ಕೃಷಿ ಸಾಲ ಮನ್ನಾ ಪ್ರಸ್ತಾವನೆ ಪರಿಶೀಲಿಸುತ್ತೇನೆ: ಬೆಳೆ ನಷ್ಟದಲ್ಲಿರುವ ರೈತರಿಗೆ ಸಿಎಂ ಭರವಸೆ
ಕೃಷಿ ಸಾಲ ಮನ್ನಾ ಪ್ರಸ್ತಾವನೆ ಪರಿಶೀಲಿಸುತ್ತೇನೆ: ಬೆಳೆ ನಷ್ಟದಲ್ಲಿರುವ ರೈತರಿಗೆ ಸಿಎಂ ಭರವಸೆ

ಸಹಕಾರಿ ಸಂಘಗಳು/ಬ್ಯಾಂಕ್‌ಗಳಿಂದ ರೈತರು ಪಡೆದ ಸಾಲವನ್ನು ಮನ್ನಾ ಮಾಡುವ ಪ್ರಸ್ತಾವನೆ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು.
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಈ ಬಾರಿಯ ಮಳೆಗಾಲದಲ್ಲಿ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ರೈತರು ಭಾರಿ ಬೆಳೆ ನಷ್ಟ ಅನುಭವಿಸಿದ್ದಾರೆ
."ಕೆಲವು ಸಂಘಟನೆಗಳು ಸಹಕಾರಿ ಸಂಘಗಳು/ಬ್ಯಾಂಕ್‌ಗಳಿಂದ ರೈತರು ಪಡೆದಿರುವ ಕೃಷಿ ಸಾಲಗಳನ್ನು ಮನ್ನಾ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿವೆ. ಸರ್ಕಾರ ಈ ಪ್ರಸ್ತಾವನೆಯನ್ನು ಪರಿಶೀಲಿಸಲಿದೆ ಎಂದು ಹೇಳಿದರು.
ಬೆಳೆ ನಷ್ಟ ಪರಿಹಾರದ ಕುರಿತು, ಜಿಲ್ಲೆಗಳಲ್ಲಿ ಕಂದಾಯ ಮತ್ತು ಕೃಷಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸುತ್ತಿದ್ದು, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಪರಿಹಾರ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಕಳೆದ ವರ್ಷ ಕರ್ನಾಟಕ ಸರ್ಕಾರ ಮನವಿ ಪತ್ರ ಸಲ್ಲಿಸುವಲ್ಲಿ ವಿಳಂಬ ಮಾಡಿದೆ ಎಂಬ ಕೇಂದ್ರದ ಆರೋಪಗಳನ್ನು ಸಿಎಂ ನಿರಾಕರಿಸಿದರು. ನಮ್ಮ ಪಾಲಿನ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಲಾಗಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗ ಮುಖ್ಯಮಂತ್ರಿಗಳು ನಂತರ ಕಲಬುರಗಿ ತಾಲ್ಲೂಕಿನ ಫರ್ತಾಬಾದ್‌ನಲ್ಲಿರುವ ಕೃಷಿ ಭೂಮಿಗೆ ಭೇಟಿ ನೀಡಿದರು. ಈ ವೇಳೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಮತ್ತು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರಣಮ್ ಅವರು ಬೆಳೆ ನಷ್ಟದ ಬಗ್ಗೆ ಸಿಎಂಗೆ ವಿವರಿಸಿದರು.
ಈ ಮಧ್ಯೆ, ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಡಂಗಾಪುರ್ ಅವರು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಈ ಋತುವಿನಲ್ಲಿ ಭಾರಿ ಮಳೆಯಾಗಿದ್ದರಿಂದ ರೈತರು ಮೂರು ಬಾರಿ ತೊಗರಿ ಕೃಷಿ ಮಾಡಿದ್ದಾರೆ. ಆದರೆ ತೊಗರಿ, ಹಸಿರು ಮತ್ತು ಉದ್ದಿನ ಬೇಳೆ ಸೇರಿದಂತೆ ಎಲ್ಲಾ ಬೆಳೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ಬೆಳೆ ನಷ್ಟಕ್ಕೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ರಬಿ ಹಂಗಾಮಿಗೆ ಬೀಜ ಮತ್ತು ರಸಗೊಬ್ಬರಗಳ ಮೇಲೆ ಸಬ್ಸಿಡಿ ನೀಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಳೆ ನಿಂತ ತಕ್ಷಣ, ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಅಂತಿಮ ಸಮೀಕ್ಷೆ ನಡೆಸುತ್ತಾರೆ. ಜಂಟಿ ಸಮೀಕ್ಷಾ ವರದಿ ಬಂದ ನಂತರ, ಸರ್ಕಾರ ಪರಿಹಾರ ಬಿಡುಗಡೆಗೆ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.