Puc result 2024-ಪಿಯುಸಿ ಫಲಿತಾಂಶ 2024 ಪ್ರಕಟ,ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್

<Krushirushi> <Puc result 2024> <ಪಿಯುಸಿ ಫಲಿತಾಂಶ 2024> <puc result> <ಪಿಯುಸಿ ಫಲಿತಾಂಶ> <ಪಿಯುಸಿ ರಿಸಲ್ಟ್> <How to check puc result> <puc result link>

Puc result 2024-ಪಿಯುಸಿ ಫಲಿತಾಂಶ 2024 ಪ್ರಕಟ,ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್

Puc result 2024-ಪಿಯುಸಿ ಫಲಿತಾಂಶ 2024 ಪ್ರಕಟ,ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ(KSEAB) ಯು 2023-24 ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಾರ್ಚ್‌ 30ರ ಶನಿವಾರದಂದು ಪ್ರಕಟಿಸಲಿದೆ. ಮಂಡಳಿಯ ವೆಬ್‌ಸೈಟ್‌ ನಲ್ಲಿ ಫಲಿತಾಂಶಗಳು ಅಂದು ಬೆಳಿಗ್ಗೆ 9ರಿಂದ 11 ರೊಳಗೆ ಪ್ರಕಟವಾಗಲಿದೆ.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

www.karresults.nic.in

ನಂತರ ರೋಲ್‌ ನಂಬರ್‌ ಹಾಕಿ ನಿಮ್ಮ Subject ಸೆಲೆಕ್ಟ್ ಮಾಡಿ,Submit ಮೇಲೆ ಕ್ಲಿಕ್ ಮಾಡಿದರೆ,ನಿಮ್ಮ ಫಲಿತಾಂಶ ಚೆಕ್ ಮಾಡಬಹುದು

ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯು ಈ ಬಾರಿಯ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ 12 ರಿಂದ 27 ರವರೆಗೆ ನಡೆಸಿತ್ತು. ಕರ್ನಾಟಕದಲ್ಲಿ ಏಕಕಾಲಕ್ಕೆ ಪ್ರಥಮ ಪಿಯುಸಿಯ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ಪರೀಕ್ಷೆಗಳನ್ನು ಎದುರಿಸಿದ್ದರು.

ಈ ಪರೀಕ್ಷೆಗಳ ಮೌಲ್ಯಮಾಪನವೂ ಮುಗಿದಿದ್ದು, ಫಲಿತಾಂಶವನ್ನು ಈ ಬಾರಿ ಬೇಗನೇ ಪ್ರಕಟಿಸಲು ಮಂಡಳಿ ಮುಂದಾಗಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿಯೇ ಫಲಿತಾಂಶಗಳು ಲಭ್ಯವಾಗಲಿದ್ದು, ಮಾರ್ಚ್‌ 30ರಂದು ಮೊಬೈಲ್‌ ಮೂಲಕ ಇಲ್ಲವೇ ಇಂಟರ್‌ನೆಟ್‌ ಸೆಂಟರ್‌ಗಳು ಇಲ್ಲವೇ ಮನೆಯಲ್ಲಿಯೇ ಕುಳಿತು ನೆಟ್‌ನಲ್ಲಿ ವೀಕ್ಷಿಸಲು ಅವಕಾಶವಿದೆ.

ಅದೇ ದಿನ ಕಾಲೇಜುಗಳಲ್ಲಿಯು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕಾಲೇಜುಗಳಲ್ಲಿಯೂ ಫಲಿತಾಂಶಗಳನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದು.

ಪ್ರತಿ ವರ್ಷ ಪ್ರಥಮ ಪಿಯುಸಿಯ ವಾರ್ಷಿಕ/ ಸಪ್ಲಿಮೆಂಟರಿ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಪದವಿಪೂರ್ವ ಶಿಕ್ಷಣ ಇಲಾಖೆ ಮೂಲಕ ರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯು ಆಯೋಜಿಸುತ್ತಾ ಬರುತ್ತಿದೆ. ಇದಕ್ಕಾಗಿ ಪ್ರತ್ಯೇಕ ವೇಳಾಪಟ್ಟಿಯನ್ನು ಮೊದಲೇ ಪ್ರಕಟಿಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಬಹುತೇಕ ವಿಷಯಗಳ ಪರೀಕ್ಷೆಗಳು ನಡೆದಿವೆ. ಕೆಲವು ಪರೀಕ್ಷೆಗಳು ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 12.30ರವರೆಗೆ ನಡೆದಿವೆ.

ಇದಲ್ಲದೇ ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಇಲ್ಲವೇ ಪರೀಕ್ಷೆಯನ್ನು ಬರೆಯಲಾಗದವರಿಗೆ ಮೇ ತಿಂಗಳಲ್ಲಿ ಸಪ್ಲಿಮೆಂಟರಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಶುಲ್ಕ ತುಂಬಲು ಏಪ್ರಿಲ್‌ 20ರವರೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಆಯಾ ಜಿಲ್ಲಾ ಮಟ್ಟದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಕಾಲೇಜುಗಳ ಪ್ರಾಂಶುಪಾಲರಿಗೆ ಸಪ್ಲಿಮೆಂಟರಿ ಪರೀಕ್ಷೆ ವಿವರ ಪ್ರಕಟಿಸುವಂತೆ ಸೂಚಿಸಲಾಗಿದೆ. ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ತುಂಬಿ ಪರೀಕ್ಷೆ ಎದುರಿಸಲು ಬೇಕಾದ ಸಹಕಾರ ನೀಡುವಂತೆಯೂ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.