Podi nakshe-ನಿಮ್ಮ ಮೊಬೈಲ್ ನಲ್ಲೇ ಡೌನ್ಲೊಡ್ ಮಾಡಿಕೊಳ್ಳಿ ನಿಮ್ಮ ಪೋಡಿ ನಕ್ಷೆ

<Krushirushi> <Podi nakshe> <ಪೋಡಿ ನಕ್ಷೆ> <Swawalambi application> <ಕಾಲುದಾರಿ> <ಬಂಡಿದಾರಿ> <villagemap> <ಗ್ರಾಮನಕ್ಷೆ> <ಬಂಡಿಜಾಡು> <kaludari> <bandijadu>

Podi nakshe-ನಿಮ್ಮ ಮೊಬೈಲ್ ನಲ್ಲೇ ಡೌನ್ಲೊಡ್ ಮಾಡಿಕೊಳ್ಳಿ ನಿಮ್ಮ ಪೋಡಿ ನಕ್ಷೆ

Podi nakshe-ನಿಮ್ಮ ಮೊಬೈಲ್ ನಲ್ಲೇ ಡೌನ್ಲೊಡ್ ಮಾಡಿಕೊಳ್ಳಿ ನಿಮ್ಮ ಪೋಡಿ ನಕ್ಷೆ


ರೈತರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ಪೋಡಿ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ರಾಜ್ಯ ಸರ್ಕಾರವು ಅವಕಾಶ ನೀಡಲಾಗುತ್ತಿದೆ. ನೀವು ಪೋಡಿ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ.

ಡಿಜಿಟಲ್‌ ಆಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು.

ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ.

ಕುಟುಂಬದ ಸದಸ್ಯರ ಪಾಲುಗಾರಿಕೆ, ಭೂ ಆಸ್ತಿಯ ಕೆಲವು ಭಾಗ ಮಾರಾಟ, ದಾನಪತ್ರ, ನಿವೇಶನಕ್ಕೆ ಬಳಕೆ, ಭೂ ಪರಿವರ್ತನೆ ಸೇರಿ ಹಲವು ಚಟುವಟಿಕೆಗಳಿಗೆ ಪೋಡಿ ನಕ್ಷೆ ಅವಶ್ಯಕವಾಗಿದೆ. ಒಂದು ಸರ್ವೇ ನಂಬರಿನಲ್ಲಿ ಹಲವರ ಹೆಸರಿದ್ದರೆ ಮುಂದೆ ಸರ್ಕಾರದಿಂದ ಸೌಲಭ್ಯ ಪಡೆಯುವುದಕ್ಕೆ ತೊಂದರಯಾಗುತ್ತದೆ. ಜೊತೆಗೆ ಜಮೀನು ಮಾರಾಟ ಸಂದರ್ಭದಲ್ಲಿಯೂ ತೊಡಕಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ರಾಜ್ಯ ಸರ್ಕಾರವು ಮೊಬೈಲ್ ನಲ್ಲೇ ಪೋಡಿ ನಕ್ಷೆ ಪಡೆಯುವ ಹೊಸ ತಂತ್ರಾಂಶವನ್ನು ಬಿಡುಗಡೆಮಾಡಿದೆ.

ಪೋಡಿ ನಕ್ಷೆ ಮಾಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಸರ್ಕಾರವು ಈಗ ಆನ್ಲೈನ್ ವ್ಯವಸ್ಥೆಯನ್ನು ಮಾಡಿದೆ. ರೈತರು ಸ್ವತಃ ಅವರೆ ಮೊಬೈಲ್ ನಲ್ಲಿ ಜಮೀನಿನ ಪೋಡಿ ನಕ್ಷೆ ತಯಾರಿಸಿಕೊಳ್ಳಬಹುದು. ಸಹೋದರರು, ಸಂಬಂಧಿಕರು ಮನೆಯಲ್ಲಿಯೇ ಕುಳಿತು ತಮ್ಮ ಜಮೀನಿನ ಭಾಗ ಮಾಡಿಕೊಳ್ಳಲು ಇದು ಅವಕಾಶ ಕಲ್ಪಿಸಿದೆ.

ಈ ರೀತಿಯಾಗಿ ಮೊಬೈಲ್ ನಲ್ಲಿ ಪೋಡಿ ನಕ್ಷೆ ಪಡೆಯಬಹುದು

ಮೊದಲು ಅಧಿಕೃತ ವೆಬ್ ಸೈಟ್ https://bhoomojini.karnataka.gov.in/Service27  ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂ ಕಂದಾಯ ಇಲಾಖೆಯ ಮೋಜಿನಿ ಆನ್ಲೈನ್ ಪೇಜ್ ಓಪನ್ ಆಗುತ್ತದೆ.

ನಂತರ ರೈತರು ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು.

ನಂತರ ಮೊಬೈಲ್ ಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ನಂತರ ಎಡಭಾಗದಲ್ಲಿರುವ 3 ಅಡ್ಡ ಗೆರೆಗಳ ಮೇಲೆ ಕ್ಲಿಕ್ ಮಾಡಿ ಹೊಸ ಅರ್ಜಿ/New application ಮೇಲೆ ಕ್ಲಿಕ್ ಮಾಡಿ

ನಂತರ "ನಾನೇ ಸ್ಕೇಚ್ ಸಿದ್ದಪಡಿಸಿ ಅಪ್ಲೋಡ್ ಮಾಡುತ್ತೇನೆ" ಮೇಲೆ ಕ್ಲಿಕ್ ಮಾಡಿ

ನಂತರ ಅರ್ಜಿಯ ವಿಧ "ತತ್ಕಾಲ ಪೋಡಿ" select ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಿ Next ಮೇಲೆ ಕ್ಲಿಕ್ ಮಾಡಿ

ಪ್ರಕ್ರಿಯೆ ಪೂರ್ಣಗೊಳಿಸಿದರೆ ಈ ಕೆಳಗಿನಂತೆ ನಿಮ್ಮ ಪೋಡಿ ನಕ್ಷೆ ಸಿಗುತ್ತದೆ.

Kalu dari-ನಿಮ್ಮ ಜಮೀನಿಗೆ ಹೊಗಲು ಯಾರಾದರೂ ದಾರಿ ಬಿಡದಿದ್ದರೆ ಹೀಗೆ ಮಾಡಿ,ನಿಮ್ಮ ಗ್ರಾಮದ ಕಾಲು ದಾರಿ,ಬಂಡಿ ಜಾಡು ಇರುವ ಗ್ರಾಮನಕ್ಷೆ ಡೌನ್ಲೊಡ್ ಮಾಡಿಕೊಳ್ಳಿ-Village map - https://krushirushi.in/Kali-Dari-village-map-1769