Rain forecast-ಇಂದಿನಿಂದ ಮಾರ್ಚ್ 27ರವರೆಗೆ ಜಿಲ್ಲಾವಾರು ಮಳೆ ಮಾಹಿತಿ
<Krushirushi> <Rain alert> < ಮಳೆ ನಕ್ಷತ್ರಗಳು 2025> <Male nakshatragalu> <Male 2025> <male Mahiti> <Male munsuchane> <male> <rain forecast> <ಮಳೆ ನಕ್ಷತ್ರ> <ಮಳೆ ನಕ್ಷತ್ರಗಳು> <ಮಳೆ> <ಮಳೆ ಮಾಹಿತಿ> <ಮಳೆ ಮುನ್ಸೂಚನೆ> <ಮುಂಗಾರು ಮಳೆ> <ರೈತ> <ಬೆಳೆಸುದ್ದಿ>

Rain forecast-ಇಂದಿನಿಂದ ಮಾರ್ಚ್ 27ರವರೆಗೆ ಜಿಲ್ಲಾವಾರು ಮಳೆ ಮಾಹಿತಿ
ಗಳೂರು: ಬಿರುಬಿಸಿಲಿನ ನಡುವೆ ರಾಜ್ಯದ ಹಲವೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಿದ್ದು, ಮಾ.22ರಂದು ಕೂಡ ಮಳೆಯಾಗುವ (Weather Forecast) ಮುನ್ಸೂಚನೆ ಸಿಕ್ಕಿದೆ. ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ವಿಜಯನಗರ, ಹಾಸನ, ವಿಜಯನಗರ, ಹಾಸನ, ವಿಜಯನಗರ, ಹಾಸನ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗುವ (Heavy Rain) ಸಂಭವವಿದೆ.
ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು, ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ ಇರಲಿದ್ದು, ರಾತ್ರಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 °C ಮತ್ತು 21°C ಆಗಿರಬಹುದು.
ಮಾ.27ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಮಳೆ
ಮಾ.23ರಂದು ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಮಗಳೂರು, ಚಿಕ್ಕಮಗಳೂರು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು, ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.24ರಂದು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.25ರಂದು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.26ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.27ರಂದು ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.