Msp for green gram-ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು,ಸೂರ್ಯಕಾಂತಿ ಖರೀದಿ, ಯಾವ ಬೆಲೆಗೆ ಯಾವ ಜಿಲ್ಲೆಗಳಲ್ಲಿ ಖರೀದಿ ಮಾಡಲಾಗುವುದು?-Hesarukalu Bembala bele

<Krushirushi> <MSP> <Minimum support price> <Bembala bele> <Bembala bele Yojane> <msp for green gram> <msp for sunflower> <ರೈತ> <ಹಣ> <ಸಂದಾಯ> <ಸಹಾಯಧನ> <ಬೆಂಬಲಬೆಲೆ> <ಹೆಸರುಕಾಳು> <ಸೂರ್ಯಕಾಂತಿ> <ಬೆಳೆ> <ಬೆಳೆಸುದ್ದಿ>

Msp for green gram-ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು,ಸೂರ್ಯಕಾಂತಿ ಖರೀದಿ, ಯಾವ ಬೆಲೆಗೆ ಯಾವ ಜಿಲ್ಲೆಗಳಲ್ಲಿ ಖರೀದಿ ಮಾಡಲಾಗುವುದು?-Hesarukalu Bembala bele

Msp for green gram-ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು,ಸೂರ್ಯಕಾಂತಿ ಖರೀದಿ, ಯಾವ ಬೆಲೆಗೆ ಯಾವ ಜಿಲ್ಲೆಗಳಲ್ಲಿ ಖರೀದಿ ಮಾಡಲಾಗುವುದು?-Hesarukalu Bembala bele

ಕೇಂದ್ರ ಸರ್ಕಾರದಿಂದ ಹೆಸರುಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್ ಗೆ ₹8682 ( MSP) ಅಂತೆ ಖರೀದಿಗೆ ಅನುಮತಿ..

ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಮೌಲ್ಯ ದೊರೆಯದೇ ತೊಂದರೆ ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ನೆರವಿಗಾಗಿ MSP ಅಡಿ ಹೆಸರು ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು ರಾಜ್ಯದ ರೈತರ  ಹೆಸರುಕಾಳು ಬೆಳೆಯನ್ನು ಬೆಲೆ ಬೆಂಬಲ ಯೋಜನೆ , Price Support Scheme (PSS) ಅಡಿ ಖರೀದಿಗೆ ಅನುಮತಿ ನೀಡಿದ್ದು 2215 MT ಹೆಸರುಕಾಳು ಬೆಳೆಯನ್ನು Rs.8682 ಪ್ರತಿ ಕ್ವಿಂಟಲ್ ನಂತೆ ಖರೀದಿ ಮಾಡಲಾಗುವುದು. 

ಅದೇ ರೀತಿ ಸೂರ್ಯಕಾಂತಿ ಬೆಳೆಯನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಖರೀದಿಸಲು ಅನುಮೋದನೆ ನೀಡಿದ್ದು 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಬೆಳೆಯನ್ನು ಕೇಂದ್ರ ಸರ್ಕಾರ ಈ ಯೋಜನೆ ಅಡಿ ಖರೀದಿಸಲಿದೆ. 

ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ.
2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಪ್ರತಿ ಕ್ವಿಂಟಾಲ್ ಗೆ ರೂ.8,682ರಂತೆ ಗರಿಷ್ಠ 22,215 ಮೆಟ್ರಿಕ್ ಟನ್ ಎಫ್‌ಎಕ್ಯೂ ಗುಣಮಟ್ಟದ ಹೆಸರುಕಾಳುಗಳನ್ನು ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಖರೀದಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ಯಾದಗಿರಿ, ಬೀದರ್, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಸಲು ಅನುಮತಿ ನೀಡಿರುವುದಾಗಿ ಹೇಳಿದ್ದಾರೆ.

ಸೂರ್ಯಕಾಂತಿ ಖರೀದಿಗೆ ಗ್ರೀನ್ ಸಿಗ್ನಲ್


2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗದಿ ಪಡಿಸಿರುವಂತ ಪ್ರತಿ ಕ್ವಿಂಟಾಲ್ ಗೆ ರೂ.7,280ರಂತೆ ಗರಿಷ್ಠ 13,210 ಮೆಟ್ರಿಕ್ ಟನ್ ಎಫ್‌ಎಸ್ ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಖರೀದಿಸಲು ಅನುಮತಿ ನೀಡಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಗದಗ, ಕಲಬುರ್ಗಿ, ಕೊಪ್ಪಳ, ಮೈಸೂರು, ರಾಯಚೂರು, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳ ರೈತರಿಂದ ಖರೀದಿಸಲು ಅನುಮತಿ ನೀಡಲಾಗಿದೆ.