ಮನೆಹಾನಿಗೆ 50 ಸಾವಿರ ಪರಿಹಾರ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Mane hani parihara 2024
<Krushirushi> <ಬೆಳೆಹಾನಿ ಪರಿಹಾರ 2024-25> <Bele parihara status 2024-25> <input subsidy for croploss> <ಬೆಳೆಹಾನಿ ಪಾವತಿ ವಿಫಲ ಪ್ರಕರಣ> <Belehani parihara payment failed cases> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <Nere Hani parihara> <ನೆರೆ ಹಾನಿ ಪರಿಹಾರ> <Nere parihara> <Mane hani parihara 2024> <ಮನೆ ಹಾನಿ ಪರಿಹಾರ 2024>
ಮನೆಹಾನಿಗೆ 50 ಸಾವಿರ ಪರಿಹಾರ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Mane hani parihara 2024
ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪ್ರವಾಹ ಸಂತ್ರಸ್ತರ `ಪರಿಹಾರ ಮೊತ್ತ' ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರವನ್ನು ನೀಡುವ ಕುರಿತು ಸರ್ಕಾರದ ಆದೇಶ ಸಂಖ್ಯೆ: ಕಂಇ 258 ໖໖ 2024, 2៥: 01.08.2024 ថ ನಿಗದಿಪಡಿಸಿರುವ ಪರಿಹಾರ ಮೊತ್ತವನ್ನು ಈ ಕೆಳಕಂಡಂತೆ ಪಾವತಿಸಲು ನಿರ್ದೇಶನಗಳನ್ನು ನೀಡಲಾಗಿದೆ.
1. ಸರ್ಕಾರದ ದಿನಾಂಕ: 01.08.2024 ರ ಆದೇಶದ ಕ್ರ.ಸಂ: 04 ರಲ್ಲಿ ತಿಳಿಸಿರುವಂತೆ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ಥಿಗೆ ಕನಿಷ್ಟ 4.6,500/- ಗಳಿಂದ ಗರಿಷ್ಟ 50,000/- ಗಳನ್ನು ಈ ಕೆಳಕಂಡಂತೆ ಪಾರದರ್ಶಕತೆ ಮಾನದಂಡಗಳನ್ವಯ ಅರ್ಹತೆಯನುಸಾರ ಪಾವತಿಸುವುದು.
2. ಅತಿವೃಷ್ಟಿ/ಪ್ರವಾಹದಿಂದ ಮನೆಯ ಗೋಡೆಗಳೊಂದಿಗೆ ಮೇಲ್ಮಾವಣಿ ಕುಸಿತ (Walls and roof collapse) (8.75% 3 ಹಾನಿಯಾದ ಮನೆಗಳನ್ನು ಸಂಪೂರ್ಣ ಹಾನಿಯಾದ ಮನೆಯೆಂದು ಪರಿಗಣಿಸಿ, ಸರ್ಕಾರದ ಇದೇ ಸಮಸಂಖ್ಯೆಯ ಆದೇಶ ದಿನಾಂಕ: 01-08-2024ರ ಕ್ರಮ ಸಂಖ್ಯೆ: 02 ರಲ್ಲಿನ ನಿರ್ದೇಶನದಂತೆ ಕ್ರಮವಹಿಸತಕ್ಕದ್ದು. )
3. ಮನೆಹಾನಿಯ ಪ್ರಮಾಣವನ್ನು ಈ ಮೇಲಿನಂತೆ ಗ್ರಾಮ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಹಾಯಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಇವರುಗಳು ಜಂಟಿಯಾಗಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸುವುದು. ಇದೆ ದಿನಾಂಕ: 01.08.2024 ರ ಆದೇಶದಲ್ಲಿ ನಿಗದಿಪಡಿಸಿರುವ ಕಾಲಮಿತಿಯೊಳಗೆ ನಿಯಮಾನುಸಾರ ಅರ್ಹ ಸಂತ್ರಸ್ಥರಿಗೆ ಪರಿಹಾರ ಪಾವತಿಸಲು ಕ್ರವಹಿಸುವುದು.
4. ಭಾಗಶಃ ಮನೆ ಹಾನಿಗಾಗಿ ರೂ.50,000/- ಗಳ ವರೆಗೆ ಪಾವತಿಸಲಾಗುವ ಮನೆ ಹಾನಿ ಪರಿಹಾರ ಪಡೆಯುವ ಸಂತ್ರಸ್ಥರ ವಿವರಗಳಾದ, ಹಾನಿಯಾದ ಮನೆಯ ಜಿ.ಪಿ.ಎಸ್. ಛಾಯಾಚಿತ್ರ, ಆರ್.ಆರ್. ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಜಿಲ್ಲಾಧಿಕಾರಿಗಳು ಕ್ರಮವಹಿಸತಕ್ಕದ್ದು.
5. ಪೂರ್ಣ ಹಾನಿಯಾದ ಮನೆಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ರೂ.1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ಹಂಚಿಕೆ ಪತ್ರವನ್ನು ಜಿಲ್ಲಾಧೀಕಾರಿಗಳ ಹಂತದಲ್ಲಿಯೇ RGRHCL ತಂತ್ರಾಂಶದ ಮೂಲಕ ವಿತರಿಸತಕ್ಕದ್ದು.
ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಈ ವಾರವೇ ಪರಿಹಾರ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ-Bele parihara list 2024 - https://krushirushi.in/Bele-parihara-list-2024