Rain alert-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಸುರಿಯಲಿದೆ ಮಳೆ

Rain alert-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಸುರಿಯಲಿದೆ ಮಳೆ

Rain alert-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ  ಸುರಿಯಲಿದೆ ಮಳೆ

Rain alert-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ  ಸುರಿಯಲಿದೆ ಮಳೆ

ಕರಾವಳಿ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈಗಿನಂತೆ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಜುಲೈ 16ರಿಂದ 20ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ ಜಿಲ್ಲೆಯ ಒಂದೆರಡು ಕಡೆ ಮಳೆಯ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಈಗಿನಂತೆ ಜುಲೈ 16ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಬೆಂಗಳೂರಿಗೆ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಬರಲಿದೆ.
ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಹ ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎರಡು ದಿನ ಯೆ ಲೆ ಅಲರ್ಟ್ ನೀಡಲಾಗಿದೆ.
ಅರಬ್ಬಿ ಸಮುದ್ರ ಭಾಗದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿ ರುವ ಕಾರಣ ಮುಂದಿನ ಮೂರುದಿನ ಗಳಲ್ಲಿ ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಜುಲೈ 16 ಮತ್ತು 17 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಬರಲಿದ್ದು, ಎರಡು ದಿನ 'ಆರೆಂಜ್ ಅಲರ್ಟ್‌' ನೀಡಲಾಗಿದೆ.