Ration card thiddupadi-ರೇಷನ್ ಕಾರ್ಡ್ ತಿದ್ದುಪಡಿಗೆ ಮಾರ್ಚ್ 31 ಕೊನೆಯ ದಿನಾಂಕ, ರೇಷನ್ ಕಾರ್ಡ್ ನಂಬರ್ ಹಾಕಿ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್><Ration Card thiddupadi Status> <Ration Card correction status> <amendment> Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <direct benefit transfer> <DBT> <ಆಧಾರ್> <DBT Karnataka> <Annabhagya status> <Annabhagya scheme> <ರೇಷನ್ ಕಾರ್ಡ್ ನಂಬರ್> <ಹಣ> <bank> <Ration Card status> <ರೇಷನ್ ಕಾರ್ಡ್ ಸ್ಥಿತಿ> <Gruhalakshmi> <ರೇಷನ್ ಕಾರ್ಡ್ ಲಿಸ್ಟ್>

Ration card thiddupadi-ರೇಷನ್ ಕಾರ್ಡ್ ತಿದ್ದುಪಡಿಗೆ ಮಾರ್ಚ್ 31 ಕೊನೆಯ ದಿನಾಂಕ
ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.
ಮಾರ್ಚ್ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. https://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.
ಸದಸ್ಯರ ಸೇರ್ಪಡೆ
* ಪೋಟೋ ಬದಲಾವಣೆ
* ಹೆಸರು ಡಿಲೆಟ್
* ಅಂಗಡಿ. ನಂ. ಬದಲಾವಣೆ
* ಹೆಸರು ತಿದ್ದುಪಡಿ
* ಮುಖ್ಯಸ್ಥರ ಬದಲಾವಣೆ
ಅರ್ಜಿ ಸಲ್ಲಿಸಲು ದಾಖಲಾತಿಗಳು
1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ
2. ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
3. ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ.
ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ಮದುವೆ ಪ್ರಮಾಣ ಪತ್ರ
ಪೋಷಕರ ಪಡಿತರ ಚೀಟಿ ಅಗತ್ಯ.
ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ
ಮಗುವಿನ ಜನನ ಪ್ರಮಾಣಪತ್ರ
ಹೆತ್ತವರ ಆಧಾರ್ ಕಾರ್ಡ್
ಈ ಪ್ರಕ್ರಿಯೆಯನ್ನು ಅನುಸರಿಸಿ
ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಇದರ ನಂತರ ನೀವು ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ನೀವು ಲಾಗಿನ್ ಆಗಬೇಕು. ಇದರ ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡುತ್ತೀರಿ, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ಪಡೆಯುತ್ತೀರಿ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ಇದರ ನಂತರ ನೀವು ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.
ಅದರೊಂದಿಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು. ಫಾರ್ಮ್ ಅನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು. ಇದರ ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು. ಹತ್ತಿರದ ಪಡಿತರ ಅಂಗಡಿಗೆ ಹೋಗುವ ಮೂಲಕ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದು.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.
ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.
Ration card thiddupadi status-ರೇಷನ್ ಕಾರ್ಡ್ ತಿದ್ದುಪಡಿಗೆ ಡಿಸೆಂಬರ್ 31ರವರೆಗೆ ಅವಕಾಶ,ರೇಷನ್ ಕಾರ್ಡ್ ನಂಬರ್ ಹಾಕಿ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ e-status ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ Amendment requests ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಅಥವಾ Acknowledgment ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ಆಹಾರ ಇಲಾಖೆಗೆ ಸಲ್ಲಿಸಲಾಗಿದೆ ಹಾಗೂ ಆಹಾರ ನೀರಿಕ್ಷರಿಂದ ಪ್ರಕ್ರಿಯೆಗೆ ಕಾಯುತ್ತಿದೆ ಎಂದು ತೋರಿಸಿದರೆ ನಿಮ್ಮ ತಿದ್ದುಪಡಿ ಅರ್ಜಿ ಇನ್ನೂ ಬಾಕಿ ಇದೆ ಎಂದು ಅರ್ಥ
ಈ ಕೆಳಗಿನಂತೆ ತೋರಿಸಿದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಅರ್ಥ
(ಸೂಚನೆ-ಆಹಾರ ವೆಬ್ಲೈಟ್ ಓಪನ್ ಆಗದಿದ್ದರೆ,10 ಗಂಟೆಯ ನಂತರ ಪ್ರಯತ್ನಿಸಿ)