Mansoon rain-ಆಲಿಕಲ್ಲು ಮಳೆ ಸಹಿತ ಏಪ್ರೀಲ್ 23 ರವರೆಗೆ ಜಿಲ್ಲಾವಾರು ಮಳೆ ಮಾಹಿತಿ
2025ನೇ ಸಾಲಿನ ಭಾರತೀಯ ಹವಾಮಾನ ಇಲಾಖೆಯ ಮುಂಗಾರು ಪ್ರಥಮ ಸುತ್ತಿನ ( ಜೂನ್ - ಸೆಪ್ಟೆಂಬರ್ ) ವರದಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಇರುವ ಸಾಧ್ಯತೆಗಳನ್ನು ಹೇಳುತ್ತಿದೆ.

Mansoon rain-ಏಪ್ರೀಲ್ 23 ರವರೆಗೆ ಜಿಲ್ಲಾವಾರು ಮಳೆ ಮಾಹಿತಿ
ದಿನ 1 (ಏಪ್ರಿಲ್ 17, 2025):
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವಾಮಾನವಿರುತ್ತದೆ.
ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 50-60 ಕಿ.ಮೀ.) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ , ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನಾಳೆಯ ಹವಾಮಾನ
ದಕ್ಷಿಣ ಕನ್ನಡ ಜಿಲ್ಲೆ, ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆ ಇದೆ.
3ನೇ ದಿನ (ಏಪ್ರಿಲ್ 19, 2025):
*ಕರಾವಳಿ ಕರ್ನಾಟಕದಲ್ಲಿ ಮುಖ್ಯವಾಗಿ ಒಣ ಹವಾಮಾನ ಇರುವ ಸಾಧ್ಯತೆ ಹೆಚ್ಚು . ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
4ನೇ ದಿನ (ಏಪ್ರಿಲ್ 20, 2025):
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ (40-50 ಕಿ.ಮೀ) ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
*5ನೇ ದಿನ (ಏಪ್ರಿಲ್ 21, 2025) *:
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಏಪ್ರಿಲ್ 22, 2025 ರಂದು ಕರಾವಳಿ ಕರ್ನಾಟಕ ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 23, 2025 ರಂದು:
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.
18.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸೆಖೆ ಸ್ವಲ್ಪ ಜಾಸ್ತಿಯೇ ಇರಲಿದೆ.
ಈಗಿನಂತೆ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೊಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಎಪ್ರಿಲ್ 19 ಅಥವಾ 20 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಈಗಿನಂತೆ ಎಪ್ರಿಲ್ 20ರಿಂದ ದಕ್ಷಿಣ ಒಳನಾಡು ಹಾಗೂ 21 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
2025ನೇ ಸಾಲಿನ ಭಾರತೀಯ ಹವಾಮಾನ ಇಲಾಖೆಯ ಮುಂಗಾರು ಪ್ರಥಮ ಸುತ್ತಿನ ( ಜೂನ್ - ಸೆಪ್ಟೆಂಬರ್ ) ವರದಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಇರುವ ಸಾಧ್ಯತೆಗಳನ್ನು ಹೇಳುತ್ತಿದೆ.