Operation Sindoor-ಭಾರತ-ಪಾಕಿಸ್ತಾನ ಯುದ್ದ ಆರಂಭ,ಪಾಕಿಸ್ತಾನದ ಮೇಲಿನ ವಾಯುದಾಳಿಯ ವೈರಲ್ ವಿಡಿಯೊ

<Operation sindoor>

Operation Sindoor-ಭಾರತ-ಪಾಕಿಸ್ತಾನ ಯುದ್ದ ಆರಂಭ,ಪಾಕಿಸ್ತಾನದ ಮೇಲಿನ ವಾಯುದಾಳಿಯ ವೈರಲ್ ವಿಡಿಯೊ

 Operation Sindoor-ಭಾರತ-ಪಾಕಿಸ್ತಾನ ಯುದ್ದ ಆರಂಭ,ಪಾಕಿಸ್ತಾನದ ಮೇಲಿನ ವಾಯುದಾಳಿಯ ವೈರಲ್ ವಿಡಿಯೊ


ಭಾರತ- ಪಾಕಿಸ್ತಾನ ಯುದ್ಧ ಆರಂಭವಾಗಿದೆ. ಪಹಲ್ಲಾಮ್ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದೆ. ಇದಕ್ಕೆ ' ' (Operation Sindoor) ಎಂದು ಹೆಸರಿಡಲಾಗಿದೆ. ಪಹಲ್ಲಾಮ್‌ನಲ್ಲಿ ನಡೆದ ಬರ್ಬರ ಭಯೋತ್ಪಾದಕ ದಾಳಿಯ ಸುಮಾರು ಎರಡು ವಾರಗಳ ನಂತರ ಈ ದಾಳಿಗಳು ನಡೆದಿವೆ. 

https://x.com/mrsinha_/status/1919891559165690161?s=46

2019ರಲ್ಲಿ ಪುಲ್ವಾಮಾ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದ್ದರು. ಏಪ್ರಿಲ್ 22 ರಂದು 26 ನಾಗರಿಕರನ್ನು ಬಲಿತೆಗೆದುಕೊಂಡ ಪಹಲ್ಲಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದವು. ಭಯೋತ್ಪಾದಕ ದಾಳಿಗಳನ್ನು ಯೋಜಿಸಲಾಗುತ್ತಿದ್ದ ಮತ್ತು ನಿರ್ದೇಶಿಸಲಾಗುತ್ತಿದ್ದ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ನೆಲೆಗಳ ಮೇಲೆ ಭಾರತ ದಾಳಿ ಮಾಡಿತು.

'ಆಪರೇಷನ್‌ ಸಿಂಧೂ‌ರ್' ಎಂಬ ಸಂಕೇತನಾಮದಡಿಯಲ್ಲಿ ರಾತ್ರಿಯಿಡೀ ನಡೆದ ನಿಖರ ದಾಳಿಯಲ್ಲಿ ಒಟ್ಟು ಒಂಬತ್ತು ಸ್ಥಳಗಳನ್ನು ಗುರಿಯಾಗಿಸಲಾಗಿತ್ತು. 

https://x.com/mrsinha_/status/1919876739066425610?s=46

"ನಮ್ಮ ಕ್ರಮಗಳು ಕೇಂದ್ರೀಕೃತವಾಗಿವೆ, ನಿಖರವಾಗಿವೆ. ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ನಾವು ಗುರಿಯಾಗಿಸಿಕೊಂಡಿಲ್ಲ. ಗುರಿಗಳ ಆಯ್ಕೆ ಮತ್ತು ದಾಳಿಯ ವಿಧಾನದಲ್ಲಿ ಭಾರತ ಗಣನೀಯ ಸಂಯಮವನ್ನು ಪ್ರದರ್ಶಿಸಿದೆ" ಎಂದು ಭಾರತ ಹೇಳಿದೆ. ''ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ'' ಎಂದಿದೆ. 
ಕೋಟ್ಲಿ, ಮುರಿಯ್ಕೆ, ಬಹಾವಲ್ಪು‌ರ್ ಮತ್ತು ಮುಜಫರಾಬಾದ್‌ನಲ್ಲಿರುವ ತಾಣಗಳ ಮೇಲೆ ಭಾರತ ದಾಳಿ ಮಾಡಿದೆ ಎಂದು ಪಾಕಿಸ್ತಾನದ ಡಿಜಿ ಐಎಸ್‌ಪಿಆ‌ರ್, ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್‌ ಚೌಧರಿ ಹೇಳಿದರು. ಮುರಿಡೈ ಹಫೀಜ್ ಸಯೀದ್‌ ನಡೆಸುತ್ತಿರುವ ಭಯೋತ್ಪಾದಕ ಗುಂಪಿನ ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿಯಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹಲ್ವಾಪುರವು ಮಸೂದ್ ಅಜ‌ರ್ ನಡೆಸುತ್ತಿರುವ ಜೈಶ್-ಎ-ಮೊಹಮ್ಮದ್‌ನ ನೆಲೆಯಾಗಿದೆ. 

https://x.com/mrsinha_/status/1919894286901928295?s=46