Rabi crop survey-ಹಿಂಗಾರು ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ
<Krushirushi> <ಬೆಳೆ ಸಮಿಕ್ಷೆ> <ಬೆಳೆವಿಮೆ> <crop insurance> <ಬೆಳೆಸಮಿಕ್ಷೆ> <belevime> <crop survey> <PMFBY> <WBCIS> <Crop loss> <MSP> <bele samikshe> <bele vime> <belesamikshe> <crop survey 2024-25> <ಬೆಂಬಲ ಬೆಲೆ> <ಬೆಳೆಪರಿಹಾರ> <ಬೆಳೆ ಹಾನಿ> <bele parihara> <bele parihara list>

Rabi Crop survey 2024-25:ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ-Hingaru bele samikshe
ಕರ್ನಾಟಕ ಸರ್ಕಾರ ಈ ಆಡಳಿತ ಮತ್ತು ಕೃಷಿ ಇಲಾಖೆ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ(Rabi crop survey) ರೈತರ ಆಪ್ ಬಿಡುಗಡೆ ಮಾಡಿದ್ದು, ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ 2024-25 ಆಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬಹುದು.
ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಹಿಂಗಾರು ರೈತರ ಬೆಳೆ ಸಮೀಕ್ಷೆ 2024-25 ಎಂಬ ಮೊಬೈಲ್ ಆ್ಯಪ್ ಗೂಗಲ್ ಪ್ಲೇಸ್ಟೋರ್ ನಿಂದ ಡೌನ್‌ಲೋಡ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.csk.farmer23_24.cropsurvey&pli=1
ಮೊದಲು Ekyc ಮೂಲಕ ಆಧಾರ್ ದೃಡಿಕರಿಸಿ ಮೇಲೆ ಕ್ಲಿಕ್ ಮಾಡಿ
ರೈತರ ಅಧಾರ್ ಕಾರ್ಡ ನಂಬರ್ ಅನ್ನು ಹಾಕಿ ಸಹಮತಿ ಇದೆ ಎಂದು ಟಿಕ್ ಮಾಡಿಕೊಂಡು ಕೆಳಗಡೆ ದೃಡೀಕರಣ ವಿಧಾನವನ್ನು ಆಯ್ಕೆ ಮಾಡಿ ಅಲ್ಲಿ OTP ಮೇಲೆ ಕ್ಲಿಕ್ ಮಾಡಿ "ಓಟಿಪಿ ಪಡೆಯಿರಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.
ತದನಂತರ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ಹಾಕಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಎಲ್ಲಾ ವಿವರ ಇಲ್ಲಿ ತೋರಿಸುತ್ತದೆ. ಇಲ್ಲಿ ಮೊಬೈಲ್ ನಂಬರ್ ಹಾಕಿ "ಸಕ್ರಿಯಗೊಳಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ OTP ಅನ್ನು ನಮೂದಿಸಿ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಸಕ್ರಿಯಗೊಳಿಸಿಕೊಳ್ಳಬೇಕು.
ಇದಾದ ಬಳಿಕ ನಿಮ್ಮ ಸರ್ವೆ ನಂಬರ್ ಗಳು ಇಲ್ಲಿ ತೋರಿಸುತ್ತವೆ ನಂತರ ನಿಮ್ಮ ಜಮೀನಿನ್ನು ಭೇಟಿ ಮಾಡಿ ಒಂದು ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ "ಬೆಳೆ ವಿವರ ದಾಖಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಸ್ತುತ ಬೆಳೆದಿರುವ ಬೆಳೆ ವಿವರವನ್ನು ಹಾಕಿ ಬೆಳೆಯ 2 ಪೋಟೋ ಕ್ಲಿಕ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.
ಒಂದೊಮ್ಮೆ ನಿಮ್ಮ ಸರ್ವೆ ನಂಬರ್ ಗಳು ಕಾಣಿಸದೇ ಇದ್ದಲ್ಲಿ "ಸರ್ವೆ ನಂಬರ್ ಸೇರಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಬಿಟ್ಟು ಹೋದ ಸರ್ವೆ ನಂಬರ್ ಅನ್ನು ಸೇರಿಸಬಹುದು.
ನಿಮ್ಮ ಜಮೀನಿನ ಬೆಳೆ ವಿವರ ದಾಖಲಿಸಿದ ಬಳಿಕ ಕೊನೆಯಲ್ಲಿ "ಅಪ್ಲೋಡ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ನೀವು ಮಾಡಿರುವ ಬೆಳೆ ಸಮೀಕ್ಷೆ ವರದಿಯನ್ನು ಅಪ್ಲೋಡ್ ಮಾಡಬೇಕು ಇಲ್ಲವಾದಲ್ಲಿ ಈ ವಿವರವು ನಿಮ್ಮ ಮೊಬೈಲ್ ನಲ್ಲೇ ಉಳಿದು ಬಿಡುತ್ತದೆ.
ಸದರಿ ಮಾಹಿತಿಯನ್ನು ಬೆಳೆ ವಿಮೆ(crop insurance), ಬೆಳೆ ನಷ್ಟ ಪರಿಹಾರ(crop loss), ಬೆಂಬಲ ಬೆಲೆ(MSP) ಮತ್ತು ಸರ್ಕಾರದ ವಿವಿಧ ಯೋಜನೆ ಅಡಿ ಸವಲತ್ತುಗಳನ್ನು ಒದಗಿಸಲು ಆರ್ ಟಿ ಸಿ ಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಬೇಕು.
ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಾದ್ಯವಾಗುತ್ತದೆ.
ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ತಪ್ಪದೇ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರ ದಾಖಲಾಗದಿದ್ದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮದ ಖಾಸಗಿ ನಿವಾಸಿ (ಪಿ.ಆರ್), ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾ ಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಟೋಲ್ ಫ್ರೀ ಸಂಖ್ಯೆ 8448447715ಗೆ ಸಂಪರ್ಕಿಸಬಹುದಾಗಿದೆ