್ಡ್‌ ಟೆಲಿಕಾಂ ಸಿಸ್ಟಮ್‌ ಅನ್ನು ಅಳವಡಿಸಿಕೊಳ್ಳಲಾಗಿದೆ.

 

ದ್ವಾರಕಾ,ನಾಗೇಷ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ಯಾತ್ರೆಗೆ 15,000 ಸಹಾಯಧನ,ನಿಮ್ಮ ಬುಕ್ಕಿಂಗ್ ಹೀಗೆ ಮಾಡಿ-Subsidy for Dwaraka

ಕಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ - ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಪ್ಯಾಕೇಜ್ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ.

ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ.

ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ

ಸೌಲಭ್ಯಗಳು
• ಪ್ಯಾಕೇಜ್‌ನಲ್ಲಿ 3 ಟೈರ್ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ
• ಪ್ರಯಾಣಿಸುವಾಗ ಆಧುನಿಕ ಪ್ಯಾ೦ಟ್ರಿ ಕಾರಿನಲ್ಲಿ ತೆಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುವುದು
• ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿ೦ದ ವೈದ್ಯಕೀಯ ಸಹಾಯ ವ್ಯವಸ್ಥೆ


ರೈಲು ಹತ್ತುವ ಹಾಗೂ ಇಳಿಯುವ ಸ್ಥಳಗಳು

ಬೆಂಗಳೂರು (SMVT), ತುಮಕೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹಾವೇರಿ, ಬೆಳಗಾವಿ

ದ್ವಾರಕಾ ಯಾತ್ರೆ ತೆರಳಲು ಇಚ್ಛಿಸಿದ್ದಲ್ಲಿ ದಾಖಲೆಗಳೊಂದಿಗೆ ಆಯುಕ್ತರ ಕಚೇರಿಗೆ ನೇರವಾಗಿ ಸೆಪ್ಟೆಂಬರ್ 20ರ ಒಳಗಾಗಿ ಮನವಿ ಸಲ್ಲಿಸಬಹುದಾಗಿದೆ.

ಬುಕ್ಕಿಂಗ್ಗಾಗಿ https://www.irctctourism.com/Karnatakbgaurav?searchKey=&tagType=&travelType=Domestic§or=All&bdar=6

ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ 9003140710, 8595931292, 8595931294, 9731641611, 8595931293, 8595931291 ಗೆ ಕರೆ ಮಾಡಿ ಟಿಕೆಟ್ ಬುಕ್ ಮಾಡಿಕೊಳ್ಳಬಹುದು.