Maize MSP-ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ.MSP ದರದಲ್ಲಿ ಮೆಕ್ಕೆಜೋಳ ಖರೀದಿ

<Maize MSP> <Maize> <Minimum support price> <ಬೆಂಬಲ ಬೆಲೆ> <ಮೆಕ್ಕೆಜೋಳ>

Maize MSP-ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ.MSP ದರದಲ್ಲಿ ಮೆಕ್ಕೆಜೋಳ ಖರೀದಿ

Maize MSP-ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ.MSP ದರದಲ್ಲಿ ಮೆಕ್ಕೆಜೋಳ ಖರೀದಿ

ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿದರು.

ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ. ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ. ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ. ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಹೇಳಿದರು.

ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮೆಕ್ಕೆ ಜೋಳ ಖರೀದಿ ಮಾಡಲು ಸರ್ಕಾರ ಮುಂದಾಗಿದೆ. ಕೆಎಂಎಫ್ ಮೂಲಕ 50 ಸಾವಿರ ಮೆಟ್ರಿಕ್ ಟನ್ ಖರೀದಿಗೆ ನಿರ್ಧಾರಿಸಿದೆ. ಡಿ.1ರಿಂದ ರಾಜ್ಯದ ಐದು ಕಡೆ ಖರೀದಿ ಕೇಂದ್ರ ಓಪನ್ ಆಗಲಿದೆ.

KMF ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡಲಿದೆ.

ತಲಾ ಒಬ್ಬ ರೈತನಿಂದ ಗರಿಷ್ಟ 25 ಟನ್ ಮೆಕ್ಕೆಜೋಳ ಖರೀದಿ ಮಾಡಲಿದೆ. ಪ್ರತಿ ಟನ್ 2,400 ರೂ. ದರ ನಿಗಧಿ ಮಾಡಿದ್ದು MSP ದರದಲ್ಲಿ ಮೆಕ್ಕೆ ಜೋಳ ಖರೀದಿಗೆ ಮುಂದಾಗಿದೆ. ಗುಣಮಟ್ಟದ ಹಿನ್ನೆಲೆ ದರ ವ್ಯತ್ಯಾಸ ಕಂಡುಬಂದಿದೆ. ಮೆಕ್ಕೆಜೋಳ ತೇವಾಂಶ 14 ಡಿಗ್ರಿ ಇದ್ರೆ ಖರೀದಿ ಮಾಡಲಾಗುತ್ತೆ.

ಮೆಕ್ಕೆ ಜೋಳ ಮಾರಾಟ ಮಾಡುವ ರೈತರು ಮೊದಲು ನೊಂದಣಿ ಮಾಡಿಕೊಳ್ಳಬೇಕು.. ಕೃಷಿ ಇಲಾಖೆ, ಇ ಗರ್ವನೆನ್ಸ್, NIC ಮೂಲಕ ರೈತರು ನೋಂದಣಿ ಮಾಡಿಕೊಳ್ಳಬೇಕು. ರೈತರಿಗೆ ಖರೀದಿ ಕುರಿತು ಎಸ್ ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತೆ. ಆಗ ಖರೀದಿ ಕೇಂದ್ರದಲ್ಲಿ ಮೆಕ್ಕೆಜೋಳ ಮಾರಾಟ ಮಾಡಬೇಕು.

ಎಲ್ಲೆಲ್ಲಿ ಖರೀದಿ ಕೇಂದ್ರ..!?

1) ಗುಬ್ಬಿ

2) ಶಿಕಾರಿಪುರ

3) ಧಾರವಾಡ

4) ಹಾಸನ

5) ಬೆಂಗಳೂರಿನ ರಾಜನಕುಂಟೆ

ಸರ್ಕಾರ ಸೂಚನೆ ಹಿನ್ನೆಲೆ ಕೆಎಂಎಫ್ ನಿಂದ ಮೆಕ್ಕೆ ಜೋಳ ಖರೀದಿ ಮಾಡಲಾಗುತ್ತೆ. ಟೆಂಡರ್ ಮೂಲಕ 2,150 - 2250 ರೂ. ದರದಲ್ಲಿ ಖರೀದಿ ಮಾಡ್ತಿದ್ವಿ.. ಇದೀಗ ಸರ್ಕಾರ ಸೂಚನೆ ಹಿನ್ನೆಲೆ.. ರೈತರಿಂದಲೇ ನೇರವಾಗಿ 2400 ರೂ. ಖರೀದಿ ಮಾಡಲಿದ್ದೇವೆ ಎಂದು KMF MD ಶಿವಸ್ವಾಮಿ ಹೇಳಿಕೆ ನೀಡಿದರು.