Male munsuchane-ಈ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 25 ರವರೆಗೆ ಭಾರಿ ಮಳೆ,ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ?

<Krushirushi> <Rain forecast> <Skymet Rain prediction> <ಸ್ಕೈಮೇಟ್ ಮಳೆ ಮಾಹಿತಿ> <ಮಳೆ ಮಾಹಿತಿ> <Male Mahiti> <Rain alert> <Havamana munsuchane> <Rain forecast> <weather forecast> <Mungaru male> <IMD> <Indian metrologival department> <Mansoon> <Indian agriculture> <Agriculture department> <Indian agriculture depend on mansoon rain>

Male munsuchane-ಈ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 25 ರವರೆಗೆ ಭಾರಿ ಮಳೆ,ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ?

Male munsuchane-ಈ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 25 ರವರೆಗೆ ಭಾರಿ ಮಳೆ,ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ?

ಕರಾವಳಿ ಭಾಗ-ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಸುಳ್ಯ, ಸುಬ್ರಮಣ್ಯ, ಪುತ್ತೂರು ಬಂಟ್ವಾಳ, ಕಾಸರಗೋಡು ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. 
ಈಗಿನಂತೆ ಅಕ್ಟೊಬರ್ 25ರ ತನಕ ಕರಾವಳಿಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು ಭಾಗ : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಬಯಲುಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಅಕ್ಟೊಬರ್ 24ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು :  ಇವತ್ತು ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದೆ). 
ಈಗಿನಂತೆ ಅಕ್ಟೊಬರ್ 25ರ ತನಕ ಹಿಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಅರಬ್ಬಿ ಸಮುದ್ರದಿಂದ ಶ್ರೀಲಂಕಾ ಕರಾವಳಿ ಮೂಲಕ ಬಂಗಾಳಕೊಲ್ಲಿ ಕಡೆ ಬೀಸುವ ಗಾಳಿಯು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ( ಆಗ್ನೇಯದಿಂದ ವಾಯವ್ಯ ಕಡೆಗೆ) ದಕ್ಷಿಣ ಒಳನಾಡು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. 
ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಒಕ್ಟೊಬರ್ 24ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿದ್ದು, ಇದರಿಂದ ಹಿಂಗಾರು ಮಾರುತಗಳಿಗೆ ಭಾರಿ ಹಿನ್ನಡೆ ಉಂಟಾಗುವ ಲಕ್ಷಣಗಳಿವೆ. 

ಈಗಿನಂತೆ ಅಕ್ಟೊಬರ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.